Horoscope: ದಿನಭವಿಷ್ಯ: ಇಂದು ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 06, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.​​​​​6ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಸುಕರ್ಮ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ 14:08ರಿಂದ 15:45ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04ರಿಂದ ಬೆಳಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:18 ರಿಂದ 10:55ರ ವರೆಗೆ.

ಸಿಂಹ ರಾಶಿ :ಇಂದು ಇನ್ನೊಬ್ಬರ ಸುಖವನ್ನು ಕಸಿದುಕೊಂಡು ಯಾವ ಸುಖವನ್ನು ಪಡೆಯಬಹುದು? ನಿಮ್ಮ ಬಗೆಗಿನ ಸದ್ಭಾವಗಳು ಬದಲಾದಾವು. ಸಣ್ಣ ಪುಟ್ಟ ವಿಷಗಳಿಗೂ ಕೋಪಗೊಳ್ಳುವಿರಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಹಣ ಹೂಡಿ ಉತ್ತಮ ಲಾಭ ಗಳಿಸುವಿರಿ. ನಿಮ್ಮ ಹಣಕಾಸಿನ ವ್ಯವಹಾರದಲ್ಲಿ ಬೇರೆಯವರ ಹಸ್ತಕ್ಷೇಪದಿಂದ ತೊಂದರೆ ಉಂಟಾಗಬಹುರು. ಆತ್ಮೀಯರೊಬ್ಬರ ಜೊತೆ ವಿವಾದ ಉಂಟಾಗಬಹುದು. ನಿಮ್ಮ ಕಾರ್ಯಕ್ಷೇತ್ರದಲ್ಲಿ ಅತಿಯಾದ ಕಾರ್ಯದಿಂದ ನಿಮಗೆ ತೊಂದರೆಯಾದೀತು. ನಿಮ್ಮ ದೊಡ್ಡಸ್ತಿಕೆಯನ್ನು ಬಿಟ್ಟು ವ್ಯವಹರಿಸಿ. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವರು. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು.

ಕನ್ಯಾ ರಾಶಿ :ಇಂದು ಮನೆಯ ಸಣ್ಣ ಖರ್ಚುಗಳೂ ದೊಡ್ಡದಾದ ಮೊತ್ತವನ್ನು ಕಳೆಯುವುದು. ಎಲ್ಲ ಕಾರ್ಯದಿಂದ ಹಣ ಬರುತ್ತದೆ ಎಂದೇನಿಲ್ಲ. ನಿಮ್ಮ ಜೀವನವನ್ನು ನೀವೇ ಲಘುವಾಗಿ ಕಾಣುವುದು ಬೇಡ. ನಿಮ್ಮ ಮಾನಸಿಕ ಸ್ಥಿತಿ ಬಲಾಢ್ಯವಾಗಿರಲಿ. ಬೇರೆಯವರ ತಪ್ಪನ್ನು ಎಲ್ಲರಿಗೂ ತಿಳಿಯುವಂತೆ ಮಾಡುವಿರಿ. ಸದಾಕಾಲ ಓಡಾಟದಲ್ಲಿ ಮಗ್ನರಾಗುವಿರಿ. ಮಾಡುವ ತಪ್ಪನ್ನು ಮರೆಮಾಚುವಿರಿ. ಹಣಕಾಸಿನ ವ್ಯವಹಾರದಲ್ಲಿ ಅಸಹಜ ನಿಲುವು ತಾಳುವಿರಿ. ನಿಮ್ಮ ನಡೆಯು ಎಲ್ಲರಿಗೂ ಒಪ್ಪಿಗೆಯಾಗುವಂತೆ ಇರಲಿ. ಹೊಗಳಿಕೆಯನ್ನು ನಂಬುವಿರಿ. ಅತಿಯಾದ ಖರ್ಚು ವೆಚ್ಚಗಳನ್ನು ಕಡಿತಗೊಳಿಸಿ. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ. ಹಿರಿಯರು ನಿಮ್ಮ‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪವನ್ನು ಮಾಡಿಕೊಂಡು ಇರುವುದು ಕಷ್ಟ.

ತುಲಾ ರಾಶಿ :ನೀವು ಅನುಮಾನ ಬರುವಂತಹ ವರ್ತನೆಯನ್ನು ತೋರಿಸುವಿರಿ. ಸ್ವಲ್ಪ ಕಾಲದ ಏನನ್ನೂ ಯೋಚಿಸದೇ ಇರಲು ಪ್ರಯತ್ನಿಸಿ. ಮನಸ್ಸಿನ ಶಕ್ತಿ ದ್ವಿಗಣವಾಗುವುದು. ನಕಾರಾತ್ಮಕತೆ ಆಲೋಚನೆಗಳೂ ದೂರವಾಗುವುದು. ಯಾವುದೋ ಉದ್ದೇಶಕ್ಕೆ ಇಟ್ಟ ಸಂಪತ್ತು ಮತ್ಯಾವುದಕ್ಕೋ ಖರ್ಚಾಗಲಿದೆ. ಆತುರದಿಂದ ಉದ್ಯೋಗ ಬದಲಾಯಿಸಿ ಒತ್ತಡಕ್ಕೆ ಒಳಗಾಗುವಿರಿ. ಕೆಲಸಕ್ಕೆ ಮೊದಲ ಆದ್ಯತೆ ನೀಡುವಿರಿ. ನಿಮ್ಮ ಬಗ್ಗೆ ಕುಟುಂಬದ ಸದಸ್ಯರಿಗೆ ಬೇಸರ ಇರುತ್ತದೆ. ವ್ಯಯುಕ್ತಿಕ ಜೀವನದ ಬಗ್ಗೆ ಯೋಚಿಸಬೇಕಾಗುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕವಾಗಿ ಬಳಲುವಿರಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ.

ವೃಶ್ಚಿಕ ರಾಶಿ :ಇಂದು ನಿಮ್ಮ ಕಲ್ಪನೆಯಂತೆ ಬದುಕು ನಡೆಯದು ಎಂಬ ಸತ್ಯ ತಿಳಿಯುವುದು. ದೂರಪ್ರಯಾಣ ಸುಖಕರವಾಗಿ ಇರುವಿದಾದರೂ ಅನಂತರ ಕಷ್ಟಪಡಬೇಕಾದೀತು. ಯಾರನ್ನೋ ಅವಮಾನಿಸಲು ಹೋಗಿ ಹಳ್ಳಕ್ಕೆ ಬೀಳಬೇಡಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ನೀಡುತ್ತಾರೆ. ಕಷ್ಟವೆನಿಸಿದರೂ ನಿಮ್ಮ ಮನದ ಆಶೋತ್ತರಗಳನ್ನು ಈಡೇರಿಸಿಕೊಳ್ಳುವಿರಿ. ಸಾಲದ ವ್ಯವಹಾರದಲ್ಲಿ ತೊಂದರೆ ಎದುರಾಗುತ್ತದೆ. ಸಂಗಾತಿ ಜೊತೆ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ನಿಮ್ಮ ಕಾರ್ಯಗಳಿಂದ ಪ್ರೀತಿಪಾತ್ರರ ಹೃದಯವನ್ನು ಗೆಲ್ಲಲು ಸಫಲರಾಗುವಿರಿ. ಬಹಳ‌ ದಿನಗಳ ಅನಂತರ ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕುಳಿತು ಆಪ್ತವಾಗಿ ಮಾತನಾಡುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಕಾದಾಟದಿಂದ ಸಮಯವು ವ್ಯರ್ಥವಾಗಲಿದೆ. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ