Horoscope: ನಿತ್ಯಭವಿಷ್ಯ; ಇಂದು ಈ ರಾಶಿಯವರು ತುರ್ತು ಪ್ರಯಾಣವನ್ನು ಮಾಡಬೇಕಾಗಬಹುದು
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್ 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್ 27) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವ್ಯಾಘಾತ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:38 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:04 ರಿಂದ 09:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:07 ರಿಂದ 12:38
ಧನು ರಾಶಿ : ನಿಮ್ಮ ಪ್ರಯಾಣದ ಯೋಜನೆಯು ಬದಲಾಗಬಹುದು. ನಿಮ್ಮ ಸಿಟ್ಟಿನ ಸ್ವಭಾವದಿಂದ ಏನನ್ನೂ ಸಾಧಿಸಲಾಗದು. ಸಾಮಾಜಿಕ ಕಾರ್ಯಗಳಿಗೆ ಬೇಕಾದ ತಂಡವನ್ನು ಕಟ್ಟುವ ಆಸೆ ಇರುವುದು. ಯಾರನ್ನೋ ನೋಡಿ ನೀವು ಅಸೂಯೆ ಪಡೆಯುವುದು ಬೇಡ. ಕಾರ್ಯವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮಾಡುವ ಪ್ರಯಾಣವು ನಿಷ್ಪ್ರಯೋಜಕವಾದೀತು. ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಉದ್ವೇಗಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು.
ಮಕರ ರಾಶಿ : ಇಂದು ರಾಜಕೀಯದಲ್ಲಿ ಆದ ಬೆಳವಣಿಗೆಯು ನಿಮ್ಮ ಪರವಾಗಿ ಇರುವುದು. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನೀವು ಕಾನೂನು ವಿಷಯದಲ್ಲಿ ನಿಮಗೆ ಜಯವಾಗವುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು. ಹಣಕಾಸಿನ ಯೋಜನೆಯಲ್ಲಿ ಆರಂಭದಲ್ಲಿ ಕೆಲವು ತೊಂದರೆಗಳಿದ್ದರೂ ಅನಂತರ ದಾರಿಯು ಸ್ಪಷ್ಟವಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹಿತೈಷಿಗಳ ಸಹವಾಸದಿಂದ ಮನಸಿಗೆ ಸಂತಸ ಉಂಟಾಗುವುದು. ಹೊಸ ವ್ಯವಹಾರಕ್ಕೆ ಹಿಂದೇಟು ಹಾಕುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಮಕ್ಕಳಿಗೆ ಪ್ರೀತಿ ತೋರಿಸುವ ಅವಶ್ಯಕತೆ ಇರುವುದು.
ಕುಂಭ ರಾಶಿ : ಇಂದು ಆಸ್ತಿಯ ಸ್ಥಿರಾಸ್ತಿಯ ವಿಚಾರಕ್ಕೆ ತಂದೆ ಮತ್ತು ಮಕ್ಕಳ ನಡುವೆ ವಾಗ್ವಾದ ಆಗಬಹುದು. ಸತತ ಓಡಾಟದಿಂದ ಆರೋಗ್ಯದಲ್ಲಿ ಸಮಸ್ಯೆಯಾಗಬಹುದು. ಬಹಳ ದಿನಗಳಿಂದ ಬಾರದೇ ಇರುವ ಹಣಕ್ಕೆ ಚಿಂತೆ ಮಾಡಿಕೊಳ್ಳುವಿರಿ. ಮೇಲಧಿಕಾರಿಗಳ ಪ್ರಶಂಸೆಯು ನಿಮಗೆ ಮಾಡುವ ಕೆಲಸದಲ್ಲಿ ಉತ್ಸಾಹ ಹೆಚ್ಚಿಸುವುದು. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು. ನೀವು ರುಚಿಕರವಾದ ಆಹಾರದಿಂದ ಸಂತೋಷಿಸುವಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ. ಪ್ರೀತಿಪಾತ್ರರ ಮೇಲೆ ಸುಖಾಸುಮ್ಮನೆ ಅನುಮಾನ ಬೇಡ. ಸಂಗಾತಿಯ ಬಗ್ಗೆ ಸಿಂಪತಿ ಬರುವುದು.
ಮೀನ ರಾಶಿ : ನಿಮ್ಮ ಮೂಲಭೂತ ಅಂಶಗಳನ್ನು ಮರೆಯುವ ಸಾಧ್ಯತೆ ಇದೆ. ನಿಮ್ಮ ಸ್ನೇಹಿತರ ಒತ್ತಾಯಕ್ಕೆ ಅನವಶ್ಯಕ ವಸ್ತುವಾದರೂ ಖರೀದಿಸುವಿರಿ. ವೃತ್ತಿಯಲ್ಲಿ ಬರುವ ಸವಾಲುಗಳು ಬರಬಹುದು. ಎಲ್ಲ ಕಡೆಗಳಿಂದ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷಿಸುವಿರಿ. ಇಂದು ಬಿಡುವಿಲ್ಲದ ದಿನವಾಗಿರುವುದು. ಕೆಲವು ವಿಚಾರಕ್ಕೆ ತುಂಬಾ ಭಾವುಕರಾಗಬಹುದು. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿಲ್ಲದೆ ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಜಲಮೂಲಗಳಿಂದ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ.
-ಲೋಹಿತ ಹೆಬ್ಬಾರ್-8762924271 (what’s app only)