Horoscope: ನಿತ್ಯ ಭವಿಷ್ಯ; ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ನಿರ್ಲಕ್ಷ್ಯ ಬೇಡ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 18 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ನಿರ್ಲಕ್ಷ್ಯ ಬೇಡ
ಪ್ರಾತಿನಿಧಿಕ ಚಿತ್ರ

Updated on: May 18, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವ್ಯಾಘಾತ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ ಬೆಳಗ್ಗೆ10:53ರ ವರೆಗೆ, ಯಮಘಂಡ ಕಾಲ 14:05 ರಿಂದ 15:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05ರಿಂದ ಬೆಳಗ್ಗೆ 07:41ರ ವರೆಗೆ.

ಮೇಷ ರಾಶಿ: ನಿಮ್ಮ ಬಹಳ ದಿನಗಳಿಂದ ಹಾಗೆಯೇ ಇದ್ದ ಸರ್ಕಾರದ ಕೆಲಸಗಳು ಮುಕ್ತಾಯ ಮಾಡಬೇಕಾದ ಸ್ಥಿತಿ ಇರುವುದು. ಹತ್ತಿರದ ಸಂಬಂಧಿಗಳೊಂದಿಗೆ ಪ್ರಮುಖ ಚರ್ಚೆಯನ್ನು ಮಾಡುವಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದತ್ತ ಗಮನಹರಿಸುವರು. ನಿಮ್ಮ ಕೋಪವನ್ನು ನಿಯಂತ್ರಿಸಿ. ಪರಿಸ್ಥಿತಿಯ ಪ್ರತಿಕೂಲತೆಯು ನಿಮ್ಮ ಕೋಪಕ್ಕೆ ಕಾರಣವಾಗಬಹುದು. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳಬೇಡಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಬಾಂಧವರ ಸಂಪರ್ಕದಿಂದ ದೂರವಿರುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಯಾರದೋ ಮಾತಿಗೆ ಕುಣಿಯುವುದು ಬೇಡ. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದರೆ ಮುಂದುವರಿಯಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು.

ವೃಷಭ ರಾಶಿ: ಇಂದು ನೀವು ಅಪರೂಪದ ವಿಶೇಷ ವ್ಯಕ್ತಿಯನ್ನು ಭೇಟಿಯಾಗುವಿರಿ. ಅದರಿಂದ ನಿಮ್ಮ ಸ್ಥಾನಮಾನ, ಅಲೋಚನಾ ಕ್ರಮಗಳು ಬದಲಾಗುವುದು.‌ ಇಂದು ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಮತ್ತು ಏಕಾಗ್ರತೆಯನ್ನು ಹೊಂದಿರುವುದು ಖಂಡಿತವಾಗಿಯೂ ನಿಮಗೆ ಯಶಸ್ಸನ್ನು ನೀಡುತ್ತದೆ. ಯಾರನ್ನೂ ಹೆಚ್ಚು ಅವಲಂಬಿಸಬೇಡಿ ಮತ್ತು ನಿಮ್ಮ ಯೋಜನೆಗಳನ್ನು ಘೋಷಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಮುಖ್ಯ. ಪ್ರಯೋಜನವಿಲ್ಲದೇ ಯಾವ ಕಾರ್ಯವನ್ನೂ ಮಾಡು ಪ್ರಯತ್ನಿಸುವುದಿಲ್ಲ. ಸಾಹಸ ಕಾರ್ಯಕ್ಕೆ ಒಮ್ಮೆಲೇ ಮುಂದಾಗುವುದು ಬೇಡ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು.

ಮಿಥುನ ರಾಶಿ: ಇಂದು ನಿಮ್ಮ ಅರ್ಹತೆಗೆ ಯೋಗ್ಯವಾದ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಯಶಸ್ಸಿನಿಂದಾಗಿ ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಅಕ್ರಮ ಕೆಲಸಗಳು ಮಾಡುವಂತಹ ಸಂದರ್ಭ ಬಂದಲ್ಲಿ ಅದರಿಂದ ದೂರವಿರಿ. ಇಲ್ಲದಿದ್ದರೆ ತೊಂದರೆಗೆ ಸಿಲುಕಬಹುದು. ಇದು ನಿಮ್ಮ ದಕ್ಷತೆಯ ಮೇಲೂ ನಕಾರಾತ್ಮಕ ಪರಿಣಾಮ ಬೀರಬಹುದು. ಸಮಾರಂಭಗಳಲ್ಲಿ ಹೆಚ್ಚಿನ ದಿನವನ್ನು ಕಳೆಯುವಿರಿ. ಹೆಚ್ಚು ಚಿಂತಿಸುವುದರಿಂದ ಯಾವ ಪ್ರಯೋಜನವಾಗದು. ಹಿರಿಯರಿಗೆ ಅಗೌರವದ ಮಾತುಗಳನ್ನು ಆಡಬೇಕಾದೀತು. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಬೇಕಾದಷ್ಟು ಹಣವಿದ್ದರೂ ತುರ್ತಿನ ಖರ್ಚಿಗೆ ಪ್ರಯೋಜನಕ್ಕೆ ಬಾರದು.

ಕಟಕ ರಾಶಿ: ಇಂದು ನಿಮಗೆ ಏನನ್ನೂ ಸಾಧಿಸುತ್ತೇನೆ ಎಂಬ ಉತ್ಸಾಹವಿರುವುದು. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಂಡು ನಿರಾಳವಾಗುವಿರಿ. ಮಕ್ಕಳ ಹಣಕಾಸಿನ ಸಮಸ್ಯೆಯಿಂದ ನಿಮ್ಮ ಸಮಸ್ಯೆಗಳನ್ನು ದೊಡ್ಡ ಮಾಡಿಕೊಳ್ಳುವಿರಿ. ಸ್ವ ಉದ್ಯೋಗವನ್ನು ಮಾಡುತ್ತಿದ್ದರೆ ನಿರ್ಲಕ್ಷ್ಯ ಬೇಡ. ಸಂಗಾತಿಯ ಬೆಂಬಲವು ನಿಮಗೆ ಬಲವನ್ನು ಕೊಡುವುದು. ದಿನದ ಕೊನೆಯಲ್ಲಿ ಆಯಾಸದಿಂದ ಕೋಪ ಉಂಟಾಗುತ್ತದೆ.  ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ಹಳೆಯ ಪ್ರೀತಿಯು ನೆನಪಾಗಿ ಮೌನವಾಗುವಿರಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ದೃಷ್ಟಿಯಲ್ಲಿ ಸ್ವಾರ್ಥಿಯಂತೆ ಕಾಣಿಸುವಿರಿ. ನಿಮ್ಮದಲ್ಲದ್ದನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ಯಾವುದನ್ನೂ ಅನುಭವಿಸಲೂ ಯೋಗ್ಯವಾದ ಕಾಲವು ಬೇಕಾಗುವುದು. ಇಂದು ನೀವು ಯಾವುದಾದರೂ ವಿಚಾರವನ್ನು ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ.