Horoscope: ನಿತ್ಯ ಭವಿಷ್ಯ; ಈ ರಾಶಿಯವರು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 01 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ
ರಾಶಿಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 01, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:30 ರಿಂದ 02:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:46 ರಿಂದ 09:21 ರ ವರೆಗೆ, ಗುಳಿಕ ಕಾಲ 10:55 ರಿಂದ 12:30ರ ವರೆಗೆ

ಮೇಷ ರಾಶಿ : ನಿಮ್ಮನ್ನು ನೀವು ಪ್ರಶಂಸಿಸುವುದರಲ್ಲಿ ಅರ್ಥವಿಲ್ಲ. ಉಪಯೋಗಕ್ಕೆ ಬಾರದ ಕೆಲಸವನ್ನು ಬಿಟ್ಟುಬಿಡುವುದು ಒಳ್ಳೆಯದು. ಮಂಗಲಕರವಾದ ಕಾರ್ಯಗಳನ್ನು ಮಾಡಲಿದ್ದೀರಿ. ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ.

ವೃಷಭ ರಾಶಿ : ಇಂದು ಕಳೆದುಕೊಂಡ ಸಂಪತ್ತು ನಿಮಗೆ ಸಿಗುವುದು ನಿಮ್ಮ‌ ಸಂತೋಷಕ್ಕೆ ಕಾರಣವಾಗುತ್ತದೆ. ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು ಸಂಪತ್ತಿಗೆ ಅನುಸಾರವಾಗಿ ಯೋಚನೆ ಹಾಗೂ ಯೋಜನೆಗಳು ಇರಲಿ. ಅನಿರೀಕ್ಷಿತ ಬಂಧುಗಳ ಆಗಮನದಿಂದ ನಿಮ್ಮ ಕಾರ್ಯಕ್ಕೆ ತೊಂದರೆಯಾದರೂ ತೋರಿಸಿಕೊಳ್ಳಲು ಹೋಗದೇ ಸಂತೋಷದಿಂದ ಇರುವಿರಿ. ನಿಮ್ಮ ಆಸ್ತಿಕತೆಯನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಬಳಿ ಯಾರೂ ವಾದ‌ಮಾಡಬಾರದು ಎನ್ನಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆರಳಿಸುವ ಸ್ವಭಾವವನ್ನು ಬಿಡುವುದು ಉತ್ತಮ.

ಮಿಥುನ ರಾಶಿ : ಪಕ್ಷಪಾತದ ಧೋರಣೆಯನ್ನು ನೀವು ಸಹಿಸಲಾರಿರಿ. ನಿಮಗೆ ಬೇಕಾದ ಸಲಹೆ ಸಹಕಾರಗಳು ಸಿಗಲಿವೆ. ಬಂಧುಗಳ ಮಾತು ಕಹಿ ಎನಿಸಬಹುದು. ನಿಮ್ಮ ಮನಸ್ಸನ್ನು ಕುಗ್ಗಿಸಬಹುದು. ಆಪ್ತರ ಮಾತುಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು.‌ ಏನನ್ನಾದರೂ ಸಾಧಿಸಬೇಕು ಎನ್ನುವ ಛಲವು ನಿಮ್ಮ ನಿತ್ಯಮಂತ್ರವಾಗಲಿ. ವ್ಯವಹಾರದಲ್ಲಿ ಶುದ್ಧರಾಗಿರಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟು ಮಾಡುವುದು ಸರಿಯಾಗದು.‌ ತಿದ್ದಿಕೊಳ್ಳುವ ಅಂಶಗಳನ್ನು ಗಮನಿಸುವುದು ಮುಖ್ಯವಾದೀತು. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕಟಕ ರಾಶಿ : ಎಲ್ಲವನ್ನೂ ಆರ್ಥಿಕ ದೃಷ್ಟಿಯಿಂದ ನಿರ್ಣಯಿಸುವುದು ಕಷ್ಟವೇ ಆದೀತು. ಹಳೆಯ ಸಿಟ್ಟನ್ನು ನೆನಪಿಸಿಕೊಂಡು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ. ಭೂಮಿಯ ವ್ಯವಹಾರದ ಕಾರಣಕ್ಕೆ ಹೆಚ್ಚು ಓಡಾಟವನ್ನು ಮಾಡಬೇಕಾಗಿ ಬರಬಹುದು. ನಿಮ್ಮ ಪ್ರಭಾವವು ಜೊತೆಗಾರರಿಗೆ ಗೊತ್ತಾಗಲಿದೆ. ನಿಮ್ಮ ಸಹಾಯಕ್ಕೆ ಬರುವವರನ್ನು ಗೌರವಿಸಿ. ಸರಿಯಾದ ಸ್ಥಾನವನ್ನೂ ಕೊಡಬೇಕಾಗುವುದು. ಅನಿವಾರ್ಯತೆಯಿಂದ ಹಣವನ್ನು ಖರ್ಚುಮಾಡಬೇಕಾಗಿ ಬರುವುದು ಸ್ವಲ್ಪಮಟ್ಟಿಗೆ ಅಳುಕಿರುವುದು. ಅದನ್ನು ಗಮನಿಸಿಕೊಂಡು ಮಾಡಬೇಕಾದ ಕೆಲಸದಕಡೆ ಗಮನ ಹರಿಸಿ. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದಿರಬಹುದು.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ