Horoscope 18 March: ದಿನಭವಿಷ್ಯ; ಇಂದಿನ ಸೋಲಿನಿಂದ ಪಾಠ ಕಲಿಯುವಿರಿ, ಸಿಟ್ಟನ್ನು ತಾಳ್ಮೆಯ ಅಸ್ತ್ರದಿಂದ ಎದುರಿಸಿ
Nitya Bhavishya: 2024 ಮಾರ್ಚ್ 18 ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಆಯುಷ್ಮಾನ್, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:10 ರಿಂದ ಮಧ್ಯಾಹ್ನ 09:40ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:10 ರಿಂದ 12:41ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:41 ರ ವರೆಗೆ.
ಮೇಷ ರಾಶಿ: ನೀವು ಬರುವ ಆದಾಯವನ್ನು ಕ್ರಮಬದ್ಧವಾಗಿ ಉಳಿಸುವ ಕಡೆ ಯೋಚಿಸಬಹುದು. ಸಂಗಾತಿಯ ಮೇಲಿನ ಕೋಪವನ್ನು ಕಡಿಮೆ ಮಾಡಿಕೊಂಡು ನೀವೇ ಮಾತನಾಡಿಸಲು ಮುಂದಾಗುವಿರಿ. ಮಕ್ಕಳ ಬಗ್ಗೆ ಗಂಭೀರವಾದ ಚಿಂತನೆ ಇರಲಿದೆ. ಸೌಂದರ್ಯದ ಬಗ್ಗೆ ಅಧಿಕ ಕಾಳಜಿ ಇರುವುದು. ನಿಮ್ಮ ಮಾತುಗಳನ್ನು ನೀವು ಪರೀಕ್ಷಿಸಿಕೊಳ್ಳುವುದು ಉತ್ತಮ. ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಯಾರದೋ ಮಾತಿಗೆ ಕುಣಿಯುವುದು ಬೇಡ. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದರೆ ಮುಂದುವರಿಯಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ ಕೆಲಸವನ್ನು ಮಾಡುವಿರಿ.
ವೃಷಭ ರಾಶಿ: ನಿಮಗೆ ವಿನ್ಯಾಸದಲ್ಲಿ ಹಲವು ಗೊಂದಲಗಳು ಇರಲಿದ್ದು ಯಾರದ್ದಾದರೂ ಹಿರಿಯರ ಸಲಹೆಯನ್ನು ಪಡೆಯಿರಿ. ಕಾನೂನಾತ್ಮಕ ಹೋರಾಟಕ್ಕೆ ಹಣವನ್ನು ಖರ್ಚುಮಾಡಬೇಕಾದೀತು. ವಿನ್ಯಾಸಕ್ಕೆ ಸಂಬಂಧಿಸಿದಂತೆ ಆದಾಯವು ಹೆಚ್ಚಾಗುವುದು. ಆತುರ ಪಡದೇ ಸಮಾಧಾನ ಚಿತ್ತದಿಂದ ಕಾರ್ಯವನ್ನು ಮಾಡಲು ಪ್ರಯತ್ನಿಸಿ. ಮಕ್ಕಳಿಗೆ ನೀವು ಕೊಟ್ಟ ಸ್ವಾತಂತ್ರ್ಯ ಅತಿಯಾದೀತು. ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಸಾಹಸ ಕಾರ್ಯಕ್ಕೆ ಒಮ್ಮೆಲೇ ಮುಂದಾಗುವುದು ಬೇಡ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ.
ಮಿಥುನ ರಾಶಿ: ನಿಮ್ಮ ಕಾರ್ಯವು ಆಗಬೇಕಾದರೆ ಅದಕ್ಕೆ ಯೋಗ್ಯವಾದ ಮರ್ಯಾದೆಯ ಅವಶ್ಯಕತೆಯೂ ಇರಬೇಕಿದೆ. ವಿವಾಹದ ವಿಳಂಬಕ್ಕೆ ನಿಮ್ಮ ಮನಸ್ಸು ದುರ್ಬಲವಾಗಬಹುದು. ನಿಮ್ಮ ಬೇಸರವನ್ನು ದೂರ ಮಾಡಲು ಏನೇ ಹೇಳಿದರೂ ನಿಮಗೆ ನೆಮ್ಮದಿ ಸಿಗದು. ಮೇಲಧಿಕಾರಿಗಳ ಗುರಿಯನ್ನು ತಲುಪಲು ಶ್ರಮವು ಹೆಚ್ಚಾಗಬಹುದು. ಆಭರಣದ ಬಗ್ಗೆ ಮೋಹ ಉಂಟಾಗುವುದು. ಹಿರಿಯರಿಗೆ ಅಗೌರವದ ಮಾತುಗಳನ್ನು ಆಡಬೇಕಾದೀತು. ನಿಮ್ಮ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ಕಲಾವಿದರಿಗೆ ಅನಿರೀಕ್ಷಿತ ಗೌರವವು ಪ್ರಾಪ್ತವಾಗಬಹುದು. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಬೇಕಾದಷ್ಟು ಹಣವಿದ್ದರೂ ತುರ್ತಿಗೆ ಪ್ರಯೋಜನಕ್ಕೆ ಬಾರದೇಯಿರುವುದು. ಎಲ್ಲರದ್ದೂ ಒಂದು ದಾರಿಯಾದರೇ ನಿಮ್ಮದೇ ಒಂದು ದಾರಿ.
ಕಟಕ ರಾಶಿ: ನಿಮ್ಮ ಆಸ್ತಿಯ ವಿಚಾರದಲ್ಲಿ ಗೊಂದಲ ಇರಲಿದ್ದು ಅದನ್ನು ಯಾವುದೋ ಮುಖಾಂತರ ವ್ಯಕ್ತಪಡಿಸುವಿರಿ. ಬೇಸರದಲ್ಲಿ ಏನನ್ನಾದರೂ ಮಾಡಿಕೊಳ್ಳಲು ಹೋಗಬಹುದು. ನಿಮ್ಮ ಸ್ವಂತ ನಿರ್ಧಾರವು ನಿಮಗೇ ಸರಿಯಾಗಿ ಕಾಣದೇ ಬದಲಾಯಿಸುವಿರಿ. ಇನ್ನೊಬ್ಬರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಸರಿ ಕಾಣದು. ಸಂಗಾತಿಯ ಆಯ್ಕೆಯು ಗೊಂದಲವಾಗಿರುವುದು. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ಹಳೆಯ ಪ್ರೀತಿಯು ನೆನಪಾಗಿ ಮೌನವಾಗುವಿರಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ದೃಷ್ಟಿಯಲ್ಲಿ ಸ್ವಾರ್ಥಿಯಂತೆ ಕಾಣಿಸುವಿರಿ. ಯಾವುದನ್ನೂ ಅನುಭವಿಸಲೂ ಯೋಗ್ಯವಾದ ಕಾಲವು ಬೇಕಾಗುವುದು. ಇಂದು ನೀವು ಯಾವುದಾದರೂ ವಿಚಾರವನ್ನು ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ.
ಸಿಂಹ ರಾಶಿ: ಸಂಗಾತಿಯ ಜೊತೆಗಿನ ಮನಸ್ತಾಪವನ್ನು ದೂರ ಮಾಡಿಕೊಳ್ಳಬೇಕಿದೆ. ರಾಜಕಾರಣದಲ್ಲಿ ನಿಮಗೆ ಮೋಸವಾಗಬಹುದು. ಸೌಂದರ್ಯದ ಬಗ್ಗೆ ಹೆಚ್ಚು ಆಲೋಚನೆಗಳು ಬರಬಹುದು. ನೆರೆ ಹೊರೆಯರಲ್ಲಿ ಸೌಹಾರ್ದತೆ ಇರಲಿ. ಇಂದು ಯಾರಿಗೋ ಸಹಾಯ ಮಾಡಲು ಹೋಗಿ ವಂಚಿತರಾಗುವಿರಿ. ಮೂರ್ಖರಂತೆ ವರ್ತಿಸುವುದು ಬೇಡ. ಸ್ತ್ರೀಯರಿಗೆ ಮೇಲಧಿಕಾರಿಗಳ ಮಾತು ಬೇಸರ ತರಿಸಬಹುದು. ಉದ್ಯೋಗದ ಅವಕಾಶಗಳ ನಿರೀಕ್ಷೆಯಲ್ಲಿ ಇರುವಿರಿ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಕೆಲವರ ಮಾತಿಗೆ ಉತ್ತರವನ್ನು ಕೊಡುವುದು ಇಷ್ಟವಾಗದು. ಇಂದು ನಿಮ್ಮ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ನಿಮ್ಮ ದೌರ್ಬಲ್ಯವನ್ನು ಯಾರಾದರೂ ಬಳಸಿಕೊಳ್ಳಬಹುದು.
ಕನ್ಯಾ ರಾಶಿ: ನಿಮ್ಮ ಕಾರ್ಯದ ವಿಧಾನವು ಸರಳವಾಗಿದ್ದು ಇತರರ ಮೆಚ್ಚುಗೆ ಪಡೆಯಬಹುದು. ಅನಾರೋಗ್ಯದ ಮೂಲವನ್ನು ಕಂಡುಕೊಂಡು ಅದರ ನಿವಾರಣೆಗೆ ಯೋಗ್ಯವಾದ ಶೈಲಿಯನ್ನು ರೂಪಿಸಿಕೊಳ್ಳಿ. ಯಾವುದಾದರೂ ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಾಧ್ಯತೆ ಇದೆ. ಇಂದು ಯಾವುದೇ ವಿವಾದಿತ ಮಾತುಗಳನ್ನು ಆಡದಂತೆ ಎಚ್ಚರ ವಹಿಸಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಕುಟುಂಬದ ಜೊತೆ ಸೌಹಾರ್ದತೆ ಉಂಟಾಗುವುದು. ಇತರರ ಜೊತೆ ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಮಕ್ಕಳ ಬಗ್ಗೆ ಅತಿಯಾದ ಮೋಹವಿರಲಿದೆ.
ತುಲಾ ರಾಶಿ: ಸಂಬಂಧಗಳಲ್ಲಿ ಉಂಟಾದ ಬಿರುಕನ್ನು ಸರಿ ಮಾಡಿಕೊಳ್ಳವ ಕಡೆ ನಿಮ್ಮ ಪ್ರಯತ್ನವು ಇರುವುದು. ಸಹೋದರರ ನಡುವೆ ಕಲಹವು ಉಂಟಾಗಬಹುದು. ಎಲ್ಲವನ್ನೂ ತಿಳಿದಿದ್ದೇನೆ ಎಂಬ ಅಹಂಕಾರವು ಬರಬಹುದು. ವೃತ್ತಿಯಲ್ಲಿ ಆದಾಯವು ಕುಸಿತವು ಕಾಣಿಸಬಹುದು. ಒಪ್ಪಿಕೊಂಡ ಕಾರ್ಯಕ್ಕೆ ಹಣದ ಕೊರತೆಯಿಂದ ನಿಧಾನವಾಗಲಿದೆ. ಪರಿಚಿತರು ಆಪ್ತರಾಗಬಹುದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ತಯಾರಿ ನಡೆಸುವಿರಿ. ನಿಮ್ಮ ಹೆಸರಿನಿಂದ ಬೇರೆಯವರು ಕೆಲಸ ಮಾಡಿಕೊಳ್ಳಬಹುದು. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮವನ್ನು ಮತ್ತೆ ಯಾರಾದರೂ ನೆನಪಿಸುವರು. ತಪ್ಪನ್ನು ಒಪ್ಪಿಕೊಳ್ಳದೇ ಉದ್ಧಟತನವನ್ನು ತೋರಿಸುವಿರಿ.
ವೃಶ್ಚಿಕ ರಾಶಿ: ನೀವು ಇಂದು ಕೆಲವು ವಿಚಾರಕ್ಕೆ ಹಠವನ್ನು ಮಾಡುವುದು ಬೇಡ. ಈಗಾಗಲೇ ಮಾಡಿಕೊಂಡ ಸಾಲವನ್ನು ಸರಿಯಾದ ಸಮಯಕ್ಕೆ ತೀರಿಸಲು ಪ್ರಯತ್ನವನ್ನು ಮಾಡಿ. ತಾಯಿಯ ಆರೋಗ್ಯಕ್ಕೆ ತುರ್ತು ಚಿಕಿತ್ಸೆಯನ್ನು ಮಾಡಬೇಕಾದೀತು. ಯಾರಾದರೂ ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಹುದು. ನಿಮ್ಮ ಔದಾರ್ಯವು ನಿಮ್ಮವರಿಗೆ ಸರಿ ಕಾಣದು. ಇಂದಿನ ಸೋಲಿನಿಂದ ಪಾಠ ಕಲಿಯುವಿರಿ. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ಸಿಟ್ಟನ್ನು ತಾಳ್ಮೆಯ ಅಸ್ತ್ರದಿಂದ ಎದುರಿಸಿ, ಕಾರ್ಯವನ್ನು ಸಫಲಗೊಳಿಸಿಕೊಳ್ಳಿ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ ಮೇಲೆ ಬರಲಿದೆ.
ಧನು ರಾಶಿ: ಇಂದು ನಿಮ್ಮ ನಿಗದಿತ ಸಮಯವು ಮತ್ಯಾರದೋ ಕಾರಣದಿಂದ ಬದಲಾಗಬಹುದು. ನಿಮ್ಮ ಖರ್ಚನ್ನು ನಿಯಂತ್ರಿಸುವ ಯೋಚನೆ ಮಾಡಲೇ ಬೇಕು. ನಿಮಗೇ ನಿಮ್ಮ ಆತ್ಮವಿಶ್ವಾಸದ ಬಗ್ಗೆ ಇಂದು ಸಂದೇಹ ಬರಬಹುದು. ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಯಾರಾದರೂ ಮಾಡುವರು. ಹೊಸದಾಗಿ ಆರಂಭಿಸಿದ ಉದ್ಯಮದ ಫಲವು ಒಂದೊಂದಾಗಿಯೇ ಸಿಗುತ್ತಿರುವುದು ನಿಮಗೆ ಸಂತೋಷವನ್ನು ಕೊಡುವುದು. ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ ಮನಸ್ಸಿನಿಂದ ಮಾತನಾಡುವಿರಿ. ನೀವು ಮಾಡುವ ಕಾರ್ಯದಲ್ಲಿ ಧೈರ್ಯವನ್ನು ಕಳೆದುಕೊಳ್ಳುವುದು ಬೇಡ.
ಮಕರ ರಾಶಿ: ಇಂದು ನೀವು ಹಿರಿಯ ಮಾತಿನ ಮೇಲೆ ಅನಾದರ ಬರುವುದು. ಇದರಿಂದ ಅವರು ನಿಮ್ಮ ಮೇಲೆ ಸಿಟ್ಟಾಗಬಹುದು. ನಿಮಗೆ ಬಂದ ಅವಕಾಶವನ್ನು ಮತ್ಯಾರಿಗೋ ಬಿಟ್ಟುಕೊಡಬೇಕಾಗುತ್ತದೆ. ಚಾತುರ್ಯದಿಂದ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಸಂಗಾತಿಯ ಬಗ್ಗೆ ನಿಮ್ಮ ನಿಲವು ಬದಲಾಗಬಹುದು. ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕಾರ್ಯವನ್ನು ಮಾಡಲು ಓಡಾಟ ಮಾಡುವಿರಿ. ಯಾರದೋ ಅಪರಿಚಿತರ ಸಂಪರ್ಕವನ್ನು ಮಾಡಬೇಕಾದೀತು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು, ಎಚ್ಚರಿಕೆಯಿಂದ ಇರಿ.
ಕುಂಭ ರಾಶಿ: ನೀವು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಬೇಡ. ಮಕ್ಕಳಿಗೆ ಒಂದೇ ರೀತಿಯ ಪ್ರೀತಿ ತೋರಿಸಿ. ಆದಾಯದ ಹೆಚ್ಚು ಪಾಲನ್ನು ಭವಿಷ್ಯದ ವಿದ್ಯಾಭ್ಯಾಸಕ್ಕೆ ತೆಗೆದಿಡುವಿರಿ. ಹೊಸ ಕೆಲಸವನ್ನು ಆರಂಭಿಸುವ ಮೊದಲು ಅಥವಾ ಶುಭ ಕಾರ್ಯಕ್ಕೆ ತೆರಳುವಾಗ ಇಷ್ಟದೇವತಾ ಪ್ರಾರ್ಥನೆಯನ್ನು ಮರೆಯದಿರಿ. ದೀರ್ಘಪ್ರಯಾಣವಾದರೂ ಆಯಾಸವನ್ನು ದೂರಮಾಡೀತು. ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ತಂತ್ರಜ್ಞರು ವಹಿಸಿಕೊಂಡ ಕಾರ್ಯದ ಗಡುವುದು ಸಮೀಪಿಸಿದ್ದು, ತುರ್ತು ಕಾರ್ಯವನ್ನು ಮಾಡಬೇಕಿದೆ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ ಜೊತೆ ಸಂಘರ್ಷ ಬೇಡ. ಆಂತರಿಕ ಸಂಘರ್ಷಕ್ಕೆ ಮಂಗಲ ಹಾಡಿ.
ಮೀನ ರಾಶಿ: ಇಂದು ನೀವು ಕೂಡಿಟ್ಟಿರುವ ಹಣವು ಒಂದೇ ಬಾರಿ ಖಾಲಿಯಗಬಹುದು. ಆದಾಯವನ್ನು ಹೆಚ್ಚುಮಾಡಿಕೊಳ್ಳಲೇಬೇಕಾದ ಸ್ಥಿತಿ ಎದುರಾಗುವುದು. ಅಪಾಯಕಾರಿಯಾದ ವ್ಯವಹಾರದಲ್ಲಿ ತೊಡಗುವುದು ಬೇಡ. ಅಪರಿಚಿತರ ನೋವಿಗೆ ಸ್ಪಂದಿಸುವ ಮನಸ್ಸು ನಿಮ್ಮದಾಗುವುದು. ನಿಮಗೆ ಇಷ್ಟವಾಗದ ಕೆಲಸಕ್ಕೆ ಸಿಟ್ಟಾಗುವ ಸಾಧ್ಯತೆ ಇದೆ. ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಯಾವದೇ ಸಂದರ್ಭದಲ್ಲಿಯೂ ಗಾಬರಿಯಾಗದೇ ಸಮಯಪ್ರಜ್ಞೆಯಿಂದ ಮುನ್ನಡೆಯಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು.
ಲೋಹಿತ ಹೆಬ್ಬಾರ್-8762924271 (what’s app only)
