Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 10ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 10ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: wordpress.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 10, 2023 | 5:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 10ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುವಂಥ ಸಾಧ್ಯತೆ ಇದೆ. ಇದರ ಜತೆಜತೆಗೆ ಮನಸ್ಸಿಗೆ ಒಂದು ಸಾಧನೆ ಮಾಡಿದಂಥ ಸಂತೋಷ ದೊರೆಯಲಿದೆ. ನಿಮ್ಮ ಕೈ ಅಳತೆಯಲ್ಲಿ ಸಾಧ್ಯವಾಗುವ ಬಹುತೇಕ ಕೆಲಸಗಳನ್ನು ಮಾಡುವುದಕ್ಕೆ ಅವಕಾಶ ದೊರೆಯಲಿದೆ. ನಿದ್ದೆಯ ವಿಚಾರಕ್ಕೆ ಸ್ವಲ್ಪ ಮಟ್ಟಿಗೆ ಅಡೆತಡೆಗಳು ಎದುರಾಗಬಹುದು. ಈ ಕಾರಣಕ್ಕೆ ಏಕಾಗ್ರತೆ ಕಷ್ಟ ಆಗಲಿದೆ. ಅಪಾರ್ಟ್ ಮೆಂಟ್ ಖರೀದಿಗೆ ಪ್ರಯತ್ನಿಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವಂಥ ಅವಕಾಶಗಳಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನೇರವಂತಿಕೆ ಈ ದಿನ ಕೆಲಸಕ್ಕೆ ಬರುವುದಿಲ್ಲ. ಆದ್ದರಿಂದ ಸನ್ನಿವೇಶವನ್ನು ಡಿಪ್ಲೊಮ್ಯಾಟಿಕ್ ಆಗಿ ನಿರ್ವಹಿಸುವ ಕಡೆಗೆ ಗಮನವನ್ನು ನೀಡಿ. ಬಡ್ತಿಯ ನಿರೀಕ್ಷೆಯಲ್ಲಿ ಇರುವಂಥವರು ಯಾವುದೇ ಪ್ರಯತ್ನ ಮಾಡದೆ ಸುಮ್ಮನಿದ್ದಲ್ಲಿ ಸಾಧ್ಯವಿಲ್ಲ. ಹೊಸ ಜವಾಬ್ದಾರಿ ತೆಗೆದುಕೊಳ್ಳುವುದಕ್ಕೆ ಸಿದ್ಧರಿದ್ದೀರಿ ಎಂದು ತೋರಿಸಿಕೊಳ್ಳಬೇಕಾಗುತ್ತದೆ. ತಾಯಿ ಅಥವಾ ತಾಯಿ ಸಮಾನರಾದವರ ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯ ನೀಡಿ. ವಾಹನದ ಸರ್ವೀಸ್ ಬಾಕಿ ಇದ್ದಲ್ಲಿ ತಕ್ಷಣವೇ ಅದನ್ನು ಮಾಡಿಸಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಮನೆ ದೇವರ ಆರಾಧನೆಯನ್ನು ಮಾಡಿದರೆ ಹಲವು ಸವಾಲುಗಳು ಸುಲಭವಾಗಿ ಎದುರಿಸಬಹುದು. ಯಾವುದೇ ವಿಚಾರವಾಗಿರಲಿ, ಅದೆಷ್ಟೇ ಸಣ್ಣ ಪ್ರಮಾಣದ್ದಾಗಿರಲಿ ಪೂರ್ತಿಯಾಗಿ ಆ ಬಗ್ಗೆ ತಿಳಿದುಕೊಳ್ಳದೆ ನಿಮ್ಮ ಅಭಿಪ್ರಾಯವನ್ನು ಹೇಳದಿರಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸವನ್ನು ಒಪ್ಪಿಕೊಳ್ಳದಿರಿ. ಪಾರ್ಟನರ್ ಷಿಪ್ ವ್ಯವಹಾರಗಳನ್ನು ಮಾಡುತ್ತಿರುವವರು ಕಾಗದ- ಪತ್ರಗಳು, ಸರ್ಕಾರದಿಂದ ತೆಗೆದುಕೊಳ್ಳಬೇಕಾದ ಪರವಾನಗಿಗಳನ್ನು ತೆಗೆದುಕೊಳ್ಳಲಾಗಿದೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಉನ್ನತ ವ್ಯಾಸಂಗಕ್ಕಾಗಿ ವಿದೇಶಗಳಿಗೆ ಹೋಗಬೇಕು ಎಂದಿರುವವರಿಗೆ ಮುಖ್ಯ ಮಾಹಿತಿ ಅಥವಾ ಪ್ರಮುಖ ವ್ಯಕ್ತಿಯಿಂದ ನೆರವು ದೊರೆಯಲಿದೆ. ಕೋರ್ಟ್- ಕಚೇರಿಯಲ್ಲಿ ಕೆಲಸ ಮಾಡುವವರಿಗೆ ಒತ್ತಡದ ವಾತಾವರಣ ಇರಲಿದೆ. ಸ್ವತಃ ನಿಮಗೆ ಅಚ್ಚರಿ ಆಗುವ ರೀತಿಯಲ್ಲಿ ಕೆಲವು ಕೆಲಸಗಳು ಮುಗಿಯುವಂಥ ಸಾಧ್ಯತೆಗಳಿವೆ. ಸೆಕೆಂಡ್ ಹ್ಯಾಂಡ್ ಕಾರು ಖರೀದಿ ಮಾಡಬೇಕು ಎಂದಿರುವವರಿಗೆ ನಿರೀಕ್ಷೆ ಮಾಡಿದಂತೆಯೇ ವಾಹನ ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ತುಂಬ ಹೆಚ್ಚಿನ ಆದಾಯ ಅಥವಾ ಲಾಭ ನಿರೀಕ್ಷೆ ಮಾಡುತ್ತಿದ್ದಲ್ಲಿ ಅಷ್ಟು ಪ್ರಮಾಣದಲ್ಲಿ ನಿಮ್ಮ ಕೈ ಸೇರುವುದಿಲ್ಲ. ಇತರರಿಂದ ಹೆಚ್ಚಿನ ಸಹಾಯವನ್ನು ನಿರೀಕ್ಷೆ ಮಾಡದಿರಿ. ದೂರ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಲ್ಲಿ ಕೊನೆ ಕ್ಷಣದಲ್ಲಿ ಅದು ರದ್ದು ಮಾಡಿಕೊಳ್ಳುವಂಥ ಸನ್ನಿವೇಶ ಸೃಷ್ಟಿಯಾಗಬಹುದು. ಸಾವಯವ ಕೃಷಿ ಮಾಡುವಂಥ ರೈತರಿಗೆ ಸನ್ಮಾನ- ಗೌರವ ದೊರೆಯುವಂಥ ಯೋಗ ಇದೆ. ವಯಸ್ಸಾದ ತಂದೆ- ತಾಯಿ ಇದ್ದಲ್ಲಿ ಅವರ ಆರೋಗ್ಯದ ಕಡೆಗೆ ಗಮನ ನೀಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಮ್ಮ ಸಾಮರ್ಥ್ಯವನ್ನು ಸಂಪೂರ್ಣ ಬಳಸಿಕೊಂಡು, ಈ ದಿನ ನೀವೇನು ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. ನಿಮಗೆ ಪರಿಚಯ ಇರದ ವ್ಯಕ್ತಿಯ ಬಗ್ಗೆ ಯಾರದೋ ಮಾತಿನ ಆಧಾರದಲ್ಲಿ ಅಭಿಪ್ರಾಯವನ್ನು ಹೇಳದಿರಿ. ನೀರಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಇರುವವರಿಗೆ ಹೆಚ್ಚಿನ ಆದಾಯ ಬರಲಿದೆ. ಸೌಂದರ್ಯವರ್ಧಕ ವಸ್ತುಗಳಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಈ ಹಿಂದೆ ನೀವು ಮಾಡಿದ್ದ ಕೆಲಸವನ್ನು ಗುರುತಿಸಿ, ಈಗ ಹೊಸದಾಗಿ ಕೆಲಸ ವಹಿಸಲಿದ್ದಾರೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಹೊಸ ವಿಷಯಗಳನ್ನು ಕಲಿತುಕೊಳ್ಳಲಿದ್ದೀರಿ. ವಹಿಸಿಕೊಂಡ ಕೆಲಸಗಳು ಸುಸೂತ್ರವಾಗಿ ಮಾಡಿ ಮುಗಿಸಲಿದ್ದೀರಿ. ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗಲಿದೆ. ಸ್ವಂತ ವ್ಯವಹಾರ ಮಾಡುತ್ತಿರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದೂರದ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ಹೂಡಿಕೆ ವಿಚಾರಕ್ಜೆ ಕುಟುಂಬಸ್ಥರ ಜತೆಗೆ ಮಾತುಕತೆ ನಡೆಸಲಿದ್ದೀರಿ. ಉಳಿತಾಯದ ಬಗ್ಗೆ ಗಂಭೀರವಾದ ಆಲೋಚನೆ ಮಾಡಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಇತರರ ಮೇಲೆ ಸುಖಾ ಸುಮ್ಮನೆ ಅನುಮಾನ ಪಡದಿರಿ. ಕೂದಲು- ಚರ್ಮಕ್ಕೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಕೆಲಸವನ್ನು ಒಪ್ಪಿಕೊಳ್ಳದಿರಿ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ಒಂದು ವೇಳೆ ಹೂಂ ಅಂದಲ್ಲಿ ಬಹಳ ಸಮಯ ಸಮಸ್ಯೆಗೆ ಸಿಲುಕಿಕೊಳ್ಳಬೇಡಿ. ದೂರದ ಊರುಗಳಿಂದ ಶುಭ ಸುದ್ದಿ ಕೇಳುವ ಯೋಗ ಇದೆ. ಹೂಡಿಕೆಯ ನಿರೀಕ್ಷೆಯಲ್ಲಿ ಇರುವವರು ಸಂಭ್ರಮಿಸುವುದಕ್ಕೆ ಕಾರಣ ಸಿಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ವ್ಯಾಪಾರ- ಉದ್ಯಮದಲ್ಲಿ ಇರುವವರಿಗೆ ಅನಿರೀಕ್ಷಿತವಾಗಿ ಹಲವು ಅವಕಾಶಗಳು ಬರಲಿವೆ. ಈ ಹಿಂದೆ ನೀವು ಯಾರಿಗೆ ನೆರವು ನೀಡಿದ್ದಿರೋ ಅವರ ಮೂಲಕವಾಗಿ ಆದಾಯವನ್ನು ಹೆಚ್ಚಳ ಮಾಡಿಕೊಳ್ಳುವಂತಹ ಅವಕಾಶಗಳು ತೆರೆದುಕೊಳ್ಳಲಿವೆ. ಹಾಸಿಗೆ, ಪೀಠೋಪಕರಣಗಳ ಖರೀದಿಗಾಗಿ ಹಣ ಖರ್ಚು ಮಾಡುವಂಥ ಯೋಗ ಇದೆ. ಖರ್ಚಿನ ಅಂದಾಜಿಲ್ಲದೆ ಮನೆಯ ದುರಸ್ಥಿ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಡಿ. ನಷ್ಟವಾಗುವ ಯೋಗ ಇದೆ.

ಲೇಖನ- ಎನ್‌.ಕೆ.ಸ್ವಾತಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!