Horoscope: ದಿನ ಭವಿಷ್ಯ; ನಿಮ್ಮ ಏಳ್ಗೆಯನ್ನು ಕಂಡು ಶತ್ರುಗಳು ಸಂಕಟಪಡುತ್ತಾರೆ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 25 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸಿದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ ಮಧ್ಯಾಹ್ನ 10:53ರ ವರೆಗೆ, ಯಮಘಂಡ ಕಾಲ 02:06ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.
ಧನು ರಾಶಿ : ಇಂದು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಿನ್ನಡೆಯಾಗುವುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ನೂತನ ಗೃಹನಿರ್ಮಾಣದ ಕನಸು ಕಾಣುವಿರಿ.ಒಳ್ಳೆಯ ಕೆಲಸವನ್ನು ಮಾಡುವ ಚಿಂತನೆಯನ್ನು ಮಾಡುವಿರಿ. ಎಲ್ಲವೂ ಕ್ಷಣದಲ್ಲಿ ಆಗಬೇಕು ಎನ್ನುವ ಉದ್ವೇಗವವನ್ನು ಬಿಟ್ಟು ಬಿಡಿ. ಸಮಾಜದಲ್ಲಿ ನಿಮ್ಮ ಹೆಸರು ಕೇಳಿಬರಲಿದೆ. ಅನಾರೋಗ್ಯದಿಂದ ಕಂಗೆಡಬಹುದು. ತೈಲವ್ಯಾಪಾರಿಗಳು ಹೆಚ್ಚು ಲಾಭವನ್ನು ಪಡೆವರು. ನಿಮ್ಮಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ನಿಮ್ಮ ಪಾಲಿನ ಕೆಲಸ ಕಾರ್ಯಗಳಲ್ಲಿ ಚುರುಕುತನ ಕಂಡುಬಂದು ಮುನ್ನಡೆ ಸಾಧಿಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭದಾಯಕ ವಾತಾವರಣ ಕಂಡುಬರಲಿದೆ. ನಿಮ್ಮ ಖರೀದಿಯಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಭೋಗದ ವಿಧಾನಗಳು ಹೆಚ್ಚಾಗುತ್ತವೆ.
ಮಕರ ರಾಶಿ : ನೀವು ಹಿಂದೆ ಆಗಿಹೋದ ಘಟನೆಗಳನ್ನು ನೆನೆಸಿಕೊಂಡು ವ್ಯಥೆಪಡುವಿರಿ. ಸಹೋದರರ ಜೊತೆ ಪ್ರೀತಿಯಿಂದ ಇರಲು ಬಯಸುವಿರಿ. ಬದಲಾಗಬೇಕು ಎನ್ನುವ ಹಂಬಲವು ನಿಮ್ಮಲ್ಲಿ ಅತಿಯಾಗಿರಬಹುದು. ಸರಿಯಾದ ಬದಲಾವಣೆಯನ್ನು ಹೊಂದಿರಿ. ಉದ್ಯೋಗದಲ್ಲಿ ನಷ್ಟವಾಗಬಹುದು ಅಥವಾ ಉದ್ಯೋಗವು ನಷ್ಟವಾಗುವ ಭೀತಿಯೂ ಇರಲಿದೆ. ವಿದ್ಯಾಭ್ಯಾಸದ ಕುರಿತು ಮಕ್ಕಳಿಗೆ ಪಾಠವನ್ನು ಮನೆಯಲ್ಲಿ ಮಾಡುವರು. ನಿಮಗದು ಅಸಹ್ಯ ವಿಷಯವಾಗುವುದು. ನಿಮ್ಮ ಬೆಳವಣಿಗೆಗೆ ಸಹಕರಿಸಿದವರ ನೆನಪನ್ನು ಮಾಡಿಕೊಳ್ಳವಿರಿ. ವ್ಯಾಪಾರದಲ್ಲಿನ ಹೊಸ ಒಪ್ಪಂದಗಳು ಲಾಭದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತವೆ. ಅಮೂಲ್ಯವಾದದ್ದನ್ನು ಕಳೆದುಕೊಳ್ಳುವಿರಿ. ಕೌಟುಂಬಿಕ ವಿಚಾರಗಳಲ್ಲಿ ಒತ್ತಡಗಳು ದೂರವಾಗಿ ನೆಮ್ಮದಿ ಕಂಡುಬರಲಿದೆ. ಉದ್ಯೋಗ, ವ್ಯವಹಾರಗಳಲ್ಲಿ ಏರುಗತಿಯನ್ನು ಕಂಡು ಸಮಾಧಾನವಾಗಲಿದೆ. ನಕಾರಾತ್ಮಕ ವಿಚಾರಗಳ ಗಮನ ಕೊಟ್ಟು ನಿಮ್ಮ ಸಮಯವು ಹಾಳಾಗುವುದು.
ಕುಂಭ ರಾಶಿ : ನಿಮ್ಮ ಏಳ್ಗೆಯನ್ನು ಕಂಡು ಶತ್ರುಗಳು ಸಂಕಟಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ರಾಜಕೀಯ ನಾಯಕರ ಭೇಟಿಯಾಗಿ, ನಿಮಗೊಂದು ಮಾರ್ಗವು ಸಿಗಲಿದೆ. ಅಚ್ಚರಿಯ ಕೆಲವು ಸಂಗತಿಗಳು ನಿಮಗೆ ಕಾದಿರಬಹುದು. ಅಪರಿಚಿತರ ಭೇಟಿಯಿಂದ ಸ್ವಲ್ಪ ಕಳವಳವಾಗಲಿದೆ. ನಿಯಮಗಳನ್ನು ಮುರಿಯಬೇಕು ಎನ್ನುವ ಮನಃಸ್ಥಿತಿಯು ಇರಲಿದೆ. ಅತಿಯಾದ ಪ್ರಯಾಣವನ್ನು ನೀವು ನಿಲ್ಲಿಸುವುದು ಉತ್ತಮ. ಇಲ್ಲವಾದರೆ ಅದರ ಪರಿಣಾಮವನ್ನು ಅನುಭವಿಸಬೇಕಾಗುವುದು. ಕೆಲವು ಅಹಿತಕರ ಜನರನ್ನು ಭೇಟಿಯಾಗುವುದರಿಂದ ಅನಗತ್ಯ ತೊಂದರೆಗಳನ್ನು ಎದುರಿಸಬೇಕಾಗಬಹುದು. ಉದ್ಯೋಗ, ವ್ಯಾಪಾರ, ವ್ಯವಹಾರಗಳಲ್ಲಿ ಉಲ್ಲಾಸಕರ ವಾತಾವರಣ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ನೆಮ್ಮದಿ ತರಲಿದೆ. ಆಸ್ತಿಯ ವಿಚಾರದಲ್ಲಿ ಅಧಿಕ ಲಾಭ ಸಿಗಲಿದೆ.
ಮೀನ ರಾಶಿ : ಇಂದು ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವದಿಂದ ಕಾಣಲಿದ್ದೀರಿ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದು ಸಾಕಾರಗೊಳ್ಳುವುದು. ಬಂಧುಗಳ ವಿಯೋಗವಾರ್ತೆಯು ಬರಬಹುದು. ನೀವಂದು ಅಶಕ್ತರಿಗೆ ಸಹಾಯ ಮಾಡುವಿರಿ. ಅವರ ದೃಷ್ಟಿಯಲ್ಲಿ ನೀವೇ ಶ್ರೇಷ್ಠರಾಗುವಿರಿ. ಆಲಸ್ಯದಿಂದ ಬಂದಿರುವ ಅವಕಾಶವನ್ನು ಕೈಚೆಲ್ಲಿ ಕುಳಿತುಕೊಳ್ಳಬೇಡಿ. ನಿಮ್ಮ ನಿರ್ಧಾರಕ್ಕೆ ಹಿಂದಿನ ಅನುಭವಗಳೇ ನಿಮಗೆ ಸಹಾಯವಾಗಲಿವೆ. ಇರುವವರನ್ನು ಬಿಟ್ಟು ಇನ್ನೊಬ್ಬರ ನಂಬಿ ಮೋಸಹೋಗಬೇಡಿ. ನೀವು ಯಾವುದೇ ನಿರ್ಧಾರಕ್ಕೆ ಕಟ್ಟುಬೀಳದೇ ಸ್ವತಂತ್ರವಾಗಿ ಇರಲು ಬಯಸುವಿರಿ. ಸ್ವಂತ ವ್ಯಾಪಾರ, ವ್ಯವಹಾರ ಹಾಗೂ ಕೌಟುಂಬಿಕ ವಿಚಾರಗಳಲಿದ್ದ ಒತ್ತಡಗಳು ನಿವಾರಣೆಯಾಗಲಿವೆ. ಶುಭ ಕಾರ್ಯದ ನಿರ್ಧಾರವು ಪ್ರಯತ್ನ ಬಲದಿಂದ ಫಲ ನೀಡಲಿದೆ. ಇಂದು ನಿಮ್ಮ ವೈವಾಹಿಕ ಜೀವನವು ಸಂತೋಷಕರವಾಗಿರುತ್ತದೆ.
-ಲೋಹಿತ ಹೆಬ್ಬಾರ್-8762924271 (what’s app only)




