Daily Horoscope: ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುವಿರಿ, ವೈಯಕ್ತಿಕ ಸಮಸ್ಯೆಗಳಿಂದ ಮುಕ್ತಿ ಸಾಧ್ಯತೆ
26 ಏಪ್ರಿಲ್ 2025: ಶನಿವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಗೃಹ ನಿರ್ಮಾಣದ ಕಡೆಗೆ ಗಮನವಾಗಬೇಕಾಗುವುದು. ಕಛೇರಿಯ ಕೆಲಸಗಳ ಕಡೆ ವೈಯಕ್ತಿಕ ವಿಚಾರದ ಕಡೆ ಗಮನ ನೀಡಿಲಾಗದು. ಜೀವನವು ಸುಗಮವಾಗಿ ಸಾಗುತ್ತದೆ. ಹಣಕಾಸಿನ ವ್ಯವಹಾರಗಳು ಯಶಸ್ವಿಯಾಗಿ ಮತ್ತು ತೃಪ್ತಿಕರವಾಗಿ ಪೂರ್ಣಗೊಳ್ಳುತ್ತವೆ.

ಬೆಂಗಳೂರು, ಏಪ್ರಿಲ್ 26, ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ರೇವತೀ, ಯೋಗ : ವೈಧೃತಿ, ಕರಣ : ತೈತಿಲ, ಸೂರ್ಯೋದಯ – 06 – 13 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:22- 10:56, ಯಮಘಂಡ ಕಾಲ 14:05 – 15:39, ಗುಳಿಕ ಕಾಲ 06:14 – 07:48.
ಮೇಷ ರಾಶಿ: ರಾಜಕೀಯ ಬಲದಿಂದ ಉನ್ನತ ಸ್ಥಾನ ಲಭ್ಯ. ಹೊಸ ಕಾರ್ಯವನ್ನು ಮಾಡಲು ಅತಿಯಾದ ಭಯವು ಬರಲಿದೆ. ಅನಿರೀಕ್ಷಿತವಾಗಿ ಬಂಧುಗಳ ಆಗಮನವಾಗುವುದು. ವ್ಯವಹಾರದಲ್ಲಿ ಲಾಭವು ಆಶಾದಾಯಕವಾಗಿರುತ್ತದೆ. ವೈಯಕ್ತಿಕ ಸಮಸ್ಯೆಗಳ ಒತ್ತಡ ಕಡಿಮೆಯಾಗುತ್ತದೆ. ಯೋಜಿಸಲಾದ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಆದಾಯ ಗಳಿಕೆಯ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಉದ್ಯೋಗ ಬದಲಾವಣೆಯ ಪ್ರಯತ್ನಗಳಿಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತದೆ. ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಣ್ಣ ವಿಚಾರಕ್ಕೆ ಸುಮ್ಮನೇ ಗದ್ದಲ ಮಾಡಿಕೊಳ್ಳುವಿರಿ. ಯಾವುದೋ ಗಹನವಾದ ಆಲೋಚನೆಯಲ್ಲಿ ನೀವು ಮುಳುಗಿರುವಿರಿ.
ವೃಷಭ ರಾಶಿ: ಅಧ್ಯಾತ್ಮ ಶಕ್ತಿಯಿಂದ ಅನಾರೋಗ್ಯವನ್ನು ತಡಯಬಹುದು. ನಿಮಗೆ ದುರಭ್ಯಾಸಗಳು ಉನ್ನತಿಯನ್ನು ತಡೆಯುವುದು. ರೋಗ ಬಾಧೆಯಿಂದ ನೀವು ಹೊರಬರುವಿರಿ. ವ್ಯಾಪಾರದಲ್ಲಿ ನಷ್ಟಕ್ಕೆ ಪಾಲುದಾರರನ್ನು ತೋರಿಸುವುದು ಬೇಡ. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಸಕಾರಾತ್ಮಕವಾಗಿರುತ್ತವೆ. ವಿವಾಹ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಹಣಕಾಸಿನ ಸಮಸ್ಯೆಗಳು ಸ್ವಲ್ಪ ಕಡಿಮೆಯಾಗುತ್ತವೆ. ವಿದ್ಯಾರ್ಥಿಗಳು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಬಹಳ ದಿನಗಳಿಂದ ಅಡಗಿದ್ದ ದುಃಖವು ಇಂದು ಪ್ರಕಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಹೊಸದಾಗಿ ಆರಂಭವಾಗಲಿದೆ.
ಮಿಥುನ ರಾಶಿ: ಸ್ವಂತ ಉದ್ಯಮಕ್ಕೆ ಸಣ್ಣ ವಿರಾಮ ಕೊಡುವಿರಿ. ನಿಮ್ಮ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತಗಸಾವನ್ನು ಕೊಡುವುದು. ವಾಹನ ಸಂಚಾರಕ್ಕೆ ಅಡೆತಡೆಗಳಾಗಬಹುದು. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ವೈಯಕ್ತಿಕ ಸಮಸ್ಯೆಗಳಿಂದ ಪರಿಹಾರ ಪಡೆಯುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಪ್ರಾಮುಖ್ಯತೆ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಸಣ್ಣ ಲಾಭಗಳ ಸಾಧ್ಯತೆ ಇದೆ. ಹಣಕಾಸಿನ ಪ್ರಯತ್ನಗಳು ಮತ್ತು ಹಣಕಾಸಿನ ವಹಿವಾಟುಗಳು ಉತ್ತಮವಾಗಿರುತ್ತದೆ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ಇಷ್ಟ ಮಿತ್ರರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು.
ಕರ್ಕಾಟಕ ರಾಶಿ: ನಿರ್ದಿಷ್ಟ ಕೆಲಸಗಳ ಮೇಲೆ ಅಧಿಕ ಗಮನವಿರಲಿದೆ. ಭೂಮಿಯ ವ್ಯವಹಾರಕ್ಕೆ ಕೈ ಹಾಕಲು ಹಿಂದೇಟು ಹಾಕುವಿರಿ. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ವ್ಯವಹಾರಗಳು ತೃಪ್ತಿಕರವಾಗಿ ಮುಂದುವರಿಯುತ್ತದೆ. ಆದಾಯ ಗಮನಾರ್ಹವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಸಮಸ್ಯೆಗಳು ಮತ್ತು ವಿವಾದಗಳು ಬಗೆಹರಿಯುತ್ತವೆ. ಯಾವುದೇ ಪ್ರಯತ್ನ ಯಶಸ್ವಿಯಾಗುತ್ತದೆ. ನಿರೀಕ್ಷೆಗೂ ಮೀರಿದ ಆರ್ಥಿಕ ಪ್ರಗತಿ ಇರುತ್ತದೆ. ಹಿಂದಿನ ಸಮಸ್ಯೆಗಳು ಬಹಳ ಕಡಿಮೆಯಾಗುತ್ತವೆ. ನಿಮಗೆ ಸಿಗದ ಅಧಿಕಾರದ ಬಗ್ಗೆ ನಿಮಗೆ ಸ್ವಲ್ಪ ಅಸಮಾಧನಾವಿರುವುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನ.
ಸಿಂಹ ರಾಶಿ: ಮೇಲಧಿಕಾರಿಗಳನ್ನು ಪ್ರಶಂಸಿಸಿ ಕೆಲಸ ಮಾಡಿಸಿಕೊಳ್ಳುವಿರಿ. ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ವಾರ್ತೆಯು ಬರಬಹುದು. ಗೃಹ ನಿರ್ಮಾಣದ ಕಡೆಗೆ ಗಮನವಾಗಬೇಕಾಗುವುದು. ಕಛೇರಿಯ ಕೆಲಸಗಳ ಕಡೆ ವೈಯಕ್ತಿಕ ವಿಚಾರದ ಕಡೆ ಗಮನ ನೀಡಿಲಾಗದು. ಜೀವನವು ಸುಗಮವಾಗಿ ಸಾಗುತ್ತದೆ. ಹಣಕಾಸಿನ ವ್ಯವಹಾರಗಳು ಯಶಸ್ವಿಯಾಗಿ ಮತ್ತು ತೃಪ್ತಿಕರವಾಗಿ ಪೂರ್ಣಗೊಳ್ಳುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತದೆ. ಆದಾಯ ಸ್ಥಿರವಾಗಿರುತ್ತದೆ. ಆರೋಗ್ಯ ಚೆನ್ನಾಗಿರುವಂತೆ ತೋರುತ್ತದೆ. ಪ್ರಯಾಣವು ಲಾಭವನ್ನು ತರುತ್ತದೆ. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ನೀರಿನಿಂದ ಭಯವು ಉಂಟಾಗುವುದು. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕೆಲವು ವಿಚಾರಗಳಿಗೆ ಮತ್ತೆ ಮತ್ತೆ ಹೇಳಿಕೊಳ್ಳಬೇಕಾದೀತು. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು.
ಕನ್ಯಾ ರಾಶಿ: ಇಂದಿನ ಘಟನೆಯನ್ನು ತಾಳ್ಮೆಯಿಂದ ಎದುರಿಸುವುದು ಕಷ್ಟವಾಗಬಹುದು. ಇಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವು ವ್ಯಯವಾಗಬಹುದು. ವಿವಾದಗಳಿಂದ ಸಮಯವು ಹಾಳಾಗಬಹುದು. ಆರ್ಥಿಕವಾಗಿ ನಿಮ್ಮ ನಡೆಯು ಅರ್ಥವಾಗದೇ ಇರುವುದು. ಹಿರಿಯರಿಗೆ ಎದುರು ಮಾತನಾಡಿ ಅನಂತರ ಪಶ್ಚಾತ್ತಾಪಪಡುವಿರಿ. ಆದಾಯ ನಿರೀಕ್ಷೆಯಂತೆ ಹೆಚ್ಚಾಗುವ ಸಾಧ್ಯತೆಯಿದೆ. ನೀವು ಕೆಲಸದಲ್ಲಿ ಅಧಿಕಾರವನ್ನು ಪಡೆಯುತ್ತೀರಿ. ಆರೋಗ್ಯ ಸ್ಥಿರವಾಗಿರುತ್ತದೆ. ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಹೋದರನ ಜೊತೆ ಆಸ್ತಿ ವಿವಾದ ಬಗೆಹರಿಯುತ್ತದೆ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಯಾರನ್ನಾದರೂ ದೂಷಿಸಿ ಅವರ ವಿರೋಧವನ್ನು ಕಟ್ಟಿಕೊಳ್ಳುವಿರಿ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಸಿಟ್ಟಿನ ಸ್ವಭಾವವನ್ನು ಬದಲಿಸಿಕೊಳ್ಳುವುದು ಸೂಕ್ತ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು.




