Horoscope: ರಾಶಿಭವಿಷ್ಯ; ಈ ರಾಶಿಯವರಿಗೆ ಊಹಿಸದೇ ಇರುವ ಕಡೆಯಿಂದ ಬೇಕು ಎನಿಸಿದ ಸಂಪತ್ತು ದೊರೆಯುವುದು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 26 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯವರಿಗೆ ಊಹಿಸದೇ ಇರುವ ಕಡೆಯಿಂದ ಬೇಕು ಎನಿಸಿದ ಸಂಪತ್ತು ದೊರೆಯುವುದು
ಭವಿಷ್ಯImage Credit source: freepik
Follow us
Rakesh Nayak Manchi
|

Updated on: Mar 26, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 26) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಹಸ್ತಾ, ಯೋಗ : ಧ್ರುವ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:41 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:36 ರಿಂದ 11:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38 ರಿಂದ 02:09

ಸಿಂಹ ರಾಶಿ : ನಿಮಗೆ ಸಾಲದಿಂದ ಬಿಡುಗಡೆಯಾಗುವ ಸೂಚನೆ ಸಿಗುವುದು. ನಿಮ್ಮ ಶ್ರಮಕ್ಕೆ ಯೋಗ್ಯವಾದ ಆದಾಯವು ಸಿಗದೇ ಬೇಸರವಾಗಬಹುದು. ಆಹಾರದ ಸಮಯವು ಅನಿವಾರ್ಯ ಕಾರಣದಿಂದ ಬದಲಾಗುವುದು. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ನಿರೀಕ್ಷಿಸುತ್ತ ಇರುವಿರಿ. ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಆಯಾಸವು ಅಡ್ಡಿಬರಬಹುದು. ನಿಮ್ಮ ಜಾಣತನದಿಂದ ಕೆಲವನ್ನು ಕಳೆದುಕೊಳ್ಳಬೇಕಾಗುವುದು.

ಕನ್ಯಾ ರಾಶಿ : ಇಂದು ಆಪ್ತರ ಜೊತೆ ಮಾಡುವ ಪ್ರಯಾಣದಿಂದ ಹಲವು ಸಂಗಾತಿಗಳ ಪರಿಚಯವಾಗುವುದು. ಹಳೆಯ ಸ್ನೇಹಿತರ ಜೊತೆ ಕಲಹವಾಗಿ ದೂರಾಗುವ ಸಾಧ್ಯತೆ ಇದೆ. ಎಷ್ಟೋ ದಿನಗಳ ಹಿಂದಿನ ಮನದ ಆಸೆಗಳನ್ನು ನೆರವೇರಿಸಿಕೊಳ್ಳುವಿರಿ. ಇಂದು ಸ್ವಂತ ಕಾರ್ಯಗಳಿಗೆ ಸಮಯವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗುವುದು. ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುವುದು. ಅತಿಯಾದ ಆಡಂಬರವು ನಿಮಗೆ ಇಷ್ಟವಾಗದು. ನಿಮ್ಮ ವಿದ್ಯಾಪ್ರಗತಿಯು ಬಹಳ ಯಶಸ್ವಿಯಾಗುವುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸತ್ಪಾತ್ರರಿಗೆ ದಾನವನ್ನು ಮಾಡಿ. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು. ಬೆನ್ನಿನ ನೋವು ನಿಮ್ಮ ಕಾರ್ಯಗಳ‌ ಏಕಾಗ್ರತೆಯನ್ನು ಕೆಡಿಸೀತು. ನಿರುದ್ಯೋಗವು ನಿಮ್ಮ ಮನಸ್ಸಿಗೆ ಘಾಸಿಮಾಡಬಹುದು.

ತುಲಾ ರಾಶಿ : ನಿಮಗೆ ವಾಹನ ಚಾಲನೆಗೆ ಎರಡು ಮನಸ್ಸು ಇರಲಿದೆ. ಇನ್ನೊಬ್ಬರ ಮಾತನ್ನು ಸಹಿಸಲಾಗದೇ ಸಿಟ್ಟಾಗುವಿರಿ. ಇಂದು ನಿಮ್ಮ ವ್ಯಾಪರಕ್ಕೆ ಹೊಸ ಕಳೆ ಬರಬಹುದು. ಸಹೋದ್ಯೋಗಿಗಳು ಹಿರಿಯ ಅಧಿಕಾರಿಗಳ ಮುಂದೆ ನಿಮ್ಮನ್ನು ಪ್ರಶಂಸಿಸಬಹುದು. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ‌ ಮಾಡುವುದು. ಬಹಳ ದಿನಗಳ ಅನಂತರ ಮನೆಯರ ಜೊತೆ ಸಮಯವನ್ನು ಕಳೆಯುವಿರಿ. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ನಿಮ್ಮ ಉತ್ತಮ ಹವ್ಯಾಸವು ಪ್ರಯೋಜನಕ್ಕೆ ಬಂದೀತು. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು. ಮನೆ ನಿರ್ಮಾಣದ ಕನಸು ನನಸಾಗಬಹುದು.

ವೃಶ್ಚಿಕ ರಾಶಿ : ಇಂದು ಮನೋರಂಜನೆಗೆ ಹೆಚ್ಚು ಸಮಯ ಕೊಡಬೇಕಾಗುವುದು. ಹಣಕಾಸಿನ ವಿಚಾರವನ್ನು ಮಾತನಾಡುವಾಗ ಎಚ್ಚರಿಕೆ ಬೇಕು. ಸಂಗಾತಿ ನಿಮ್ಮಿಂದ ಒತ್ತಡವಾಗಬಹುದು. ಇಂದು ಉದ್ಯಮದಲ್ಲಿ ಬರುವ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ತಂದೆಗೆ ಬೇಕಾದ ಹಣವನ್ನು ನೀವು ಕೊಟ್ಟು ಮುನ್ನಡೆಸುವಿರಿ. ಮೇಲಿಂದ ಮೇಲೆ‌ ಬೀಳುವ ಪೆಟ್ಟಿನಿಂದ ಮನಸ್ಸು ದುರ್ಬಲವಾಗಬಹುದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಆದಾಯಕ್ಕೆ ಯಾರಿಂದಲಾದರೂ ಅಡ್ಡಿಯಾಗಿ, ಸಿಟ್ಟುಗೊಳ್ಳುವಿರಿ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ಪುತ್ರನಿಂದ ನಿಮಗೆ ಸಂತೋಷವು ಸಿಗಲಿದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು