AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ನಿರಂತರ ಪ್ರಯತ್ನಕ್ಕೆ ಫಲ, ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚು ಮಗ್ನರಾಗುವರು

ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 20 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ನಿರಂತರ ಪ್ರಯತ್ನಕ್ಕೆ ಫಲ, ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚು ಮಗ್ನರಾಗುವರು
ರಾಶಿ ಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Jun 20, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜೂನ್. 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:12 ರಿಂದ 03:49ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:06ರಿಂದ 07:43ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:20ರಿಂದ ಮಧ್ಯಾಹ್ನ 10:57ರ ವರೆಗೆ.

ಮೇಷ ರಾಶಿ: ಯಾರಾದರೂ ನಿಮ್ಮನ್ನು ನಿಂದಿಸಿ ನಿಮ್ಮ ಶಕ್ತಿಯನ್ನು ಕಡಿಮೆ ಮಾಡಲು ಬಯಸಬಹುದು. ಹೊಂದಾಣಿಕೆಯಿಂದ‌ ಕಾರ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಖುಷಿಯಾಗಿರುವಂತೆ ನಿಮ್ಮ ಸುತ್ತಲನ್ನು ರೂಪಿಸಿಕೊಳ್ಳಿ. ಪೂರ್ಣ ವಿಚಾರವನ್ನು ತಿಳಿದು ಮಾತನಾಡಿ.‌ ಅರ್ಧವಿಷಯವನ್ನು ತಿಳಿದು ಮಾತನಾಡಿದರೆ ಇನ್ನೊಬ್ಬರಿಗೆ ನೋವಾದೀತು. ಅವರ ಶಾಪಕ್ಕೂ ಗುರಿಯಾಗುವಿರಿ. ನಿಮ್ಮ ಮನಸ್ಸಿನಲ್ಲಿ ಒಂದು ಕೃತಿಯಲ್ಲಿ ಒಂದು ಎನ್ನುವ ವಿಷಯವು ಇಂದಿನ‌ ನಿಮ್ಮ ವರ್ತನೆಯಿಂದ ತಿಳಿಯಲಿದೆ. ನಿಮಗೆ ನೀವು ಮಾಡುವ ಕೆಲಸದ ಬಗ್ಗೆ ಗಮನವಿರಲಿ. ಸಾಹಸದಿಂದ ಏನಾದರೂ ಅನಾಹುತ ಮಾಡಿಕೊಳ್ಳಬಹುದು. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಇತರರ ಧಾರ್ಮಿಕ ನಂಬಿಕೆಯನ್ನು ನೀವು ಘಾಸಿಮಾಡುವಿರಿ.

ವೃಷಭ ರಾಶಿ: ಇಂದು ನಿಮಗೆ ವಾಸ್ತವದಲ್ಲಿ ಬದುಕುವುದು ಮುಖ್ಯ ಎಂದು ಎಲ್ಲ ಕಲ್ಪನೆಯನ್ನೂ ಕೈ ಬಿಡುವಿರಿ. ಯಾವುದಕ್ಕೂ ಇಂತಹ ಸನ್ನಿವೇಶ ಎದುರಾದಾಗ ಮೊದಲು ಯೋಚಿಸಿ. ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ ಇದೆ. ಕುತೂಹಲದ ನಿಮ್ಮ ಸ್ವಭಾವವು ಇಂದು ಜಗಜ್ಜಾಹಿರಾಗಲಿದೆ. ಸಭ್ಯತೆಯನ್ನು ರೂಢಿಸಿಕೊಳ್ಳುವುದು ಉತ್ತಮ. ಯಾರಾದರೂ ಏನನ್ನಾದರೂ ಬಂದು ಕೇಳಿದರೆ ಇಲ್ಲವೆನ್ನದೇ ಇರುವಷ್ಟರಲ್ಲಿ ಅಲ್ಪವನ್ನಾದರೂ ಕೊಡಿ. ಅದು ಅಕ್ಷಯವೂ ಆದೀತು ಮುಂದೊಂದು ದಿನ. ಅಸಾಧ್ಯವನ್ನು ಸಾಧಿಸುವ ಛಲವು ಒಳ್ಳೆಯದೇ. ನಿಭಾಯಿಸುವ ದಾರ್ಢ್ಯವನ್ನು ಬೆಳೆಸಿಕೊಳ್ಳಿ. ವೃತ್ತಿಜೀವನದಲ್ಲಿ ಆದ ಅಚಾತುರ್ಯದಿಂದ ಭಯವಾಗುವುದು. ವಿದೇಶದಲ್ಲಿ ಇರುವವರಿಗೆ ಆರೋಗ್ಯವು ಕೆಡಬಹುದು. ವ್ಯಾಪಾರಸ್ಥರು ಲಾಭವನ್ನು ಗಳಿಸುವತ್ತ ಯೋಜನೆ ರೂಪಿಸಿಕೊಳ್ಳುವುದು.

ಮಿಥುನ ರಾಶಿ: ಉನ್ನತ ವಿದ್ಯಾಭ್ಯಾಸಕ್ಕೆ ಎದುರಾಗುವ ಸಾಧಕ ಬಾಧಕಗಳ ಮಾಹಿತಿ ಇರಲಿ. ಬಲ್ಲವರಾದ ತಾವು ಸದಾ ಪ್ರಯತ್ನಶೀಲರು. ನಿರಂತರ ಪ್ರಯತ್ನಕ್ಕೆ ಫಲವಿಲ್ಲದಿಲ್ಲ. ಸಮಯವನ್ನು ನೀರೀಕ್ಷಿಸುತ್ತ ಕಾಲ ಕಳೆಯಬೇಕು. ಸಾಗುವ ದಾರಿಯು ಎಷ್ಟೇ ಚೆನ್ನಾಗಿದ್ದರೂ ಒಮ್ಮೆ ಹಿಂತಿರುಗಿ ನೋಡುವುದು ಒಳ್ಳೆಯದು. ಅನ್ಯರ ಜೊತೆಗಿನ ಅಸಂಬದ್ಧ ಮಾತುಕತೆಗಳನ್ನು ನಿಲ್ಲಿಸಿ. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗಬಹುದು. ವಿದ್ಯಾರ್ಥಿಗಳಿಗೆ ಆಟದಲ್ಲಿ ಹೆಚ್ಚು ಮಗ್ನರಾಗುವರು. ನಿಮ್ಮವರನ್ನು ಶತ್ರುಗಳನ್ನಾಗಿ ಮಾಡಿಕೊಳ್ಳುವಿರಿ. ಪ್ರಕ್ಷುಬ್ಧ ವಾತಾವರಣವಿರಬಹುದು ಇಂದು. ಪಡೆದುಕೊಳ್ಳುವಾಗ ಇರುವ ಸಂತೋಷ ಕಳೆದುಕೊಳ್ಳುವಾಗಲೂ ಇದ್ದರೆ ನೀವು ಸಾಮಾನ್ಯರಲ್ಲ. ದೈವಾನುಗ್ರಹದ ಅವಶ್ಯಕತೆ ಬಹಳ ಇದೆ. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶರಾಗಬೇಕಾಗುವುದು. ನಿಮ್ಮ ಮನಸ್ಸಿಗೆ ಬಾರದೇ ಇರುವ ಯಾವುದನ್ನೂ ನೀವು ಒಪ್ಪಿಕೊಳ್ಳಲಾರಿರಿ.

ಕರ್ಕ ರಾಶಿ: ಇಂದು ನೀವು ಅತಿಯಾದ ಆತುರದಲ್ಲಿ ಇರುವಿರಿ. ನಿಮ್ಮ ಹಿಂದೆ ಕಹಿಯಾದ ಮಾತುಗಳನ್ನು ಯಾರಾದರೂ ಆಡುವು ಕೇಳಿಬರಬಹುದು. ಆಕಾಶದಲ್ಲಿ ಕಾಣುವ ಎಲ್ಲ ಮೋಡಗಳು ಮಳೆಗರೆಯವು. ಎಲ್ಲರೂ ನಿಮಗೆ ಬೇಕಾದುದನ್ನು ಕೊಡುವವರಲ್ಲಿ ಮಾತ್ರ ಕೇಳಿ. ಮಾತುಗಳಿಂದ ನಿಮಗೆ ಕಿರಿ ಕಿರಿಯಾಗುವ ಸಾಧ್ಯತೆ ಇದೆ. ಮಕ್ಕಳು ಆಸ್ತಿಯ ವಿಚಾರದಲ್ಲಿ ಮಾನಸಿಕ ಹಿಂಸೆ ಕೊಡಬಹುದು. ಖರ್ಚು ಹೆಚ್ಚಾಯಿತು ಎನ್ನುವ ಆತಂಕ ಬೇಡ, ಆದಾಯಕ್ಕೂ ದಾರಿಯು ಸಿಗಲಿದೆ. ಉದ್ಯಮಿಗಳಿಗೆ ವ್ಯಾಪಾರಕ್ಕೆ ಸಂಬಂಧಿಸಿದ ಅನಿರೀಕ್ಷಿತ ಪ್ರಯಾಣವು ಬರಲಿದೆ‌. ಉದ್ಯೋಗದಲ್ಲಿ ಭಡ್ತಿ ಸಿಗಲಿ. ಸ್ತ್ರೀಯರು ನಿಮಗೆ ಶತ್ರುವಾಗುವರು. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು. ನಿಮ್ಮ ಮಿತಿಯಲ್ಲಿ ನೀವು ಇರುವುದು ಸೂಕ್ತ. ವಕೀಲ ವೃತ್ತಿಯವರಿಗೆ ಸ್ವಲ್ಪ ಸಮಾಧಾನ ಇರುವುದು.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್