AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತು ಕೇಳಿಬರಬಹುದು

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 7ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4ರವರಿಗೆ ವೃತ್ತಿ-ವ್ಯವಹಾರದಲ್ಲಿ ಬದಲಾವಣೆ, 5ರವರಿಗೆ ಪ್ರೇಮದಲ್ಲಿ ಸಂತಸ, 6ರವರಿಗೆ ಅಧ್ಯಾತ್ಮಿಕ ಒಲವು ಇರಲಿದೆ. ಈ ಭವಿಷ್ಯವು ನಿಮ್ಮ ದಿನವನ್ನು ಯೋಜಿಸಲು ಸಹಕಾರಿಯಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತು ಕೇಳಿಬರಬಹುದು
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 07, 2026 | 12:34 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ವಸ್ತುನಿಷ್ಠವಾಗಿ ನಡೆದುಕೊಳ್ಳುವುದು ಮುಖ್ಯ. ವ್ಯಕ್ತಿಗತವಾಗಿ ಯಾವುದೇ ಅಭಿಪ್ರಾಯ ಇದ್ದರೆ ಗುಣಕ್ಕೆ ಸಂಬಂಧಿಸಿದಂತೆ ಮತ್ಸರ ಸಾಧಿಸುವುದಕ್ಕೆ ಹೋಗಬೇಡಿ. ಉನ್ನತ ಶಿಕ್ಷಣ ಪಡೆಯುತ್ತಾ ಇರುವವರಿಗೆ ವಿದ್ಯಾರ್ಥಿ ವೇತನ ದೊರೆಯುವ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಗಲಿದೆ. ಪಾರ್ಟನರ್ ಷಿಪ್ ವ್ಯವಹಾರ ಮಾಡುತ್ತಾ ಇರುವವರು ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಮುಂದಾಗಲಿದ್ದೀರಿ. ನಿಮ್ಮಲ್ಲಿ ಕೆಲವರು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಸಂತೋಷವಾದ ದಿನ ಇದಾಗಿರುತ್ತದೆ. ಮಕ್ಕಳ ಶಿಕ್ಷಣದ ಬಗ್ಗೆ ಮುಖ್ಯ ವಿಚಾರಗಳನ್ನು ಸಂಗಾತಿ ಜೊತೆಗೆ ಹಂಚಿಕೊಳ್ಳಲಿದ್ದೀರಿ. ಕಾರು- ಸ್ಕೂಟರ್ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುವವರು ಆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ಬಡ್ತಿ- ವೇತನ ಹೆಚ್ಚಳದ ನಿರೀಕ್ಷೆಯಲ್ಲಿ ಇರುವವರಿಗೆ ಮಿಶ್ರ ಫಲಿತಾಂಶ ಅನುಭವಕ್ಕೆ ಬರಲಿದೆ. ಸಿನಿಮಾ ಕಲಾವಿದರಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಅವಕಾಶಗಳು ದೊರೆಯಲಿವೆ. ದೀರ್ಘ ಕಾಲದ ಆದಾಯದ ದಾರಿ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಅಧ್ಯಾತ್ಮದ ಕಡೆಗೆ ಈ ದಿನ ನಿಮಗೆ ಸೆಳೆತ ಇರಲಿದೆ. ನಿಮ್ಮಲ್ಲಿ ಕೆಲವರು ಧ್ಯಾನ- ಯೋಗ ಶಿಬಿರ ಇಂಥವುಗಳಲ್ಲಿ ಭಾಗೀ ಆಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮಗೆ ಕಿರಿಕಿರಿ ಮಾಡುತ್ತಾ ಇದ್ದ ವ್ಯಕ್ತಿ ಅಥವಾ ಗುಂಪು ಸಮಸ್ಯೆಗೆ ಸಿಲುಕಿಕೊಳ್ಳಲಿದ್ದು, ಇದರಿಂದ ಸಮಾಧಾನ ಮೂಡಲಿದೆ. ಸುಗಂಧ ದ್ರವ್ಯಗಳು, ಬೆಲೆಬಾಳುವ ರತ್ನಗಳ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದ್ದು, ನಿಮ್ಮ ಆತ್ಮವಿಶ್ವಾಸ ಜಾಸ್ತಿ ಆಗುತ್ತದೆ. ಕಫ, ನೆಗಡಿ, ಕೆಮ್ಮು- ಜ್ವರದಂಥ ಸಮಸ್ಯೆಯಿಂದ ದೈಹಿಕವಾಗಿ ಸುಸ್ತು ಹಾಗೂ ನಿರಾಸಕ್ತಿ ಕಾಡಲಿದೆ.

ಲೇಖನ- ಎನ್‌.ಕೆ.ಸ್ವಾತಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?