Horoscope: ರಾಶಿ ಭವಿಷ್ಯ; ಸಾಲಗಾರರಿಂದ ನಿಮ್ಮ ಬಾಕಿ ಹಣ ಮರಳಿ ಬರಲಿದೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 23, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 23 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಸಾಲಗಾರರಿಂದ ನಿಮ್ಮ ಬಾಕಿ ಹಣ ಮರಳಿ ಬರಲಿದೆ
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ(ಜೂನ್. 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಬ್ರಹ್ಮ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಸಂಜೆ 05:26 ರಿಂದ 07:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:35 ರಿಂದ 02:12ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:49 ರಿಂದ ಸಂಜೆ 05:26ರ ವರೆಗೆ.

ಧನು ರಾಶಿ : ಇಂದು ನೀವು ಹಾಕಿಕೊಂಡ ಯೋಜನೆಗೆ ಕುಟುಂಬದ ಸಹಾಯವು ಲಭ್ಯವಾಗಲಿದೆ. ಭೂಮಿಯ ಕ್ರಯ ಮತ್ತು ವಿಕ್ರಯಗಳ ವಿಷಯದಲ್ಲಿ ಲಾಭವನ್ನು ಕಾಣಬಹುದಾಗಿದೆ. ಸಹೋದರರ ನಡುವೆ ಭಿನ್ನಾಭಿಪ್ರಾಯಗಳು ನಡೆಯಬಹುದು. ನಿವೃತ್ತಿಯ ಜೀವನ ಬೇಸರ ತರಿಸುವುದು.‌ ಕುಳಿತಲ್ಲೇ ಕುಳಿತಿರುವ ನಿಮಗೆ ಕೆಲಸವನ್ನು ಮಾಡುವ ಅಪೇಕ್ಷೆ ಉಂಟಾಗುವುದು. ಕೆಲಸದಲ್ಲಿ ನೀವು ಕಡಿಮೆ ಪ್ರಯತ್ನದಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದಾಗಿದೆ. ಆದರೆ ನಿಮ್ಮ ಬುದ್ಧಿಯನ್ನು ಬಳಸಿಕೊಳ್ಳಬೇಕಿದೆ. ವೈವಾಹಿಕ ಜೀವನವು ತುಂಬಾ ಸರಸಮಯವಾಗಿರುವಿದು. ಕಾರ್ಯ ಸ್ಥಳದಲ್ಲಿ ನಿಮ್ಮ ವ್ಯವಸ್ಥಾಪಕರೊಂದಿಗೆ ನೀವು ಉತ್ತಮ ಬಾಂಧವ್ಯವನ್ನು ಹೊಂದುವಿರಿ. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ ಜವಾಬ್ದಾರಿ ಹೆಚ್ಚಾಗುವುದು.

ಮಕರ ರಾಶಿ : ಇಂದು ನಿಮ್ಮ ಆಲೋಚನಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ದೇಶಗಳಿಗೆ ವಸ್ತುಗಳನ್ನು ಕಳುಹಿಸುವ ಉದ್ಯೋಗವನ್ನು ಮಾಡುತ್ತಿದ್ದರೆ ಅವರಿಗೆ ಲಾಭವಿದೆ. ಕಾರ್ಯದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಿ ಬರಬಹುದು. ಹೊಸ ಆದಾಯ ಮೂಲವನ್ನು ಸೃಷ್ಟಿಮಾಡಿಕೊಳ್ಳುವಿರಿ. ನಿಮ್ಮ ಸೌಮ್ಯ ಸ್ವಭಾವ ಮತ್ತು ಅತ್ಯುತ್ತಮ ಸಂವಹನ ಕೌಶಲ್ಯಕ್ಕಾಗಿ ನೀಮ್ಮನ್ನು ಪ್ರಶಂಸೆ ಸಿಗಬಹುದು. ಸಾಲಗಾರರಿಂದ ನೀವು ಬಾಕಿ ಹಣವನ್ನು ಮರಳಿ ಬರಲಿದೆ. ನಿಮ್ಮದಲ್ಲದ ವಿಚಾರಕ್ಕೆ ನೀವು ಮೂಗು ತೂರಿಸಬೇಡಿ. ಪ್ರೇಮದ ವಿಚಾರದಲ್ಲಿ ಅನುಮಾನ ಬರಬಹುದು.‌ ಆಡಿದ ಮಾತಿನ ತಪ್ಪಿಗೆ ಕ್ಷಮೆ ಕೇಳುವರು. ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಶಿಸ್ತುಬದ್ಧವಾದ ವ್ಯವಹಾರದಿಂದ ನಿಮಗೆ ಹೊಗಳಿಕೆ ಸಿಗುವುದು.

ಕುಂಭ ರಾಶಿ : ಇಂದು ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಇರಲಿದೆ. ಕೃಷಿಯನ್ನು ಅವಲಂಬಿಸಿ ಬದುಕುವವರಿಗೆ ಅಲ್ಪ ಲಾಭವೂ ಸಿಗಲಿದೆ‌. ವಿದ್ಯಾರ್ಥಿಗಳು ಹತ್ತಾರು ಗೊಂದಲಗಳನ್ನು ಇಟ್ಟುಕೊಳ್ಳಲಿದ್ದಾರೆ. ನೀವು ವಿವಾಹ ಸಮಾರಂಭದಲ್ಲಿ ಭಾಗವಹಿಸುವಿರಿ. ನಿಮ್ಮ ಮಕ್ಕಳ ವೃತ್ತಿಜೀವನದ ಬಗ್ಗೆ ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ವೈಯಕ್ತಿಕ ಸಂಬಂಧದಲ್ಲಿ ಅನ್ನೋನ್ಯತೆ ಹೆಚ್ಚಾಗುವ ಸಾಧ್ಯತೆ ಇದೆ‌. ಅಲ್ಪಾವಧಿಯ ವೃತ್ತಿಗೆ ಸೇರಿಕೊಳ್ಳುವುದು ಉತ್ತಮ. ಯಾರ ಮೇಲೋ ಸಿಟ್ಟುಗೊಂಡು ಇನ್ಯಾರಮೇಲೋ ತೀರಿಸಿಕೊಳ್ಳುವುದು ಬೇಡ. ದೂರದ ಊರಿಗೆ ಹೋದಾಗ ಉತ್ತಮ ವ್ಯವಸ್ಥೆ ಆಗಲಿದೆ. ಶಿಕ್ಷಕರು ಆದಷ್ಟು ಜಾಗರೂಕರಗಿ ವರ್ತಿಸಿ. ನಿಮ್ಮನ್ನು ಮಕ್ಕಳು ನೋಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು.

ಮೀನ ರಾಶಿ : ಇಂದು ನಿಮ್ಮ ಸ್ವಂತ ಉದ್ಯಮದಲ್ಲಿ ನಿಮಗೆ ಲಾಭವಿದೆ. ಹಲವು ದಿನಗಳಿಂದ ಅನಾರೋಗ್ಯದ ಕಾರಣ ಕಿರಿಕಿರಿಯನ್ನು ಅನುಭವಿಸುತ್ತಿರುವ ನೀವು ಇಂದು ಆರೋಗ್ಯದತ್ತ ಮುಖಮಾಡುವಿರಿ. ಉದ್ಯೋಗದ ನಿಮಿತ್ತ ಪ್ರಯಾಣವು ಅವಶ್ಯಕವಾದರೆ ಮಾತ್ರ ಮಾಡಿ.‌ ಇಲ್ಲವಾದರೆ ಬೇಡ. ನೀವು ಅಪರೂಪಕ್ಕೆ ಸಿಕ್ಕ ಸದನೇಹಿತನ ಜೊತೆ ಸಮಯವನ್ನು ಕಳೆಯುವಿರಿ. ವೃತ್ತಿಜೀವನದಲ್ಲಿ ಒಳ್ಳೆಯ ಹಂತವನ್ನು ತಲುಪಲು ಇಂದಿನಿಂದ‌ ಶ್ರಮವಹಿಸುವುದು ಅಗತ್ಯ. ಮಂಡಿನೋವಿನಿಂದ ಇಂದು ಕಷ್ಟಪಡುವಿರಿ. ಯಾರನ್ನೂ ನಂಬುವ ಸ್ಥಿತಿಯಲ್ಲಿ ಇಂದು ನೀವಿರುವುದಿಲ್ಲ. ಅದಷ್ಟು ಕಡಿಮೆ ಮಾತನಾಡಿ. ಅವರ ಆರೋಗ್ಯವೂ ಚೇತರಿಕೆ ಕಾಣುವುದು. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಿಕೊಳ್ಳಬಹುದು. ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)