AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದು ತಮ್ಮ ತಪ್ಪಿನ‌ ಅರಿವಾಗಿ ಪಶ್ಚಾತ್ತಾಪ ಪಡುವಿರಿ

ರಾಶಿ ಭವಿಷ್ಯ ಗುರುವಾರ (ಆ. 22): ನಿಮ್ಮ ರಾಶಿ ಧನು, ಮಕರ, ಕುಂಭ, ಮೀನ. ಆತುರದಲ್ಲಿ ಮಾಡಿದ ಕಾರ್ಯವನ್ನೇ ಮತ್ತೆ ಮಾಡಬೇಕಾದೀತು. ನಿಮ್ಮಿಂದ ಸಹಾಯವನ್ನು ಪಡೆದರೂ ಅದನ್ನು ಮರೆಯುವ ಹಿತಶತ್ರುಗಳು ಇರಬಹುದು. ನಿಮ್ಮ ಕಾರ್ಯವನ್ನು ನಕಾರಾತ್ಮಕವಾಗಿ ತಿಳಿಯಬಹುದು. ಮೇಲಧಿಕಾರಿಗಳ ಜೊತೆ ವಿವಾದಗಳು ಆಗಬಹುದು.

Horoscope: ಈ ರಾಶಿಯವರು ಇಂದು ತಮ್ಮ ತಪ್ಪಿನ‌ ಅರಿವಾಗಿ ಪಶ್ಚಾತ್ತಾಪ ಪಡುವಿರಿ
ರಾಶಿ ಭವಿಷ್ಯ
ಗಂಗಾಧರ​ ಬ. ಸಾಬೋಜಿ
| Edited By: |

Updated on:Aug 22, 2024 | 6:18 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಆಗಸ್ಟ್​ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸುಕರ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:49 ಗಂಟೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:43, ಯಮಘಂಡ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:02ರ ವರೆಗೆ.

ಧನು ರಾಶಿ: ಹತ್ತರ ಜೊತೆ ಹನ್ನೊಂದು ಎನ್ನುವ ಭಾವ ಬೇಡ. ಪಾಲಕರಿಗೆ ನಿಮ್ಮನ್ನು ದೂರ ಕಳುಹಿಸುವುದು ಕಷ್ಟವಾದೀತು. ಉತ್ತಮ ಯೋಜನೆ ನಿಮ್ಮ ಉನ್ನತಾಧಿಕಾರಕ್ಕೆ ಪೂರಕವಾಗಬಹುದು. ಮನೆಯಲ್ಲಿ ಆಡಿದ ಮಾತುಗಳಿಂದ ನೀವು ಹೊರಬರಲು ಸಮಯಬೇಕಾದೀತು. ಸಂಗಾತಿಯ ಮೇಲೆ ಅನುಮಾನದ ದೃಷ್ಟಿ ಇರಲಿದೆ‌. ನಿಮ್ಮ ತನವನ್ನು ಉಳಿಸಿಕೊಳ್ಳಲು ಕೆಲವನ್ನು ಬಿಡಬೇಕಾಗುವುದು. ವಿದ್ಯಾಭ್ಯಾಸವು ಪೂರ್ತಿಯಾದರೂ ಕೆಲಸದ ಚಿಂತೆಯು ಕಾಡಬಹುದು. ದೇವರ ಮೊರೆ ಹೋಗದೇ ಬೇರೆ ದಾರಿ ಇಲ್ಲ ಅನ್ನಿಸಬಹುದು. ಸಾಲವು ಸಿಗುವುದು ಎಂದು ನಂಬಿದ್ದರೆ ನಿಮಗೆ ದುಃಖವಾದೀತು. ಸ್ವಾರ್ಥದಿಂದ ನಿಮಗೇ ಕಷ್ಟಗಳು ಗೊತ್ತಾಗುತ್ತದೆ. ಸಹೋದ್ಯೋಗಿಗಳ‌ ಮಾತನ್ನು ಕೇಳಿ ನೀವು ಕೆಡುವಿರಿ. ನೀವು ಮಾತನಾಡುವುದು ನಿಮ್ಮ ವೈಯಕ್ತಿಕದ್ದಾಗಿರದು. ಸುಲಭವೆಂದು ಕೆಲಸವು ಕಷ್ಟವೆನಿಸಬಹುದು. ಕಾಮಗಾರಿಯ ಬಗ್ಗೆ ಸದ್ಭಾವವಿರದು. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು.

ಮಕರ ರಾಶಿ; ಇಂದು ನಿಮ್ಮ ವ್ಯಾಪಾರದಲ್ಲಿ ಚೇತರಿಕೆ ಕಾಣಿಸಿಕೊಂಡರೂ ನೀವು ಯಾವುದೋ ಗಹನವಾದ ಆಲೋಚನೆಯಲ್ಲಿಯೇ ಇರುವಿರಿ. ತಪ್ಪು ಆಲೋಚನೆಗಳಿಂದ ಮಾಡಿದ ಕಾರ್ಯವು ತಪ್ಪಾಗಿಯೇ ಆಗುತ್ತದೆ. ನೀವು ಸಂಗಾತಿಯ ಮೇಲೆ ಭಾವನಾತ್ಮಕವಾಗಿ ಇರುವಿರಿ. ಉದ್ಯೋಗದ ನಿಮಿತ್ತ ಸಂಗಾತಿಯನ್ನು ಬಿಡಲು ನಿಮಗೆ ಕಷ್ಟವಾದೀತು. ಆರ್ಥಿಕ ಸ್ಥಿತಿಯನ್ನು ಬಹಳ ಪರಿಶ್ರಮದಿಂದ‌ ಸರಿಮಾಡಿಕೊಳ್ಳುವಿರಿ. ಕೌಶಲ್ಯವನ್ನೂ ಬೆಳೆಸಿಕೊಳ್ಳುವುದು ಇಂದಿನ ವಿದ್ಯಮಾನಕ್ಕೆ ಸರಿಹೊಂದುವುದಾಗಿದೆ. ಇಂದಿನ ಜೀವನದ ಬಗ್ಗೆ ದೈವಜ್ಞರ ಬಳಿ ಕೇಳಿ ಅಗತ್ಯವಾದ ಪರಿಹಾರವನ್ನು ಮಾಡಿಕೊಳ್ಳುವುದು ಒಳ್ಳೆಯದು. ಅತಿಥಿಗಳ ಜೊತೆ ಇಂದಿನ ಸಮಯವನ್ನು ಕಳೆಯಬಹುದು. ವಿವಾದವಾಗುವ ಮಾತುಗಳನ್ನು ಆಡಬೇಡಿ. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು.

ಕುಂಭ ರಾಶಿ: ಒಂದೇ ಉದ್ದೇಶ ಹೊಂದಿದ ಹಲವರನ್ನು ಭೇಟಿ ಮಾಡುವಿರಿ. ಯಾವುದನ್ನಾದರೂ ಮೊದಲು ಬಂದಂತೆ ಸ್ವೀಕರಿಸಿ. ಅನಂತರ ಅದನ್ನು ನಿಮಗೆ ಬೇಕಾದಂತೆ ಮಾಡಿಕೊಳ್ಳಬಹುದು. ಭರವಸೆಯೇ ನಿಮಗೆ ಭವಿಷ್ಯದ ಬೆಳಕಾಗಲಿದೆ. ಮಾನಸಿಕವಾಗಿ ನೀವು ದುರ್ಬಲವಾದರೆ ಸ್ವಲ್ಪ ಸಮಯ ಏಕಾಂತವಾಗಿ ಇರಿ. ನಿಮ್ಮ ಯೋಜನೆಗಳು ಇನ್ನೊಬ್ಬರಿಗೆ ಒಪ್ಪಿಗೆಯಾಗುವಂತೆ ಇರಲಿ. ಇಂದು ನಿಮಗೆ ತಪ್ಪಿನ‌ ಅರಿವಾಗಿ ಪಶ್ಚಾತ್ತಾಪ ಉಂಟಾಗಬಹುದು. ಸಂಬಂಧಗಳಲ್ಲಿಯೂ ನೀವು ಲಾಭವೇನು ಎಂದು ಲೆಕ್ಕಹಾಕುವಿರಿ. ನಿಮ್ಮನ್ನು ಯಾರದರೂ ಆಡಿಕೊಂಡಾರು. ಅದನ್ನು ಲೆಕ್ಕಿಸದೆ ನಿಮ್ಮ ಗುರಿಯ ಕಡೆ ಗಮನವಿರಲಿ. ಹೆಚ್ಚು ಮನೋರಂಜನೆಯಿಂದ ಸಮಯವನ್ನು ಕಳೆಯಬಹುದು. ಇಂದು ನೀವು ಸಿಡಿದೇಳುವ ಸಂದರ್ಭವು ಬರಬಹುದು. ಎಲ್ಲದಕ್ಕೂ ಕೂಡಲೇ ಫಲ ಸಿಗಬೇಕು ಎಂಬ ಮಾನಸಿಕತೆಯಿಂದ ಹೊರಬರಬೇಕಾಗಬಹುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು. ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

ಮೀನ ರಾಶಿ: ನೀವು ಇಂದು ಅಕಾರಣವಾಗಿ ಚಿಂತೆ ಮಾಡುವಿರಿ. ನಿಮಗೆ ವ್ಯಾಪಾರದ ನಷ್ಟವನ್ನು ಸಹಿಸಿಕೊಳ್ಳುವುದು ಕಷ್ಟವಾದೀತು. ಪೂರ್ಣ ವಿವರಗಳನ್ನು ಪಡೆದು ಕಾರ್ಯಪ್ರವೃತ್ತರಾಗಿ. ಆತುರದಲ್ಲಿ ಮಾಡಿದ ಕಾರ್ಯವನ್ನೇ ಮತ್ತೆ ಮಾಡಬೇಕಾದೀತು. ನಿಮ್ಮಿಂದ ಸಹಾಯವನ್ನು ಪಡೆದರೂ ಅದನ್ನು ಮರೆಯುವ ಹಿತಶತ್ರುಗಳು ಇರಬಹುದು. ನಿಮ್ಮ ಕಾರ್ಯವನ್ನು ನಕಾರಾತ್ಮಕವಾಗಿ ತಿಳಿಯಬಹುದು. ಮೇಲಧಿಕಾರಿಗಳ ಜೊತೆ ವಿವಾದಗಳು ಆಗಬಹುದು. ಅಧಿಕವಾಗಿ ತಿನ್ನಬೇಕೆಂಬ ಆಸೆ ಹೆಚ್ಚಾಗುವುದು. ಕಲಾವಿದರಿಗೆ ಬೆಂಬಲವು ಕಡಿಮೆ ಆದಂತೆ ಅನ್ನಿಸೀತು. ಮನೆಗೆ ಸಹಾಯವನ್ನು ಮಾಡಲು ಮನಸ್ಸು ಇರಲಿದೆ. ಇನ್ನೊಬ್ಬರನ್ನು ನೋಡಿ ನಿಮಗೆ ಅಸೂಯೆ ಹೆಚ್ಚಾಗುವುದು. ಮನೆಯಲ್ಲಿ ನಡೆಯುವ ಘಟನೆಗಳು ಕುತೂಹಲ ತರಿಸಬಹುದು. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ.

Published On - 12:25 am, Thu, 22 August 24

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ