
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್ 18) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಆಯುಷ್ಮಾನ್, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:10 ರಿಂದ ಮಧ್ಯಾಹ್ನ 09:40ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:10 ರಿಂದ 12:41ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:41 ರ ವರೆಗೆ.
ಧನು ರಾಶಿ : ಇಂದು ನಿಮ್ಮ ನಿಗದಿತ ಸಮಯವು ಮತ್ಯಾರದೋ ಕಾರಣದಿಂದ ಬದಲಾಗಬಹುದು. ನಿಮ್ಮ ಖರ್ಚನ್ನು ನಿಯಂತ್ರಿಸುವ ಯೋಚನೆ ಮಾಡಲೇ ಬೇಕು. ನಿಮಗೇ ನಿಮ್ಮ ಆತ್ಮವಿಶ್ವಾಸದ ಬಗ್ಗೆ ಇಂದು ಸಂದೇಹ ಬರಬಹುದು. ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಯಾರಾದರೂ ಮಾಡುವರು. ಹೊಸದಾಗಿ ಆರಂಭಿಸಿದ ಉದ್ಯಮದ ಫಲವು ಒಂದೊಂದಾಗಿಯೇ ಸಿಗುತ್ತಿರುವುದು ನಿಮಗೆ ಸಂತೋಷವನ್ನು ಕೊಡುವುದು. ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ ಮನಸ್ಸಿನಿಂದ ಮಾತನಾಡುವಿರಿ. ನೀವು ಮಾಡುವ ಕಾರ್ಯದಲ್ಲಿ ಧೈರ್ಯವನ್ನು ಕಳೆದುಕೊಳ್ಳುವುದು ಬೇಡ.
ಮಕರ ರಾಶಿ : ಇಂದು ನೀವು ಹಿರಿಯ ಮಾತಿನ ಮೇಲೆ ಅನಾದರ ಬರುವುದು. ಇದರಿಂದ ಅವರು ನಿಮ್ಮ ಮೇಲೆ ಸಿಟ್ಟಾಗಬಹುದು. ನಿಮಗೆ ಬಂದ ಅವಕಾಶವನ್ನು ಮತ್ಯಾರಿಗೋ ಬಿಟ್ಟುಕೊಡಬೇಕಾಗುತ್ತದೆ. ಚಾತುರ್ಯದಿಂದ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಸಂಗಾತಿಯ ಬಗ್ಗೆ ನಿಮ್ಮ ನಿಲವು ಬದಲಾಗಬಹುದು. ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕಾರ್ಯವನ್ನು ಮಾಡಲು ಓಡಾಟ ಮಾಡುವಿರಿ. ಯಾರದೋ ಅಪರಿಚಿತರ ಸಂಪರ್ಕವನ್ನು ಮಾಡಬೇಕಾದೀತು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು, ಎಚ್ಚರಿಕೆಯಿಂದ ಇರಿ.
ಕುಂಭ ರಾಶಿ : ನೀವು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಬೇಡ. ಮಕ್ಕಳಿಗೆ ಒಂದೇ ರೀತಿಯ ಪ್ರೀತಿ ತೋರಿಸಿ. ಆದಾಯದ ಹೆಚ್ಚು ಪಾಲನ್ನು ಭವಿಷ್ಯದ ವಿದ್ಯಾಭ್ಯಾಸಕ್ಕೆ ತೆಗೆದಿಡುವಿರಿ. ಹೊಸ ಕೆಲಸವನ್ನು ಆರಂಭಿಸುವ ಮೊದಲು ಅಥವಾ ಶುಭ ಕಾರ್ಯಕ್ಕೆ ತೆರಳುವಾಗ ಇಷ್ಟದೇವತಾ ಪ್ರಾರ್ಥನೆಯನ್ನು ಮರೆಯದಿರಿ. ದೀರ್ಘಪ್ರಯಾಣವಾದರೂ ಆಯಾಸವನ್ನು ದೂರಮಾಡೀತು. ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ತಂತ್ರಜ್ಞರು ವಹಿಸಿಕೊಂಡ ಕಾರ್ಯದ ಗಡುವುದು ಸಮೀಪಿಸಿದ್ದು, ತುರ್ತು ಕಾರ್ಯವನ್ನು ಮಾಡಬೇಕಿದೆ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ ಜೊತೆ ಸಂಘರ್ಷ ಬೇಡ. ಆಂತರಿಕ ಸಂಘರ್ಷಕ್ಕೆ ಮಂಗಲ ಹಾಡಿ.
ಮೀನ ರಾಶಿ : ಇಂದು ನೀವು ಕೂಡಿಟ್ಟಿರುವ ಹಣವು ಒಂದೇ ಬಾರಿ ಖಾಲಿಯಗಬಹುದು. ಆದಾಯವನ್ನು ಹೆಚ್ಚುಮಾಡಿಕೊಳ್ಳಲೇಬೇಕಾದ ಸ್ಥಿತಿ ಎದುರಾಗುವುದು. ಅಪಾಯಕಾರಿಯಾದ ವ್ಯವಹಾರದಲ್ಲಿ ತೊಡಗುವುದು ಬೇಡ. ಅಪರಿಚಿತರ ನೋವಿಗೆ ಸ್ಪಂದಿಸುವ ಮನಸ್ಸು ನಿಮ್ಮದಾಗುವುದು. ನಿಮಗೆ ಇಷ್ಟವಾಗದ ಕೆಲಸಕ್ಕೆ ಸಿಟ್ಟಾಗುವ ಸಾಧ್ಯತೆ ಇದೆ. ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಯಾವದೇ ಸಂದರ್ಭದಲ್ಲಿಯೂ ಗಾಬರಿಯಾಗದೇ ಸಮಯಪ್ರಜ್ಞೆಯಿಂದ ಮುನ್ನಡೆಯಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು.
-ಲೋಹಿತ ಹೆಬ್ಬಾರ್-8762924271 (what’s app only)