Horoscope: ದಿನ ಭವಿಷ್ಯ; ನಿಮ್ಮ ಬಹಳ ದಿನಗಳ ಚಿಂತೆಗೆ ಇಂದು ಮುಕ್ತಿ ಸಿಗುವುದು
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.03ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ಸೌಭಾಗ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ 12:31ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ 03:45ರ ವರೆಗೆ.
ಧನು ರಾಶಿ: ಇಂದು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಮಾತ್ರವಲ್ಲದೆ, ವೈಯಕ್ತಿಕವಾಗಿಯೂ ಒತ್ತಡ ಹೆಚ್ಚಿರುವುದು. ನಿಮ್ಮ ಪೋಷಕರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೆಚ್ಚಗಳು ಹೆಚ್ಚಾಗಬಹುದು. ಇದು ನಿಮ್ಮ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮವನ್ನು ಬೀರಬಹುದು. ಬೌದ್ಧಿಕ ಕಸರತ್ತಿನಿಂದ ಮಾಡಿದ ಕೆಲಸವು ಪೂರ್ಣಗೊಳ್ಳುತ್ತದೆ. ಸಂಬಂಧಗಳಲ್ಲಿ ನಿಕಟತೆ ಇರುತ್ತದೆ. ವ್ಯಾಪಾರದ ಖ್ಯಾತಿ ಹೆಚ್ಚಾಗುತ್ತದೆ. ಸಂಪತ್ತು, ಕೀರ್ತಿ ಮತ್ತು ವೈಭವದಲ್ಲಿ ಧನಾತ್ಮಕ ಪರಿವರ್ತನೆ ಇರಲಿದೆ. ಸೃಜನಾತ್ಮಕ ಪ್ರಯತ್ನಗಳು ಫಲ ನೀಡುತ್ತವೆ. ವಾಹನ ಚಾಲನೆಯನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುವುದು. ಉದ್ವೇಗದಿಂದ ಏನನ್ನಾದರೂ ಮಾಡಲು ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಕೋಪದಿಂದ ಕೆಲವು ಸುಂದರ ಕ್ಷಣವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ.
ಮಕರ ರಾಶಿ: ನಿಮಗೆ ಬೇಕಾದ ಹಣವನ್ನು ಹೊಂದಿಸಲು ಸೂಕ್ತ ವ್ಯಕ್ತಿಗಳ ಅನ್ವೇಷಣೆ ಮಾಡವಿರಿ. ಕೆಲಸ ಮೇಲೆ ನಿಮ್ಮ ಗಮನ ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಿ. ವ್ಯಾಪಾರದ ಆದ ಸ್ವಲ್ಪ ಅಜಾಗರೂಕತೆಯೂ ಭಾರೀ ನಷ್ಟವನ್ನು ಉಂಟುಮಾಡಬಹುದು. ಸಂಪತ್ತು, ಖ್ಯಾತಿ ಮತ್ತು ವೈಭವದಲ್ಲಿ ಹೆಚ್ಚುವುದು. ಆದರೆ ವ್ಯರ್ಥ ಖರ್ಚುಗಳನ್ನು ತಪ್ಪಿಸಬೇಕಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಅಪಾಯಗಳನ್ನು ತೆಗೆದುಕೊಳ್ಳಬೇಡಿ. ಅನಗತ್ಯ ಸಮಸ್ಯೆಗಳು ಮತ್ತು ತೊಡಕುಗಳು ಉಂಟಾಗುತ್ತವೆ. ಎಂತಹ ಒತ್ತಡವಿದ್ದರೂ ತಾಳ್ಮೆಯಿಂದ ಕೆಲಸ ಮಾಡಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಸಹೋದರರ ಬಗೆಗಿನ ನಿಮ್ಮ ನಿಲುವು ಸರಿ ಇರದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ.
ಕುಂಭ ರಾಶಿ: ನಿಮ್ಮ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜವೇ. ಆದರೆ ಅದನ್ನು ಎದುರಿಸಬೇಕೋ ಶಾಂತಗೊಳಿಸಬೇಕೋ ಎನ್ನುವುದು ನಿಮಗೆ ಸೇರಿದ್ದು. ನಿಮ್ಮ ಸ್ನೇಹಿತರು ನಿಮ್ಮ ಸಹಾಯಕ್ಕೆ ಬರಬಹುದು. ಗುಣಮಟ್ಟದ ಹೂಡಿಕೆಯು ನಿಮಗೆ ಲಾಭವನ್ನು ತರಲಿದೆ. ನಿಮ್ಮ ಅನಾರೋಗ್ಯವು ಕಡಿಮೆ ಆಗುವುದು, ನಿಮ್ಮ ಮನಸ್ಸು ಹಗುರಾಗುವುದು. ಆರ್ಥಿಕವಾಗಿ ಸುಧಾರಣೆಯಿಂದ ಧೈರ್ಯವು ಬರಲಿದೆ. ನಿಮ್ಮ ಸಂಗಾತಿಯಿಂದ ನೀವು ಬೆಂಬಲ ಮತ್ತು ಒಡನಾಟವನ್ನು ಪಡೆಯುತ್ತೀರಿ. ನೀವು ಸೃಜನಶೀಲ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಖ್ಯಾತಿಯನ್ನು ಬಯಸುವಿರಿ. ಹೊಸ ಸಂಬಂಧಗಳು ವ್ಯವಹಾರದಿಂದ ಇಂದು ಆಗಲಿದೆ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು.
ಮೀನ ರಾಶಿ: ನಿಮ್ಮ ಬಹಳ ದಿನಗಳ ಚಿಂತೆಗೆ ಇಂದು ಮುಕ್ತಿ ಸಿಗುವುದು. ನೀವು ಜನರ ಆಸೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದು, ವ್ಯವಹಾರದಲ್ಲಿ ಅದನ್ನು ಪ್ರಯೋಗಿಸುವಿರಿ. ಇಂದು ಅತಿಯಾಗಿ ಖರ್ಚು ಮಾಡದಿರುವುದು ಒಳ್ಳೆಯದು. ನಿಮ್ಮ ಸಂಗಾತಿಯ ವಿಷಯದಲ್ಲಿ ಅತಿಯಾಗಿ ವರ್ತಿಸದಿರುವುದು ಉತ್ತಮ. ನೀವು ಕುಟುಂಬ ಸದಸ್ಯರಿಂದ ಒತ್ತಡಕ್ಕೆ ಒಳಗಾಗಬಹುದು. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಆರೋಗ್ಯದ ಬಗ್ಗೆ ಉದಾಸೀನ ಮಾಡಬೇಡಿ. ಸರಕಾರದಿಂದ ಅರ್ಥಿಕ ಬೆಂಬಲ ದೊರೆಯಬಹುದು. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ.
ಲೋಹಿತ ಹೆಬ್ಬಾರ್ – 8762924271 (what’s app only)