Horoscope: ರಾಶಿಭವಿಷ್ಯ; ಈ ರಾಶಿಯವರಿಗೆ ನಿಮ್ಮ ಆಪ್ತರು ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು-ಎಚ್ಚರ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್ 29) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವಜ್ರ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:06 ರಿಂದ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:03 ರಿಂದ 09:34
ಸಿಂಹ ರಾಶಿ : ಎಲ್ಲ ವಿಚಾರಕ್ಕೂ ತುರ್ತು ಉತ್ತರ ಬೇಡ. ಸ್ವಲ್ಪ ಯೋಜಲಚನೆಗೆ ಅವಕಾಶವಿರಲಿ. ನಿಮ್ಮ ಮುಂಗೋಪದಿಂದ ನಿಮ್ಮ ಬಳಿ ಮಾತನಾಡಲು ಭಯಪಡಬಹುದು. ಸಣ್ಣಪುಟ್ಟ ವಿಚಾರಕ್ಕೆ ಉದ್ವೇಗಕ್ಕೊಳಗಾಗುವಿರಿ. ಹಣದ ಅಪವ್ಯಯದಿಂದ ದಿನದ ಅಂತ್ಯದಲ್ಲಿ ಮಾನಸಿಕವಾಗಿ ಕುಗ್ಗುವಿರಿ. ವ್ಯಾಪಾರ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಫಲಪ್ರದವಾಗುವುದಿಲ್ಲ. ನೀವು ಗೌರವವನ್ನು ಪಡೆಯುತ್ತೀರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು. ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನಸಂಚಾರದಿಂದ ಆಯಾಸವಾಗುವುದು.
ಕನ್ಯಾ ರಾಶಿ : ಯಾರದೋ ಕಾರಣದಿಂದ ಹೊಸ ಉದ್ಯೋಗವನ್ನು ಪಡೆಯುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ. ಹೊಸ ಹೆಜ್ಜೆ ಇಡುವಾಗ ಹೆಚ್ಚು ಆಲೋಚಿಸಿ. ಸಮಯ ವ್ಯರ್ಥ ಮಾಡಕೊಂಡು ಅನಂತರ ಪಶ್ಚಾತಾಪಪಡಬೇಕಾದೀತು. ಇಂದು ನೀವು ಸ್ವಂತ ಕೆಲಸಕ್ಕಾಗಿ ಸಾಕಷ್ಟು ಓಡಾಟ ಹಾಗೂ ಖರ್ಚನ್ನು ಮಾಡಬೇಕಾದೀತು. ನೀವು ಗುರುವಿನ ಬಗ್ಗೆ ಸಂಪೂರ್ಣ ಭಕ್ತಿ ಮತ್ತು ನಿಷ್ಠೆಯನ್ನು ಇಟ್ಟುಕೊಳ್ಳುವಿರಿ. ಇಂದು, ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಬೇಡದ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ.
ತುಲಾ ರಾಶಿ : ಹಲವು ಕಾರ್ಯಗಳಿಂದ ಈ ದಿನ ಬಹಳ ಒತ್ತಡವಿರುವುದು. ವ್ಯವಹಾರ ಮತ್ತು ಕುಟುಂಬವನ್ನು ನೀವು ಸರಿದೂಗಿಸುಕೊಂಡು ಹೋಗುವುದು ಮುಖ್ಯವಾಗುವುದು. ಸ್ವಲ್ಪ ಸಮಯ ಏಕಾಂತದಲ್ಲಿದ್ದು ಮನಸ್ಸನ್ನು ಏಕಾಗ್ರಗೊಳಿಸುವಿರಿ. ನಿಮ್ಮ ಎಲ್ಲ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಕಷ್ಟಕರವಾದ ಕಾರ್ಯಗಳೂ ಭಾರವಾಗದೇ ಇರಬಹುದು. ಪ್ರತಿಯೊಂದು ವಿಷಯದಲ್ಲೂ ನಿಮ್ಮ ಪೋಷಕರಿಂದ ನೀವು ಸಂತೋಷ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ಅನಗತ್ಯ ಖರ್ಚು ಮಾಡುವ ಸಾಧ್ಯತೆಯೂ ಇದೆ. ಆಪ್ತರು ನಿಮಗೆ ಆತಿಥ್ಯವನ್ನು ಕೊಡಿಸುವರು. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವುದು. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ.
ವೃಶ್ಚಿಕ ರಾಶಿ : ನಿಮಗೆ ಯಾರದೋ ಮೂಲಕ ಅನಿರೀಕ್ಷಿತವಾಗಿ ಹಣ ಕೈ ಸೇರುವುದು. ನಿಮ್ಮ ಬಹುದಿನದ ಸಮಸ್ಯೆಯು ಬಗೆಹರಿಯಲಿದೆ. ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಉತ್ತಮ ವಿಚಾರಗಳ ಕಡೆ ಗಮನವಿರಲಿ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಗಟ್ಟಿಯಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು.




