AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಇಂದು ಬೆಲೆಯುಳ್ಳ ಯಾವುದಾದರೂ ವಸ್ತುವೊಂದು ಕಣ್ಮರೆಯಾದೀತು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜುಲೈ. 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಇಂದು ಬೆಲೆಯುಳ್ಳ ಯಾವುದಾದರೂ ವಸ್ತುವೊಂದು ಕಣ್ಮರೆಯಾದೀತು
ದಿನಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 03, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜುಲೈ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:46 ರಿಂದ ಬೆಳಿಗ್ಗೆ09:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:00 ರಿಂದ 12:37ರ ವರೆಗೆ.

ಧನು ರಾಶಿ : ಇಂದು ಯಾವ ಕಾರ್ಯವನ್ನು ಮಾಡುವಾಗಲೂ ಉದ್ವೇಗಪಡುವ ಅಗತ್ಯ ಇರದು. ಒಂದೊಮ್ಮೆ ಅಂತಹ ಸಂದರ್ಭವನ್ನು ನಿರ್ಲಕ್ಷಿಸುವುದು ಉತ್ತಮ. ನಿಮ್ಮನ್ನು ಕಂಡು ಹೊಟ್ಟಕಿಚ್ಚು ಪಡುವ ಜನರಿರುತ್ತಾರೆ ನಿಮ್ಮ ಸುತ್ತ. ಅವರನ್ನು ನಗಣ್ಯ ಮಾಡಬೇಡಿ. ಅವರನ್ನೇ ದೂರವಿಡಿ ಅಥವಾ ಅವರಿಂದ ನೀವೇ ದೂರವಾಗಿ. ಚರಾಸ್ತಿಯ ವಿಚಾರವಾಗಿ ಮಾತುಗಳು ಮನೆಯಲ್ಲಿ ಬರಬಹುದು. ತಂದೆಯ ಮಾತಿಗೆ ಗೌರವವನ್ನು ಕೊಡದೇ ಅಹಂಕಾರ ತೋರಿಸಬೇಡಿ. ತುರ್ತು ಅವಶ್ಯಕತೆಗಳಿಗೆ ಹಣವನ್ನು ವ್ಯಯಮಾಡಿ. ರಮಣೀಯ ಸ್ಥಳಗಳಿಗೆ ಹೋಗಬೇಕೆನಿಸುವುದು. ಆಲಸ್ಯದಿಂದ ವಿಶ್ರಾಂತಿ ಪಡೆಯುವಿರಿ. ಯಂತ್ರೋಪಕರಣಗಳ ಮಾರಾಟ ಮಾಡುವವರಿಗೆ ಅಲ್ಪ ಲಾಭವಾಗಬಹುದು. ಸಂಗಾತಿಯ ಜೊತೆ ಮುನಿಸು ಕಡಿಮೆ ಮಾಡಿಕೊಳ್ಳಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು.

ಮಕರ ರಾಶಿ : ಇಂದು ನಿಮ್ಮ ಸಂಗಾತಿಯು ನಿಮಗೆ ಪ್ರಿಯವಾದುದನ್ನೇ ಮಾಡುವರು. ಸರ್ಕಾರಿ ಕೆಲಸಗಳು ನಿಧಾನವಾಗಿ ಮುಂದುವರಿಯುವುದು. ಮಾತಿನಿಂದ ಮಾತ್ರ ಎಲ್ಲವೂ ಸರಿಯಾಗುವುದು ಎನ್ನುವ ಭ್ರಮೆಯಿಂದ ಹೊರಬನ್ನಿ. ಗೃಹನಿರ್ಮಾಣದ ಕಾರ್ಯವು ಹಣಕಾಸಿನ ಅಭಾವದಿಂದ ಸ್ಥಗಿತಗೊಳ್ಳಬಹುದು. ಕಾನೂನಾತ್ಕಮಕವಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗದು. ಉನ್ನತಸ್ಥಾನಕ್ಕೆ ಹೋಗಬೇಕೆನ್ನುವ ಬಯಕೆ ಇರಲಿದೆ. ನಿಮಗೆ ಯೋಗ್ಯ ಮಾರ್ಗದರ್ಶನದ ಕೊರತೆ ಇದ್ದು ಇದರಿಂದ ಅವಕಾಶವನ್ನು ಕಳೆದುಕೊಳ್ಳುವಿರಿ. ನಿಮ್ಮ ಅನಂತರ ಕೆಲಸ ಮಾಡುವವರಿಂದ ನಿಮಗೆ ಕೆಲವು ಮಾತುಗಳು ಸಿಗಬಹುದು. ಮಾತಿನ ಮೇಲೆ ಹಿಡಿತವನ್ನು ಇಟ್ಟು, ಆಲೋಚಿಸಿ ಮಾತನಾಡಿ. ಯಾವುದೇ ನಿರ್ಧಾರಗಳನ್ನು ಆ ಕ್ಷಣದಲ್ಲಿಯೇ ತೆಗೆದುಕೊಂಡು ಆಮೇಲೆ ಚಿಂತೆಗೆ ಒಳಗಾಗುವಂತೆ ಮಾಡಿಕೊಳ್ಳಬೇಡಿ. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ನಿಮ್ಮ ಗುಟ್ಟನ್ನು ಬಿಟ್ಟಕೊಡುವುದು ಬೇಡ.

ಕುಂಭ ರಾಶಿ : ಇಂದಿನ ನಿಮ್ಮ ಹೂಡಿಕೆ ನಿಮಗೆ ಬಹು ಉಪಕಾರಿ. ಬೇರೆಯ ದಿನಕ್ಕೆ ಹೋಲಿಸಿದರೆ ಇಂದಿನ ಆರ್ಥಿಕ ಸುಧಾರಣೆಯು ತಕ್ಕಮಟ್ಟಿಗೆ ಇರಲಿದೆ. ಯಾರೊಂದಿಗೂ ಸಂಪೂರ್ಣ ನಿಜವನ್ನು ಹೇಳಿಬಿಡಬೇಡಿ. ನಿಮ್ಮ‌ ಶಿಸ್ತಿನ ಕೆಲಸದಿಂದ ಕೆಲವರಿಗೆ ಬೇಸರವಾಗಬಹುದು.‌ ದೂರ ಬಂಧುಗಳ ಪರಿಚಯವಾಗಲಿದೆ. ಒತ್ತಡಗಳಿದ್ದರೂ ನೀವು ನಿಮ್ಮ ಕೆಲಸ ಮಾಡಿ ಮುಗಿಸುವಿರಿ. ಪ್ರೀತಿಯ ಮಾತುಗಳಿಂದ ಆಗುವ ಕಾರ್ಯವನ್ನು ಬೈದು ಮಾಡಿಸಲಾಗದು. ವಾಹನ ಚಾಲನೆಯಲ್ಲಿ ತೊಂದರೆಯಾದೀತು. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ಇದ್ದು ಯಥಾಶಕ್ತಿ ಸಂಪತ್ತನ್ನು ಕೊಡುವಿರಿ. ಸಹೋದರರಿಂದ ಸಂಪತ್ತು ಸಿಗಲಿದೆ. ದಾಂಪತ್ಯದಲ್ಲಿ ಕಲಹವಿದ್ದರೂ ನೆಮ್ಮದಿ ಇರಲಿದೆ. ಕಳೆದುಕೊಂಡ ವಸ್ತುವನ್ನು ಪಡೆಯಲಿದ್ದೀರಿ. ಆಪ್ತರೆಂದು ಮಾತಿನಲ್ಲಿ ಹಿಡಿತವಿಲ್ಲದೇ ಏನನ್ನಾದರೂ ಹೇಳುವಿರಿ. ಅಪಹಾಸ್ಯ ಮಾಡಿಯಾರು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು.

ಮೀನ ರಾಶಿ : ಇಂದು ಬೆಲೆಯುಳ್ಳ ಯಾವುದಾದರೂ ವಸ್ತುವೊಂದು ಕಣ್ಮರೆಯಾದೀತು. ಆಲೋಚಿಸದೇ ಯಾವುದೇ ಸಾಹಸ ಕಾರ್ಯದ ಕಡೆ ಮುನ್ನುಗ್ಗಬೇಡಿ. ಉದ್ಯೋಗದ ನಿಮಿತ್ತ ದೂರ ಪ್ರಯಾಣವು ಅನಿವಾರ್ಯವಾಗುವುದು. ಸಂತಾನದ ಶುಭ ವಾರ್ತೆಯಿಂದ ಇಂದು ಸಂತಸ. ಯೋಜಿತ ಕಾರ್ಯಗಳನ್ನು ಒಂದೊಂದಾಗಿಯೇ ಮಾಡಲು ತೊಡಗಬಹುದು. ವ್ಯವಹಾರದ ಒತ್ತಡದ ನಡುವೆಯೂ ಏಕಾಂತವನ್ನು ಬಯಸಿ ಒಬ್ಬರೇ ಎಲ್ಲಿಗಾದರೂ ಹೋಗುವಿರಿ. ನೂತನ ವಾಹನವನ್ನು ಖರೀದಿಸಲು ಚುರುಕಾಗುವಿರಿ. ಇಂದು ನಿಮ್ಮ ಕೆಲಸವು ನಿಮಗೆ ತೃಪ್ತಿ ಕೊಡುವುದು. ಗಳಿಸಿದ್ದನ್ನು ಕಳೆದುಕೊಳ್ಳುವಾಗ ಯೋಚಿಸಿ. ಅವಶ್ಯಕತೆ ಇದ್ದರೆ‌ ಮಾತ್ರ ಮುಂದುವರಿಯುವುದು ಉತ್ತಮ. ಭವಿಷ್ಯದ ನಾಳೆಯ ಕುರಿತು ಅತಿಯಾದ ಯೋಚನೆ ಬೇಕಾಗಿಲ್ಲ.‌ ಖುಷಿಯಿಂದ ಸ್ವೀಕರಿಸಿ ಎಲ್ಲವನ್ನೂ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕ ಫಲವು ಪ್ರಾಪ್ತವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!