ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಬ್ರಹ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ10:55 ರಿಂದ 12:30ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:14 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:45 ರಿಂದ 09:20ರ ವರೆಗೆ
ಮೇಷ ರಾಶಿ : ಇಂದು ನೀವು ಮಾಡಿದ ಸಾಲವನ್ನು ಮರುಪಾವತಿಸಿ ಸಮಾಧಾನಗೊಳ್ಳುವಿರಿ. ದೀರ್ಘಕಾಲದಿಂದ ಮಾಡುತ್ತಿದ್ದ ಕೆಲಸಗಳು ಮುಕ್ತಾಯವಾಗುವುವು. ಸಂಬಂಧಿಕರ ಸಹವಾಸ, ಸಹಾಯಗಳು ಸಿಗಲಿವೆ. ನಿಮ್ಮ ಅಂತಸ್ಸತ್ತ್ವ ಗಟ್ಟಿ ಇರುವುರಿಂದ ಯಾರ ಮಾತಿಗೂ ಕಿವಿಗೊಡದೆ ನೀವು ನಿರ್ಧರಿಸಿದ ಕೆಲಸದಲ್ಲಿ ಮುಂದುವರಿಯುತ್ತೀರಿ. ಇಂದು ನಿಮ್ಮಲ್ಲಿ ಕ್ರೀಡಾ ಮನೋಭಾವವು ಇಲಿದೆ. ವಿದ್ಯಾರ್ಥಿಗೆಳಿಗೆ ಶೈಕ್ಷಣಿಕವಾಗಿ ಸರಿಯಾದ ಮಾರ್ಗದರ್ಶನ ಅಗತ್ಯವಿರುವುದು. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಯಾರಾದರೂ ಶ್ರೇಷ್ಠ ವ್ಯಕ್ತಿಗಳ ಭೇಟಿಯು ಆಗಸ್ಮಿಕವಾಗಿ ಆಗಲಿದೆ. ಅವರ ಒಡನಾಟವನ್ನು ಇಟ್ಟುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯಬೇಕಾದ ಸ್ಥಿತಿ ಬರಬಹುದು.
ವೃಷಭ ರಾಶಿ : ಹಣವನ್ನು ಉಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದರೂ ನಿಮ್ಮ ಕೈ ಮೀರಿ ಹೋಗುವ ಸಂದರ್ಭವೇ ಇರುವುದು. ಪ್ರಯಾಣವನ್ನು ಅತಿಯಾಗಿ ಮಾಡಬೇಡಿ. ಹಣದ ವಿಚಾರವಾಗಿ ಮನೆಯಲ್ಲಿ ಜಗಳವಾಹಬಹುದು. ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹೋಗಬೇಡಿ. ಸಮಯ ವ್ಯರ್ಥವಾಗುತ್ತಿದೆ ಎಂದು ತಿಳಿದಿದ್ದರೂ ಅನ್ಯ ಮಾರ್ಗವಿಲ್ಲದೇ ಇರಬೇಕಾದೀತು. ಅಧ್ಯಾತ್ಮದಿಂದ ನಿಮಗೆ ನೆಮ್ಮದಿ ಸಿಗಲಿದೆ. ನಿಮ್ಮ ಇಂದಿನ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಮಕ್ಕಳಲ್ಲಿ ಸ್ಪರ್ಧಾಮನೋಭಾವವನ್ನು ಹೆಚ್ಚಿಸುವಿರಿ. ಕುಮಾರ್ಗದಿಂದ ಆದಾಯವನ್ನು ಪಡೆಯುವಿರಿ. ಭೂಮಿಯ ಖರೀದಿಗೆ ಮನಸ್ಸಾಗುವುದು.
ಮಿಥುನ ರಾಶಿ : ಇಂದು ಉದ್ಯೋಗದ ಚಿಂತೆಯಿಂದ ಯಾವ ಪ್ರಯೋಜನವಾಗದು. ಚಿಂತನೆಯಿಂದ ಮಾತ್ರ ಬಂದಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಬಗೆ ಅರಿಯದಾದೀತು. ನಿಮ್ಮ ವಿವಾಹದ ಮಾತುಕತೆಗಳಿಂದ ಬಹಳ ನೆಮ್ಮದಿ ನೀಡುವುದು. ಅಪರೂಪದ ಸ್ನೇಹಿತನ ಜೊತೆ ಸುತ್ತಾಟ. ವ್ಯರ್ಥವೆನಿಸಿದರೂ ನಿಮಗೆ ಬೇಕಾದ ಅಂಶಗಳು ಅವನಿಂದ ಸಿಗಲಿದೆ. ನಿಮ್ಮ ಗೊಂದಲಗಳಿಗೆ ತೆರೆ ಬೀಳಲಿದೆ. ವೈದ್ಯರಿಗೆ ಇಂದು ಉತ್ತಮದಿನವಾಗಿಲ್ಲ. ನೀವೂ ದೈವಕ್ಕೆ ಶರಣಾಗಲೇ ಬೇಕು. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿ ಇರುವುದು. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟು ಮಾತ್ರ ಮಾತುಗಳನ್ನಾಡಿ.
ಕಟಕ ರಾಶಿ : ಇಂದು ಪ್ರಭಾವೀ ವ್ಯಕ್ತಿಗಳ ಸಹವಾಸದಿಂದ ಯಾವುದಾದರೂ ಸ್ಥಾನವು ಪ್ರಾಪ್ತಿಯಾಗಲಿದೆ. ಪುಣ್ಯಸ್ಥಳದ ದರ್ಶನಕ್ಕೆಂದು ಪ್ರಯಾಣ ಮಾಡುವಿರಿ. ವಾಹನದಿಂದ ಬಿದ್ದು ಪೆಟ್ಟು ಮಾಡಿಕೊಳ್ಳಬೇಡಿ. ಮಾತನ್ನು ಸರಿಯಾಗಿ ಆಡಿ. ಇಲ್ಲವಾದರೆ ಅನೇಕ ಶುಭಕಾರ್ಯಗಳಿಂದ, ಉತ್ತಮ ಕಾರ್ಯಗಳಿಂದ ವಂಚಿತರಾಗುವಿರಿ. ಮಕ್ಕಳ ವಿಚಾರವಾಗಿ ದಂಪತಿಗಳ ಮಧ್ಯದಲ್ಲಿ ವೈಮನಸ್ಯವು ಉಂಟಾಗಬಹುದು. ಸಹೋದರರಿಗೆ ಆರ್ಥಿಕ ಸಹಾಯ ಮಾಡುವಿರಿ. ನಿಮ್ಮಿಬ್ಬರ ಮಾತಿನಚಕಮಕಿಯಲ್ಲಿ ಕೂಸು ಬಡವಾದೀತು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಕತ್ತಲೆಯನ್ನು ಶಪಿಸುವುದಕ್ಕಿಂತ ಬೆಳಕನ್ನು ಹುಡುಕುವುದು ಉತ್ತಮ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ಸಿಟ್ಟಿನ ಕೈಗೆ ನಿಮ್ಮನ್ನು ಕೊಡುವುದು ಬೇಡ.