Horoscope: ಸಂಶೋಧಕರಿಗೆ ಉತ್ತಮ ಫಲಿತಾಂಶ ದೊರೆಯುವ ಸಾಧ್ಯತೆ, ದೂರದ ಸ್ಥಳಕ್ಕೆ ಭೇಟಿ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 17 ಜೂನ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜೂನ್. 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:42 ರಿಂದ 09:20ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:57 ರಿಂದ ಮಧ್ಯಾಹ್ನ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:48ರ ವರೆಗೆ.
ಮೇಷ ರಾಶಿ: ಇಂದು ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಅದನ್ನು ಕೊಡಿ. ಸಂತೋಷದಿಂದ ಇರುತ್ತಾರೆ. ಬೆಚ್ಚಗಿನ ವಾತಾವರಣವು ನಿಮಗೆ ಇಂದು ಹಿತವಾಗಲಿದೆ. ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ವೈದ್ಯವೃತ್ತಿಯನ್ನು ನಡೆಸುತ್ತಿರುವವರು ಆರ್ಥಿಕವಾಗಿ ಬಲಗೊಳ್ಳುವರು. ವಿದೇಶದಲ್ಲಿರುವ ಕುಟುಂಬಸ್ಥರು ಆರ್ಥಿಕವಾದ ಸಹಕಾರವನ್ನು ನೀಡುವರು. ಪಾದಗಳಲ್ಲಿ ನೋವು ಕಾಣಿಸಬಹುದು. ಮೊಬೈಲ್ ಮುಂತಾದ ಉಪಕರಣಕ್ಕೆ ಒಗ್ಗಿ ಕಣ್ಣು ಹಾಳಾಗುವುದು. ಸರಿಯಾದ ಕೆಲಸವನ್ನು ಸರಿ ಇಲ್ಲ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನಿಮ್ಮ ಮಾರ್ಗದಲ್ಲಿ ನೀವಿರಿ. ಬರಹಗಾರರಿಗೆ ತಮ್ಮ ಬರಹವನ್ನು ವಿರೋಧಿಸುವವರ ಮಧ್ಯದಲ್ಲಿ ವೇದಿಕೆಯನ್ನು ಹಂಚಿಕೊಳ್ಳುವ ಸಂದರ್ಭವಿದೆ. ಕೋರ್ಟ್ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರವಿರುತ್ತದೆ. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ.
ವೃಷಭ ರಾಶಿ: ನಿಮ್ಮ ಆಲೋಚನಗಳನ್ನು ಮನೆಯವರ ಮೇಲೆ ಹೇರುವುದು ಬೇಡ. ಬಂಧುಗಳು ನಿಮ್ಮ ವ್ಯಕ್ತಿತ್ವದ ಬಗ್ಗೆ ಮಾತನಾಡುವರು. ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ತಿಳಿವಳಿಕಯಿಂದ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ಅಪರಿಚಿತರು ನಿಮ್ಮ ಸಖ್ಯವನ್ನು ಬಯಸಿ ಬರಬಹುದು. ವಿಚಾರ ಸಂಕೀರ್ಣದಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ತಿಳಿವಳಿಕೆ ಇಲ್ಲದವರಂತೆ ವರ್ತಿಸುವುದು ಬೇಡ. ನೂತನ ವಸ್ತ್ರವನ್ನು ಖರೀದಿ ಮಾಡಲಿದ್ದೀರಿ. ಕೌಟುಂಬಿಕವಾದ ಕೆಲವು ಜವಾಬ್ದಾರಿಗಳನ್ನು ಮಕ್ಕಳಿಗೆ ಕೊಟ್ಟು ಆರಾಮಾಗಿ ಇರುವಿರಿ. ಸಣ್ಣ ವ್ಯಾಪಾರಿಗಳಿಗೆ ಹೆಚ್ಚು ವ್ಯವಹಾರ ಆಗುವ ಸಾಧ್ಯತೆಗಳಿವೆ. ಧನದ ಆದಾಯವು ನಿರೀಕ್ಷೆಯನ್ನು ಪೂರ್ಣವಾಗಿ ತಲುಪದು. ಪಾಪ ಪುಣ್ಯದ ಲೆಕ್ಕಾಚಾರವನ್ನು ಮಾಡುವಿರಿ. ಸಿದ್ಧ ಉಡುಪು ತಯಾರಕರಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇರಲಿಸೆ. ಸಂಗಾತಿ ಮತ್ತು ಮಕ್ಕಳನ್ನು ಅವರಷ್ಟಕ್ಕೆ ಬಿಟ್ಟು ನೀವು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.
ಮಿಥುನ ರಾಶಿ: ಇಂದು ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಸ್ವ ಆಸಕ್ತಿಯಿಂದ ತೊಡಗಿಕೊಳ್ಳುವರು. ಆಯಾಸವಿದ್ದರೂ ಇನ್ನೊಬ್ಬರ ಒತ್ತಾಯಕ್ಕೆ ಅವರೊಂದಿಗೆ ವಾತುವಿಹಾರಕ್ಕೆಂದು ಹೋಗುವಿರಿ. ತಂತ್ರಜ್ಞರಿಗೆ ಹೊಸ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ದಂತ ವೈದ್ಯರಿಗೆ ಹೆಚ್ಚು ಅನುಕೂಲವಿರುತ್ತದೆ. ಬಂಧುಗಳ ಸಹಕಾರ ನಿಮಗೆ ಹೆಚ್ಚಾಗಿ ದೊರೆಯುತ್ತದೆ. ನಿಮಗೆ ಇಂದು ಯಾವುದೇ ವಿಚಾರ ಅತಿ ಎಂದು ಕಂಡರೆ ಅದನ್ನು ಬಿಡಿ. ಬದಲಾಯಿಸಿ ಮತ್ತೊಂದರ ಕಡೆ ಗಮನಹರಿಸಿ. ಕ್ರೀಡಾಪಟುಗಳಿಗೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಸೌಲಭ್ಯ ದೊರೆಯುತ್ತದೆ. ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರಿ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರುತ್ತದೆ. ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ. ವೃತ್ತಿಯಲ್ಲಿ ಯಾವುದೇ ರೀತಿ ವ್ಯತ್ಯಾಸವಿಲ್ಲ. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು.
ಕರ್ಕ ರಾಶಿ: ನೀವು ವಿದ್ಯಾಭ್ಯಾಸಕ್ಕಾಗಿ ಉತ್ತಮವಾದ ವಿದ್ಯಾಕೇಂದ್ರವನ್ನು ಹುಡುಕುವಿರಿ. ಸಾಮಾಜಿಕ ಕಾರ್ಯದ ಬಗ್ಗೆ ಆಸಕ್ತಿ ಬರುವುದು. ವಿದ್ಯುತ್ ಉಪಕರಣಗಳಿಂದ ಹಣವು ಖರ್ಚಾಗಬಹುದು. ಸಂಶೋಧಕರಿಗೆ ಸಂಶೋಧನೆಯಲ್ಲಿ ಉತ್ತಮ ಫಲಿತಾಂಶ ದೊರೆಯುವ ಸಾಧ್ಯತೆಗಳಿವೆ. ಉದ್ಯೋಗದ ನಿಮಿತ್ತ ದೂರದ ಸ್ಥಳಕ್ಕೆ ಹೋಗಿ ಬರುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಇಂದು ನಾನಾ ಸಮಸ್ಯೆಗಳು ಎದುರಾದರೂ ಅದನ್ನು ಧೈರ್ಯದಿಂದ ಎದುರಿಸಿ ಗೆಲ್ಲುವಿರಿ. ಶ್ರಮಕ್ಕೆ ಯೋಗ್ಯ ಫಲಿತಾಂಶ ಸಿಗದೇ ಇರಬಹುದು. ನಿಮ್ಮ ಚಾಣಾಕ್ಷದ ನಿರ್ಧಾರಗಳು ನಿಮ್ಮನ್ನು ಗುಂಪಿನಲ್ಲಿ ತೂಕದ ವ್ಯಕ್ತಿಯನ್ನಾಗಿಸುತ್ತದೆ. ಉದ್ಯೋಗದಲ್ಲಿ ತಾಂತ್ರಿಕ ಪರಿಣತರಿಗೆ ಹೆಚ್ಚಿನ ಸ್ಥಾನ ದೊರೆತು ಸಂತಸವಾಗುತ್ತದೆ. ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧಾನ ಮಾಡಬೇಕಾದೀತು.