AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಸಂತಸ ವಾತಾವರಣವು ಮನೆಯಲ್ಲಿ ಇರುವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಸಂತಸ ವಾತಾವರಣವು ಮನೆಯಲ್ಲಿ ಇರುವುದು
ರಾಶಿ ಭವಿಷ್ಯ
TV9 Web
| Edited By: |

Updated on: May 27, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:06 ರಿಂದ 03:43ರ ವರೆಗೆ.

ಧನು ರಾಶಿ: ಇಂದು ವಿದ್ಯಾರ್ಥಿಗಳಿಗೆ ತಂದೆಯಿಂದ ಅಗತ್ಯವಿರುವ ಧನವು ಲಭ್ಯವಾಗಬಹುದು. ಅಧರ್ಮ ಮಾರ್ಗದಲ್ಲಿ ಹೋಗಲು ಯಾರದರೂ ಪ್ರೇರಣೆ ಕೊಡಬಹುದು. ಖರ್ಚು ಹೆಚ್ಚಾಗಬಹುದು. ಆನಾರೋಗ್ಯವಿದ್ದರೂ ಅದನ್ನು ಲೆಕ್ಕಿಸದೇ ನಿಮ್ಮ ಕೆಲಸದದಲ್ಲಿ ತೊಡಗುವಿರಿ. ಪೂರ್ವಾಪರಜ್ಞಾನವಿಲ್ದೇ ಪರರ ನಿಂದನೆಯ ಕಾರ್ಯದಲ್ಲಿ ತಲ್ಲೀನರಾಗಿರುವಿರಿ. ನಿಮ್ಮ ಅಂತರಂಗವು ಸರಿಯಾಗಿ ಇನ್ನೊಬ್ಬರಿಗೆ ತಿಳಿಯುವುದು. ನಿಮ್ಮ ಸ್ವಭಾವವು ಇತರರಿಗೆ ಇಷ್ಟವಾಗದೇ ಹೋಗಬಹುದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ನಿಮ್ಮ ಹಣವನ್ನು ಪರಿಚಿತರು ಕೇಳಬಹುದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು.

ಮಕರ ರಾಶಿ: ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳು ಮಾಡಿಕೊಳ್ಳುವಿರಿ. ಹಿರಿಯರ ಸಲಹೆಯನ್ನು ಪಡೆಯಿರಿ. ಸುಮ್ಮನೆ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಮನಸ್ಸು ಶಾಂತವಾಗುವುದು. ಒತ್ತಡದಲ್ಲಿ ಸಿಲುಕಿಕೊಳ್ಳಬೇಡಿ. ಕೆಲಸದಲ್ಲಿ ಎಂತಹ ಒತ್ತಡವಿದ್ದರೂ ನಿಮ್ಮ ಹತೋಟಿಯಲ್ಲಿ ನೀವಿರಿ. ಕೆಲಸಗಳು ಒಂದೊಂದಾಗಿಯೇ ಮುಗಿಯುವುವು. ಸಂತಸ ವಾತಾವರಣವು ಮನೆಯಲ್ಲಿ ಇರುವುದು. ಸುಂದರಜೀವನ ನಮ್ಮ ಪೂರ್ವಜರ ಪುಣ್ಯದ ಫಲವೆಂದು ಇಂದು ಆನ್ನಿಸಬಹುದು. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹಿತೈಷಿಗಳ ಸಹವಾಸದಿಂದ ಮನಸಿಗೆ ಸಂತಸ ಉಂಟಾಗುವುದು. ಹೊಸ ವ್ಯವಹಾರಕ್ಕೆ ಹಿಂದೇಟು ಮನಸ್ಸು ಹಾಕುವುದು. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಮಕ್ಕಳಿಗೆ ಪ್ರೀತಿ ತೋರಿಸುವ ಅವಶ್ಯಕತೆ ಇರುವುದು.

ಕುಂಭ ರಾಶಿ: ಇಂದು ಮನೆಯಿಂದ ದೂರವಿರುವ ನಿಮಗೆ ಮನೆಯ ನೆನಪಾಗುವುದು. ಎಂದೋ ಹೂಡಿದ ಹಣವು ಇಂದು ಉಪಯೋಗಕ್ಕೆ ಬರಲಿದೆ. ವಾಹನದಲ್ಲಿ ಸಂಚಾರವನ್ನು ಮಾಡುವುದರಿಂದ ನಿಮಗೆ ಕೆಲವು ಅನಾನುಕೂಲತೆಗಳು ಆಗಬಹುದು. ನಿಮ್ಮ ಅಜ್ಞಾನದಿಂದ ಆದ ಕೆಲಸಕ್ಕೆ ನೀವೇ ಹೊಣೆಗಾರರಾಗುವಿರಿ. ಮನಸ್ಸಿನಲ್ಲಿಯೇ ಸಂಕಟಪಟ್ಟುಕೊಳ್ಳುವುದನ್ನು ಬಿಟ್ಟು, ಆಪ್ತರ ಜೊತೆ ಹಂಚಿಕೊಳ್ಳಿ. ಮನಸ್ಸು ಹಗುರಾದೀತು. ಕಛೇರಿಯಲ್ಲಿ ನಿಮಗೆ ಹೊಸ ನಾಯಕ ಬರಬಹುದು. ಅವರನ ಜೊತೆ ನಿಮ್ಮ ವರ್ತನೆಯು ಆಪ್ತವಾಗಿ ಇರಲಿದೆ‌. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು. ನೀವು ರುಚಿಕರವಾದ ಆಹಾರದಿಂದ ಸಂತೋಷಿಸುವಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ.

ಮೀನ ರಾಶಿ: ಇಂದು ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹ ಉತ್ಸಾಹವು ಕಡಿಮೆ ಇರುವುದು. ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ಸೋಲನ್ನು ಒಪ್ಪಿಕೊಳ್ಳಲು ನಿಮಗೆ ಇಂದು ಆಗದು. ನಿಮ್ಮ ಬುದ್ಧಿಯಿಂದ ನಿಮಗೆ ಆಗಬೇಕಾದ ಕೆಲಸಗಳನ್ನು ಮಾಡಿಕೊಳ್ಳುವಿರಿ. ಆರ್ಥಿಕವಾಗಿ ಸುಧಾರಣೆಯಾಗಲಿದೆ. ಆಕಸ್ಮಿಕವಾಗಿ ಬಂದ ವಾರ್ತೆಯು ನಿಮಗೆ ಖುಷಿಯನ್ನೂ ಬೇಸರವನ್ನೂ ತರಬಹುದು. ಆಪ್ತರ ಜೊತೆ ದೂರಪ್ರಯಾಣ ಮಾಡಲಿದ್ದೀರಿ. ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಬೇಕಿದೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಜಲಮೂಲಗಳಿಂದ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ‌ ಕಷ್ಟವನ್ನು ಆಪ್ತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)