Horoscope: ದಿನ ಭವಿಷ್ಯ; ಈ ರಾಶಿಯವರು ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: May 31, 2024 | 12:45 AM

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 31 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಈ ರಾಶಿಯವರು ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 31ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:54ರಿಂದ ಮಧ್ಯಾಹ್ನ 12:31ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:44 ರಿಂದ ಸಂಜೆ 05:21ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ.

ಧನು ರಾಶಿ: ಅಲ್ಪರ ಸಂಗದಿಂದ ಸ್ವಾಭಿಮಾನ ಧಕ್ಕೆ ಬರುವುದು. ಮುಜುಗರವನ್ನು ಎದುರಿಸ ಬೇಕಾಗಬಹುದು. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಒಪ್ಪಿಕೊಂಡು ಸ್ವಲ್ಪ ದಿನದವರೆಗೆ ಕಾಯಿರಿ. ಸಾಧ್ಯವಾದಷ್ಟು ತಾಳ್ಮೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಮನೆಯ ಕಡೆಯಿಂದ ಅನಿರೀಕ್ಷಿತ ಅಶುಭವಾರ್ತೆಯು ಬರಬಹುದು. ಉತ್ತಮ ಬಾಂಧವ್ಯವು ಕ್ಷುಲ್ಲಕ ಕಾರಣಕ್ಕೆ ಕೆಟ್ಟುಹೋಗಬಹುದು. ನಿಮಗೆ ಕೆಲಸವು ಭಾರವೆನಿಸಿದರೆ ಅದನ್ನು ತಿಳಿಸಿ. ಹೊತ್ತುಕೊಂಡು ಇರುವುದು ಕಷ್ಟ. ಉದ್ಯೋಗದ ನಿಮಿತ್ತ ಬೇರೆ ಕಡೆಗೆ ಹೋಗಬಹುದು. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಇರಲಿದೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ನಿಮ್ಮ ಮಾತಿಗೆ ಬೆಂಬಲವಿರುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ನಿಮ್ಮ ಚೌಕಟ್ಟಿನೊಳಗೆ ಎಲ್ಲವೂ ಬರಬೇಕು ಎಂಬ ಧೋರಣೆ ಸರಿಯಾಗದು.

ಮಕರ ರಾಶಿ: ಮೇಲಧಿಕಾರಿಗಳ ಮಾತನ್ನು ಲಘುವಾಗಿ ತೆಗೆದುಕೊಂಡು ಕೆಂಗಣ್ಣಿಗೆ ಗುರಿಯಾಗುವಿರಿ. ಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ವಸ್ತ್ರದ ಖರೀದದಿಯಾಗಲಿದೆ‌. ಅನಿರೀಕ್ಷಿತ ಬಂಧುಗಳ ಆಗಮನವು ಮನೆಯಲ್ಲಿ ಹಬ್ಬದಂತಾಗುವುದು. ಇನ್ನೊಬ್ಬರನ್ನು ನೋಡಿ ಅಸೂಯೆ ಪಡುವುದನ್ನು ಬಿಟ್ಟರೆ ಒಳ್ಳೆಯದು. ನಿಮ್ಮ ಯಶಸ್ಸಿನ ದಾರಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಪರರು ನಿರಾಳರತೆಯಲ್ಲಿ ಇರುವಿರಿ. ಬೇಕಾದುದನ್ನು ಪಡೆಯದೇ ಮನಸ್ಸಿಗೆ ಸಂಕಟವಾಗುವುದು. ಕಲಾಸಕ್ತಿಯು ನಿಮ್ಮನ್ನು ಕಲಿಕೆಗೆ ಜೋಡಿಸಬಹುದು. ಯಾರ ಮಾತನ್ನೂ ನೀವು ಕೇಳಲಾರಿರಿ. ಸಂಶೋಧನೆಯಲ್ಲಿ ಹೊಸ ಮಾರ್ಗವು ಕಾಣಿಸಿಕೊಳ್ಳುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ನಾಯಕರ ವ್ಯಕ್ತಿತ್ವದಲ್ಲಿ ಬದಲಾವಣೆ ಆಗುವುದು.

ಕುಂಭ ರಾಶಿ: ಇಂದು ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ ಎನಿಸಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಯಾರ ಮೇಲೂ ದ್ವೇಷವನ್ನು ಸಾಧಿಸಿ ಆಗುವುದೇನಿಲ್ಲ. ಸಮಯ ಹಾಳು ಅಷ್ಟೇ. ಸಂಗಾತಿಯ ಜೊತೆ ಹಣಕಾಸಿನ ವಿಚಾರದಲ್ಲಿ ಕಲಹವಾಗಬಹುದು. ಅದಕ್ಕೆ ತುಪ್ಪವನ್ನು ಸುರಿಯದೇ ಇದ್ದರೆ ಸ್ವಲ್ಪ ಸಮಯಕ್ಕೆ ಶಾಂತವಾಗಲಿದೆ. ಕಾರಣವಿಲ್ಲದೆ ಸಂತೋಷವಾಗಿರುವುದನ್ನು ಅಭ್ಯಾಸ ಮಾಡಿ. ಆಕಸ್ಮಿಕವಾಗಿ ಆಗಿವ ಘಟನೆಗಳನ್ನು ಮನಸಾರೆ ಸ್ವೀಕರಿಸಿ. ನಿಮ್ಮನ್ನು ನೀವು ತಿದ್ದಿಕೊಳ್ಳುವ ಪ್ರಯತ್ನ ಮಾಡುವುದು ಶ್ರೇಯಸ್ಕರ. ನಿಮ್ಮ ತಂದೆಯ ಜೊತೆ ಸ್ನೇಹದ ಸಂಬಂಧವನ್ನು ಇಟ್ಟುಕೊಳ್ಳುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗುವಿರಿ.

ಮೀನ ರಾಶಿ: ನಿಮ್ಮ ಸಂಕೋಚದ ಸ್ವಭಾವದಿಂದ ಹೇಳಬೇಕಾದ ವಿಚಾರವನ್ನು ಹೇಳದೇ ಸುಮ್ಮನಾಗುವಿರಿ.‌ ಉದ್ಯೋಗ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಈ ಅನಿರೀಕ್ಷಿತ ಧನಾಗಮನದ ನಿರೀಕ್ಷೀತ ಧನಾಗಮನ ನೆಮ್ಮದಿ ಕೊಡಲಿದೆ. ವಿದ್ಯಾರ್ಥಿಗಳು ಉನ್ನತಿಯನ್ನು ಸಾಧಿಸಲು ಯೋಜನೆಯನ್ನು ಹಾಕಿಕೊಳ್ಳುವುದು ಒಳ್ಳೆಯದು. ತಾಳ್ಮೆಯನ್ನು ಕಳೆದುಕೊಳ್ಳದೇ ವ್ಯವಹರಿಸಿ. ವಿವೇಚನೆಯಿಂದ ಕೆಲಸಗಳನ್ನು ಮಾಡಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸಾಲಕ್ಕೆ ಏನನ್ನಾದರೂ ಅಡವಿಡಬೇಕಾಗಬಹುದು. ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಷ್ಟವಿಲ್ಲದಿದ್ದರೂ ನೀವು ಹಿರಿಯರ ಮಾತನ್ನು ಕೇಳಬೇಕಾಗುವುದು. ಪ್ರೇಮಜೀವನವು ನಿಮಗೆ ಬಂಧನವಾದೀತು.

ಲೋಹಿತ ಹೆಬ್ಬಾರ್-8762924271 (what’s app only)