Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಇಂದು ಸಂಗಾತಿಯ ನಡುವೆ ಕಲಹವಿರಲಿದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 10 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಇಂದು ಸಂಗಾತಿಯ ನಡುವೆ ಕಲಹವಿರಲಿದೆ
ದಿನಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 10, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ(ಜೂನ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ:ವೃದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:41 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:55 ರಿಂದ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ.

ಧನು ರಾಶಿ: ನೀವು ಪರರ ತಪ್ಪಿನಿಂದ ಕಲಿಯುವುದು ಉತ್ತಮ. ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ನಿಮಗಿಂದು ಅದೃಷ್ಟದ ದಿನವೆಂದೇ ಹೇಳಬಹುದು. ನಿಮಗೆ ಒಳ್ಳೆಯ ಉದ್ಯೋಗದ ಕಂಪೆನಿಗೆ ಸೇರುವ ಅವಕಾಶವಿದೆ. ಗೊತ್ತಿಲ್ಲದೇ ನಿಮ್ಮ ಸಮಯವು ವ್ಯರ್ಥವಾಗಬಹುದು. ಅಪರಿಚಿತರನ್ನು ಎದುರುಹಾಕಿಕೊಳ್ಳಬೇಡಿ. ಹಳೆಯ ಪ್ರೇಮಪ್ರಕರಣವು ಮುನ್ನೆಲೆಗೆ ಬರಬಹುದು. ಕಳೆದುಕೊಂಡಿದ್ದರೆ ಬಗ್ಗೆ ಆಲೋಚಿಸುತ್ತ ಸಮಯವನ್ನು ವ್ಯರ್ಥಮಾಡಬೇಡಿ. ಮುಂದೆ ಆಗುವುದರ ಬಗ್ಗೆಯೂ ಯೋಚನೆ ಇರಲಿ. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡಬೇಡಿ.

ಮಕರ ರಾಶಿ: ಇಂದು ನಿಮ್ಮ ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ನಿಮ್ಮ ತಂದೆ-ತಾಯಿಯರು ನಿಮಗೆ ಜೀವನದ ಬಗ್ಗೆ ಸಂಗಾತಿಯ ಸಲಹೆಯನ್ನು ತೆಗೆದುಕೊಳ್ಳುವಿರಿ. ನಿಮ್ಮ ದೇಹವು ನಿಮಗೆ ದುರ್ಬಲವಾಗಿದೆ. ನೀವು ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಪ್ರೀತಿಸಿ ಮೋಸಹೋಗುವ ಸಾಧ್ಯತೆ ಇದೆ. ಪ್ರೀತಿಸುವಾಗ ಪೂರ್ವಾಪರ ಯೋಚನೆ ಇರಲಿ. ಸಾಲವನ್ನು ಮಾಡಿ ವಾಹನವನ್ನು, ಖರೀದಿಸುದು ಬೇಡ. ಸಮಯಸ್ಫೂರ್ತಿಯಿಂದ ನೀವು ನಿಮ್ಮವರನ್ನು ಸಂತೋಷವಾಗಿರಿಸುವಿರಿ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು.

ಕುಂಭ ರಾಶಿ: ನೀವು ಇಂದು ಅಧಿಕಾರಗಳ ಜೊತೆ ವಾಗ್ವಾದ ಮಾಡುವಿರಿ. ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ನಿಮಗೆ ನಿಮ್ಮ ಸಹೋದರನು ಧನಸಹಾಯ ಮಾಡುವನು. ಇದರಿಂದ ಕೊಂಚ ಸುಧಾರಿಸಿಕೊಳ್ಳುವಿರಿ. ಮನಸ್ಸನ್ನು ಆರೋಗ್ಯವಾಗಿ ಇಟ್ಟುಕೊಳ್ಳುವ ಕಡೆಗೆ ಗಮನವಿರಲಿ. ಕಲಹದ ವಿಚಾರದಲ್ಲಿ ರಾಜಿಯಾಗುವ ಸನ್ನಿವೇಶಗಳು ಬರಬಹುದು. ಹಿರಿಯರ ಸಮ್ಮುಖದಲ್ಲಿ ಮನೆಯ ಕಾರ್ಯವು ಮುನ್ನಡೆದರೆ ಸೊಗಸು. ನೂತನ ವಾಹನ ಖರೀದಿಯನ್ನು ಮಾಡುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ತಂದೆಯ ಜೊತೆ ಸಂಬಂಧವು ಚೆನ್ನಾಗಿ ಇರುವವಂತೆ ನೋಡಿಕೊಳ್ಳಿ.

ಮೀನ ರಾಶಿ: ಇಂದು ನೀವೊಬ್ಬರೇ ಯತ್ನಿಸಿದರೂ ಕಾರ್ಯದಲ್ಲಿ ಜಯವು ಸಿಗುವುದು. ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಇಂದು ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. ಸಂಗಾತಿಗಳ ನಡುವೆ ಕಲಹವಿರಲಿದೆ. ಆರ್ಥಿಕಸ್ಥಿತಿಯ ಸುಧಾರಣೆಯಾಗುವುದು. ಗೊತ್ತಿಲ್ಲ ವಿಚಾರಗಳನ್ನು ಅನುಭವಿಗಳಿಂದ, ಹಿರಿಯರಿಂದ ತಿಳಿದುಕೊಳ್ಳುವಿರಿ. ಸ್ನೇಹಿತರೊಂದಿಗೆ ಸುತ್ತಾಡಲು ಎಲ್ಲೋ ಹೋಗಬಹುದು. ಬೆನ್ನು ನೋವಿನ ಸಮಸ್ಯೆಯು ಕಾಣಿಸಿಕೊಳ್ಬಹುದು. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್