AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದು ಈ ರಾಶಿಯವರ ಬಲವಂತದ ಪ್ರೇಮ ತಪ್ಪಿಹೋಗುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 27: ಇಅಸಭ್ಯ ಮಾತುಗಳು ನಿಮಗೆ ಶೋಭೆಯನ್ನು ತರದು. ಎಲ್ಲರ ಜೊತೆ ಬೆರೆತು ಮಾತನಾಡುವುದನ್ನು ಇಷ್ಟಪಡುವಿರಿ. ಯಾರ ಹೊಣೆಕಾರಿಕೆಯಲ್ಲಿಯೂ ನಿಮ್ಮ ಕಾರ್ಯವನ್ನು ಬಿಡುವುದು ಬೇಡ. ವಾಸಕ್ಕಾಗಿ ನೀವು ನೂತನ ಗೃಹವನ್ನು ಖರೀದಿಸಲಿದ್ದೀರಿ. ಹಾಗಾದರೆ ಸೆಪ್ಟೆಂಬರ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಇಂದು ಈ ರಾಶಿಯವರ ಬಲವಂತದ ಪ್ರೇಮ ತಪ್ಪಿಹೋಗುವುದು
ಇಂದು ಈ ರಾಶಿಯವರ ಬಲವಂತದ ಪ್ರೇಮ ತಪ್ಪಿಹೋಗುವುದು
TV9 Web
| Edited By: |

Updated on: Sep 27, 2024 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:53 ರಿಂದ ಮಧ್ಯಾಹ್ನ 12:23, ಯಮಘಂಡ ಕಾಲ ಮಧ್ಯಾಹ್ನ 03:24ರಿಂದ ಸಂಜೆ 04:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ 09:23 ರ ವರೆಗೆ.

ಸಿಂಹ ರಾಶಿ: ಸಾಲವನ್ನು ತೀರಿಸಲು ನಿಮ್ಮ ಯೋಜನೆ ಕಾರ್ಯರೂಪಕ್ಕೆ ಬರುವುದು. ಇಂದು ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಸುಳಿವು ಸಿಗಲಿದೆ. ಸ್ವಂತ ಆರೋಗ್ಯದ ಸುಧಾರಣೆಗೆ ಖರ್ಚು ಮಾಡುವಿರಿ. ಅಸಭ್ಯ ಮಾತುಗಳು ನಿಮಗೆ ಶೋಭೆಯನ್ನು ತರದು. ಎಲ್ಲರ ಜೊತೆ ಬೆರೆತು ಮಾತನಾಡುವುದನ್ನು ಇಷ್ಟಪಡುವಿರಿ. ಯಾರ ಹೊಣೆಕಾರಿಕೆಯಲ್ಲಿಯೂ ನಿಮ್ಮ ಕಾರ್ಯವನ್ನು ಬಿಡುವುದು ಬೇಡ. ವಾಸಕ್ಕಾಗಿ ನೀವು ನೂತನ ಗೃಹವನ್ನು ಖರೀದಿಸಲಿದ್ದೀರಿ. ನಿಮಗೆ ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವ ಆಲೋಚನೆ ಒಳ್ಳೆಯದಲ್ಲ. ಮಾನಸಿಕ ಒತ್ತಡದಿಂದ ಇಂದಿನ ಕೆಲಸವು ಬೇಗನೆ ಸಾಕೆನಿಸಬಹುದು. ಎಲ್ಲದರಲ್ಲಿಯೂ ಪ್ರತ್ಯೇಕತೆಯನ್ನು ಬಯಸುವಿರಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ನಿಮಗೆ ಯಾರಮೇಲಾದರೂ ಇರುವ ನಂಬಿಕೆ ಮಿತಿಯಲ್ಲಿ ಇರಲಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ: ಸಂಘರ್ಷಗಳಿಗೆ ಸುಖಾಂತ್ಯವನ್ನು ಮಾಡಿದ್ದರೆ ಮತ್ತೇನಾದರೂ ಆದೀತು. ಇಂದು ಹಲವಾರು ದಿನಗಳ ವಾಹನ ಖರೀದಿಯ ಆಸೆಯು ಪೂರ್ಣಗೊಳ್ಳುವುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದವರಿಗೆ ಸಂಕಷ್ಟ ಬರಬಹುದು. ಭೂಮಿಯನ್ನು ವಿಸ್ತರಿಸುವ ಯೋಜನೆ ಮಾಡುವಿರಿ. ಉದ್ಯೋಗದಲ್ಲಿ ಇರಬೇಕಾದ ಚಾಣಾಕ್ಷತನ ಹಾಗೂ ಮೂಲಭೂತವಾದ ದಾಖಲೆಗಳನ್ನು ಸರಿಯಾಗಿ ಇರಿಕೊಳ್ಳುವುದು ಒಳ್ಳೆಯದು. ಅದೃಷ್ಟದಿಂದ ಬಂದಿದ್ದು ಅದು ಹೋದಮೇಲೆ ಹೋಗುವುದು. ಸಮಯವನ್ನು ಹಾಳುಮಾಡದೇ ಕೆಲಸದ ಕಡೆ ಗಮನ ಹೆಚ್ಚಿರಲಿದೆ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಇಂದು ನೀವು ಮಾಡುವಿರಿ. ಹಿರಿಯರಿಂದ ಬೈಗುಳವು ಸಿಗುವುದು.‌ ತಪ್ಪನ್ನು ತಿದ್ದಿಕೊಂಡು ಮುಂದೆ ಸರಿಯಾಗಲು ಬಯಸುವಿರಿ. ನೆಮ್ಮದಿಯನ್ನು ಬಹಳ ಶ್ರಮದಿಂದ‌ ಪಡೆಯಬೇಕಾಗುವುದು. ವಾಹನದಲ್ಲಿ ಓಡಾಟವನ್ನು ಕಡಿಮೆಗೊಳಿಸಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು.

ತುಲಾ ರಾಶಿ: ಇಂದಿನ ಕೆಲವು ಘಟನೆಗಳನ್ನು ಪ್ರತಿಕೂಲವಾಗಿ ತೆಗೆದುಕೊಂಡರೆ ಕಷ್ಟ. ಇಂದು ನಿಮಗೆ ಕಾರ್ಯದಿಂದ ತೃಪ್ತಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಬಗ್ಗೆ ಆತಂಕ ಇರಲಿದೆ. ಪರೀಕ್ಷೆಯ ಭಯವು ನಿಮ್ಮ ಅಧ್ಯಯನ ದಿಕ್ಕನ್ನೇ ತಪ್ಪಿಸಬಹುದು. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇಲವ ಓಡಾಟ, ಮಾತು ಕತೆಗಳಲ್ಲಿಯೇ ಮುಕ್ತಾಯವಾಗಲಿದೆ. ಜವಾಬ್ದಾರಿ ಇಲ್ಲದ ಕಡೆ ನೀವು ಹೋಗುವುದು ಬೇಡ. ಮಾತನಾಡವೇಕಾದ ಸಂಧರ್ಭದಲ್ಲಿ ಮೌನ ವಹಿಸುವಿರಿ. ಕಾಲ್ಪನಿಕ ಜಗತ್ತಿನಿಂದ ಹೊರಬರುವ ದಾರಿಯನ್ನು ಕಂಡುಕೊಳ್ಳಿ. ಹಣದ ಹಿಂದೆ ಎಷ್ಟೇ ಬಿದ್ದರೂ ಸಿಕ್ಕಬೇಕಾದುದು ಮಾತ್ರ ಸಿಗಲಿದೆ. ದಕ್ಕುವುದು ಮಾತ್ರ ಸಿಕ್ಕುತ್ತದೆ. ನಿರುಪಯುಕ್ತ ವಸ್ತುಗಳನ್ನು ಮಾತ್ರ ನೀವು ದಾನ ಮಾಡುವಿರಿ. ನಿಮಗೆ ಬೇಕಾದುದು ಇದ್ದಲ್ಲಿಗೆ ಬರುವುದು. ನಿಮ್ಮಿಂದ ಪಾಲಕರಿಗೆ ತೊಂದರೆಯಾಗುವುದು. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ: ಸಮಯಕ್ಕೆ ಸರಿಯಾಗಿ ನಿಮ್ಮ ಬುದ್ಧಿಯು ಸ್ಫುರಿಸುವುದು. ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ಉದ್ಯೋಗದ ಸ್ಥಳವು ನಿಮಗೆ ಖುಷಿಯ ಸ್ಥಾನವಾಗಲಿದೆ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡಲಿದ್ದೀರಿ. ಆರ್ಥಿಕತೆಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯನ್ನು ನೀವು ಇಷ್ಟಪಡಲಾರಿರಿ. ಸಂಗಾತಿಯಿಂದ ಹೊಗಳಿಕೆಯನ್ನು ಪಡೆಯುವಿರಿ. ಹೊರಗಿನ ವಸ್ತುವನ್ನು ಹೆಚ್ಚು ಸೇವಿಸುವಿರಿ. ನಿಮ್ಮ ಪ್ರಯತ್ನವು ಸಫಲತೆಯನ್ನು ಕಾಣುವುದು. ಸಂತೋಷವನ್ನು ಯಾರ ಜೊತೆಗಾದರೂ ಹಂಚಿಕೊಳ್ಳುವಿರಿ. ಗುರಿಯನ್ನು ಸೇರುವ ಮಾರ್ಗದ ಬಗ್ಗೆ ಸ್ಪಷ್ಟತೆ ಇರಲಿ. ಉತ್ತಮ ದಿನಗಳ ನಿರೀಕ್ಷೆಯಲ್ಲಿ ನೀವು ಇರುವಿರಿ. ನೂತನ ಉದ್ಯೋಗವನ್ನು ಆರಂಭಿಸಲು ಭಯವಿರುವುದು. ಇನ್ನೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌ ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?