Horoscope: ದಿನ ಭವಿಷ್ಯ: ಊಹೆಯಲ್ಲಿ ದಿನ ಕಳೆಯುವುದನ್ನು ಕಡುಮೆ ಮಾಡಿ

ನಿಮ್ಮ ರಾಶಿ ಧನು, ಮಕರ, ಕುಂಭ, ಮೀನ ಆಗಿದ್ದರೆ, ಬುಧವಾರ (ಆ. 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ: ಊಹೆಯಲ್ಲಿ ದಿನ ಕಳೆಯುವುದನ್ನು ಕಡುಮೆ ಮಾಡಿ
ದಿನಭವಿಷ್ಯ
Edited By:

Updated on: Aug 21, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ(ಆಗಸ್ಟ್​. 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:50 ಗಂಟೆ, ರಾಹು ಕಾಲ ಮಧ್ಯಾಹ್ನ 12:36 ರಿಂದ ಸಂಜೆ 14:09, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:02 ರಿಂದ 12:36ರ ವರೆಗೆ.

ಧನು ರಾಶಿ : ಅಲ್ಪ ಲಾಭಕ್ಕಾಗಿ ದೇಹವನ್ನು ದಂಡಿಸಬೇಕಾದೀತು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಅಧಿಕವಾದ ಸಂಪತ್ತನ್ನು ಗಳಿಸಬೇಕು ಎನ್ನುವ ಹಂಬಲವಿದ್ದರೂ ಅದನ್ನು ಪಡೆಯಲು ದಾರಿ ಸುಲಭವಿಲ್ಲ ಎಂದು ಅನ್ನಿಸಬಹುದು. ವರ್ತಮಾನದ ಬಾಳಿಗಿಂತ ಭವಿಷ್ಯವು ನಿಮಗೆ ಬಹಳ ರೋಚಕತೆಯದ್ದಾಗಿ ಕಾಣಬಹುದು. ಹಳೆಯ ಸ್ನೇಹಿತೆಯ ನೆನಪು ಮರುಕಳಿಸಬಹುದು. ಇಂದಿನ ಖರ್ಚು ನಿಮ್ಮಬಆದಾಯವನ್ನು ಹೆಚ್ಚು ಮಾಡಲು ಬೇಕಾದ ಫಲವನ್ನು ಕೊಟ್ಟೀತು. ಎಲ್ಲರ ಜೊತೆ ವಸ್ತುವನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನಿಮಗೆ ಬೇಕಾದ ವಸ್ತುವು ಸರಿಯಾದ ಸಮಯಕ್ಕೆ ಬಂದೊದಗದು. ತಾಳ್ಮೆಯನ್ನು ಕಳೆದುಕೊಳ್ಳಬಹುದು ಇಂದು. ಮಕ್ಕಳನ್ನು ಸ್ಪರ್ಧಾತ್ಮಕ ಜಗತ್ತಿಗೆ ಪ್ರೇರಿಸುವಿರಿ. ಅನಿರೀಕ್ಷಿತವಾಗಿ ಹಣವು ಖಾಲಿಯಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ವಿದೇಶದ ಜೊತೆಗೆ ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಏನೂ ಇಲ್ಲದವಗೆ ಹುಲ್ಲುಕಡ್ಡಿಯೂ ದೊಡ್ಡ ಆಸರೆ ಆದೀತು.

ಮಕರ ರಾಶಿ : ನಾಯಕರಾಗಿರುವವರಿಗೆ ಪ್ರಶಂಸೆ ಗೌರವಗಳು ಸಿಗಲಿವೆ. ಮನೆಯವರ ಜೊತೆ ಭವಿಷ್ಯದ ಚಿಂತನೆಯನ್ನು ಮಾಡಬಹುದು. ಕೆಲವು ಕಾಲದ ಚಿಂತನೆಯು ಇಂದು ನಿಮ್ಮಿಂದ ದೂರವಾಗಬಹುದು. ರಾಜಕೀಯವಾಗಿ ನೀವು ಹೊಸ‌ದಾರಿಯನ್ನು ಪ್ರಸಿದ್ಧರಾಗಲು ಆಯ್ಕೆ ಮಾಡಿಕೊಳ್ಳಬಹುದು. ನಿಮ್ಮನ್ನು ಯಾವುದಾದರೂ ಖಾಸಗಿ ಸಂಸ್ಥೆಗೆ ಮುಖ್ಯಸ್ಥರನ್ನಾಗಿ ಮಾಡಬಹುದು. ಸಣ್ಣ ವಿಚಾರಗಳಿಗೆ ಕೋಪವು ಸಹಜವಾಗಿ ಬಂದರೂ ಅದನ್ನು ಹಿಡಿದಿಟ್ಟುಕೊಳ್ಳಬೇಕಾದೀತು. ಕಳೆದು ಹೋದಮೇಲೆ‌ ಅದನ್ನು ಚಿಂತಿಸಿ ಉಪಯೋಗವಿಲ್ಲ‌. ನಿಮಗೆ ಏನೂ ಗೊತ್ತಾಗದೇ ಎಲ್ಲವೂ ನಡೆಯುತ್ತದೆ ಎಂವ ಕೋಪ ಇರಬಹುದು. ಸ್ತ್ರೀಯರಿಂದ ನಿಮ್ಮ‌ಬಗ್ಗೆ ಸುಳ್ಳು ಅಪವಾದಬರಬಹುದು. ಮನೆಯಲ್ಲಿ ನಿಮ್ಮ ಒಪ್ಪಿಗೆ ಸಿಗದೇ ಯಾವುದನ್ನೂ ಮಾಡಾರರು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.

ಕುಂಭ ರಾಶಿ : ಇಂದು ನಿಮ್ಮ ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲದಿಂದ ಸಾಧ್ಯವಾಗಿಸುವಿರಿ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಸ್ಥಳಕ್ಕೆ ಹೋಗುವಿರಿ. ಹಣವನ್ನು ನೀವು ಎಂದಿನಂತೆ ಖರ್ಚು ಮಾಡಬಾರದು. ನಿಮ್ಮ ಬೆಂಬಲಕ್ಕೆ ನಿಲ್ಲುವವರು ಯಾರು ಎಂಬ ಕುತೂಹಲವಿದ್ದರೂ ಸಣ್ಣ ಸುಳಿವು ಸಿಗಲಿದೆ. ನಿಮ್ಮ‌ ಮೇಲಿನ ಅಪವಾದವನ್ನು ನೀವು ಕಳೆದುಕೊಳ್ಳಲು ಹೆಚ್ಚು ಮಾತನಾಡುವಿರಿ. ಸಂಗಾತಿಯ ಮೇಲಿನ ಮೋಹದಿಂದ ತಪ್ಪು ಮಾಡುವ ಸಾಧ್ಯತೆ ಇದೆ. ಉನ್ನತ ಸ್ಥಾನಕ್ಕೆ ಹೋಗಲು ಬೇಕಾದ ಅರ್ಹತೆ ಇದ್ದರೂ ನೀವು ಅದನ್ನು ಪಡೆಯಲು ಇಷ್ಟಪಡುವುದಿಲ್ಲ. ಸಂಗಾತಿಯ ಮನೋಭಾವವನ್ನು ತಿಳಿಯಲು ನೀವು ಕೆಲವು ತಂತ್ರವನ್ನು ಬಳಸುವಿರಿ. ಅಸಹಾಯಕತೆ ಎಂದು ಮನಸಿಗೆ ಅನ್ನಿಸಬಹುದು. ಬಂಧುಗಳ ವಿಶ್ವಾಸವು ಇಂದು ಸಾಬೀತಾಗಬಹುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು.

ಮೀನ ರಾಶಿ : ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿ ರಿಂದಲೇ ನೋಡುವುದು ಕಷ್ಟ. ಮಾನವೀಯತೆಯನ್ನು ಕಿಂಚಿತ್ತಾದರೂ ಇರಿಸಿಕೊಳ್ಳಬಹುದು. ಸಂಗಾತಿಯ ಅನಿರೀಕ್ಷಿತ ಮಾತುಗಳು ನಿಮಗೆ ಆಶ್ಚರ್ಯಕರ ಎನಿಸಬಹುದು. ಆಯಾಸದಿಂದ‌‌ ಇಂದು ಸುಖವಾದ ನಿದ್ರೆಯನ್ನು ಮಾಡುವಿರಿ. ಕೆಲವರ ವ್ಯಕ್ತಿತ್ವವು ನಿಮಗೆ ಇಷ್ಟವಾದೀತು. ಲಾಭದಾಯಕವಾದ ಯೋಜನೆಗಳೂ ನಿಮ್ಮನ್ನು ನಷ್ಟದ ಕಡೆಗೆ ಕರೆದೊಯ್ಯುವುದು. ಊಹೆಯಲ್ಲಿ ದಿನ ಕಳೆಯುವುದನ್ನು ಕಡುಮೆ ಮಾಡಿ. ನೆಮ್ಮದಿಗೆ ಬೇರೆ ದಾರಿಯನ್ನು ಕಂಡುಕೊಳ್ಳಲಿದ್ದೀರಿ. ಅತಿಥಿಗಳಿಗೆ ಯೋಗ್ಯ ಸತ್ಕಾರವನ್ನು ಮಾಡಲಿದ್ದೀರಿ. ಅಶುಭವಾದ ಸಂಗತಿಯನ್ನು ಇಂದು ತರಲು ಹೋಗಬೇಡಿ. ಎಲ್ಲದಕ್ಕೂ ಕಾರಣವನ್ನು ಹುಡುಕುತ್ತ ಕಾಲಹರಣಮಾಡಬೇಡಿ. ದೈವಕೃಪೆ ಸ್ವಲ್ಪ ಕಡಿಮೆ ಇದ್ದು ಅದನ್ನು ಹೆಚ್ಚು ಮಾಡಿಕೊಳ್ಳಿ. ಮಾಡಲೇಬೇಕಾದ ಕಾರ್ಯಗಳ‌ ಬಗ್ಗೆ ಹೆಚ್ಚು ಗಮನ ಅಗತ್ಯ. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟುಮಾಡಿ ತೋರಿಸುವುದು ಸರಿಯಾಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)