Horoscope: ರಾಶಿಭವಿಷ್ಯ; ಮನಸ್ಸಿಗೆ ಮಂಕು ಕವಿದಂತಾಗುವುದು, ಚುರುಕುತನ ಕಂಡುಕೊಳ್ಳಲು ದಾರಿ ಹುಡುಕುವಿರಿ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರಾಗಿದ್ದರೇ, 16 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ಮನಸ್ಸಿಗೆ ಮಂಕು ಕವಿದಂತಾಗುವುದು, ಚುರುಕುತನ ಕಂಡುಕೊಳ್ಳಲು ದಾರಿ ಹುಡುಕುವಿರಿ
ದಿನ ಭವಿಷ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 16, 2024 | 12:10 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:41 ರಿಂದ ಮಧ್ಯಾಹ್ನ 11:11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ ಸಂಜೆ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:41 ರಿಂದ 08:11 ರ ವರೆಗೆ.

ಮೇಷ ರಾಶಿ: ಇಂದು ನಿಮಗೆ ಅನಿರೀಕ್ಷಿತ ಒತ್ತಡಗಳು ಬರಬಹುದು. ಯಾರ ಸಹಕಾರವೂ ಇಲ್ಲದೇ ಸ್ವತಂತ್ರವಾಗಿ ಇರಲು ಇಚ್ಛಿಸುವಿರಿ‌. ದೂರದ ಬಂಧುಗಳನ್ನು ಅಕಸ್ಮಾತ್ ಆಗಿ ಭೇಟಿಯಾಗುವ ಸಂದರ್ಭವು ಬರಬಹುದು. ಯಾರನ್ನೂ ನಿಕೃಷ್ಟವಾಗಿ ಕಾಣುವುದು ಬೇಡ. ಅವರವರ ಶಕ್ತಿ, ಸಾಮರ್ಥ್ಯಗಳು ಅವರಿಗಿರುತ್ತವೆ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾಡಿ ಕಿಂಚಿತ್ ಆದಾಯವನ್ನು ಮಾಡಿಕೊಳ್ಳುವಿರಿ. ನಿಮ್ಮ ಪ್ರಗತಿಯ ಬಗ್ಗೆ ಇತರರು ಪ್ರಶಂಸಿಸಬಹುದು.

ವೃಷಭ ರಾಶಿ: ಇಂದು ನೀವು ಭಾವನಾತ್ಮಕವಾಗಿ ಬಹಳ ದುರ್ಬಲರಾದಂತೆ ಕಾಣುವಿರಿ. ನಿಮ್ಮ ಮನಸ್ಸಿಗೆ ನೋವನ್ನು ಕೊಡುವವರಿಂದ ನೀವು ದೂರವಿರುವಿರಿ. ಆಸ್ತಿಯ ಬಗ್ಗೆ ಮೊಹವು ಬರಬಹುದು. ಶ್ರಮವಿಲ್ಲದೇ ಆದಾಯವನ್ನು ಪಡೆಯುವ ಬಯಕೆ ಇರುವುದು. ನಿಮ್ಮ ಪೂರ್ವ ನಿಶ್ಚಿತ ಯೋಜನೆಯನ್ನು ಬದಲಾಯಿಸುವಿರಿ. ನಿಮ್ಮ ದೌರ್ಬಲ್ಯವನ್ನು ಉಪಯೋಗಿಸಿಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಇನ್ನೊಬ್ಬರನ್ನು ನೀವು ನಯವಾಗಿ ವಂಚಿಸುವಿರಿ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು.

ಮಿಥುನ ರಾಶಿ: ಇಂದು ನೀವು ವಿಶ್ರಾಂತಿಯಲ್ಲಿಯೇ ದಿನವನ್ನು ಕಳೆಯುವಿರಿ. ಪ್ರಯಾಣ ಮಾಡುವ ಮನಸ್ಸಿದ್ದರೂ ಕೆಲವು ಅಶುಭ ಸೂಚನೆಯಿಂದ ಅದನ್ನು ಮುಂದೂಡುವಿರಿ. ವ್ಯವಹಾರದ ಪ್ರಜ್ಞೆಯನ್ನು ಇಟ್ಟುಕೊಂಡು ಮಾತನಾಡಿ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮ ಹುಸಿತನವು ಪ್ರಕಟವಾಗಬಹುದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು.

ಕಟಕ ರಾಶಿ: ಇಂದು ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸುವುದು. ಸ್ಪರ್ಧೆಗಳಲ್ಲಿ ನೀವು ಸೋಲುವ ಸಾಧ್ಯತೆ ಇದೆ. ನೌಕರರ ಬೇಡಿಕೆಯನ್ನು ಈಡೇರಿಸಲು ನೀವು ಸಮರ್ಥರಾಗಬೇಕು. ಆದರೆ ಸಾಮರ್ಥ್ಯವನ್ನೂ ಅರಿತುಕೊಳ್ಳುವುದು ಮುಖ್ಯವಾಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಕುಟುಂಬದ ಸಮಸ್ಯೆಯನ್ನು ಹಾಗೆಯೇ ಬಿಟ್ಟುಬಿಡುವಿರಿ. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮಗೆ ಸಂಬಂಧಿಸಿದ ವಿಚಾರದಲ್ಲಿ ಮಾತ್ರ ನಿಮ್ಮ ಹಸ್ತಕ್ಷೇಪ ಇರಲಿ. ತಲ್ಲೀನರಾಗಿ ಎಲ್ಲ ಕಾರ್ಯವನ್ನು ಮಾಡುವಿರಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು.