AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 11ರ ದಿನಭವಿಷ್ಯ

ನಿಮಗೆ ಹತ್ತಿರದಲ್ಲಿ ಇರುವಂಥ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಈ ದಿನ ಭೇಟಿ ನೀಡಿ. ಅಷ್ಟೋತ್ತರಕ್ಕೆ ನೀಡುವುದಕ್ಕೆ ಸಾಧ್ಯವಾದಲ್ಲಿ ಮಾಡಿಸಿ. ನಿಮ್ಮ ಹಣವು ಯಾರ ಬಳಿಯಾದರೂ ಸಿಕ್ಕಿಹಾಕಿಕೊಂಡಿದ್ದಲ್ಲಿ ಅದನ್ನು ವಸೂಲಿ ಮಾಡುವುದಕ್ಕೆ ಸಾಧ್ಯವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 11ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 11, 2026 | 3:22 AM

Share

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನೆಗೆ ಟೀವಿ, ರೆಫ್ರಿಜರೇಟರ್ ಅಥವಾ ಡಿಶ್ ವಾಷರ್ ಇಂಥ ಉಪಕರಣ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಮತ್ತೆ ಕೆಲವರಿಗೆ ಇವು ಉಡುಗೊರೆಯಾಗಿ ದೊರೆಯುವ ಯೋಗ ಸಹ ಇದೆ. ಸಂಘ- ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಮಾಡುವ ಇರಾದೆ ಇರುವವರು ಅದಕ್ಕೆ ಕಾರ್ಯತಂತ್ರ ರೂಪಿಸುವುದಕ್ಕೆ ಸಂಬಂಧಪಟ್ಟ ವ್ಯಕ್ತಿಗಳನ್ನು ಭೇಟಿ ಆಗಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಂಗೀತಗಾರರು, ಕಲಾವಿದರು, ನೃತ್ಯವನ್ನೇ ವೃತ್ತಿ ಆಗಿ ಮಾಡಿಕೊಂಡವರಿಗೆ ಹೊಸ ಹೊಸ ಅವಕಾಶ ಹುಡುಕಿ ಬರಲಿದೆ. ವಿದೇಶಗಳಿಂದಲೂ ನಿಮಗೆ ಆಹ್ವಾನ ಬರಬಹುದು. ಆಯುರ್ವೇದ ಮೂಲಿಕೆಗಳನ್ನು ಬೆಳೆಯುತ್ತಾ ಅದರ ಮಾರಾಟದ ಮೂಲಕ ಆದಾಯ ಬರುತ್ತಾ ಇರುವವರು ಶಾಖೆಯನ್ನು, ವ್ಯವಹಾರವನ್ನು ವಿಸ್ತರಣೆ ಮಾಡುವ ಅವಕಾಶಗಳ ಕಡೆಗೆ ನೋಡಲಿದ್ದೀರಿ. ನಿಮ್ಮಲ್ಲಿ ಕೆಲವರು ಸಂಬಂಧಿಗಳ ಮನೆಯ ವ್ಯಾಜ್ಯಗಳನ್ನು ಬಗೆಹರಿಸುವುದಕ್ಕೆ ಹೆಚ್ಚು ಸಮಯ ಮೀಸಲು ಇಡಬೇಕಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ದ್ವಿಚಕ್ರ ವಾಹನ ಬಳಕೆಯನ್ನು ಈ ದಿನ ಸಾಧ್ಯವಾದಷ್ಟೂ ಮಾಡದಿರುವುದು ಕ್ಷೇಮ. ಅನಿವಾರ್ಯ ಎಂದಾದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸಿ, ವೇಗದ ಚಾಲನೆ ಯಾವುದೇ ಕಾರಣಕ್ಕೂ ಬೇಡ. ನಿಮ್ಮಲ್ಲಿ ಕೆಲವರಿಗೆ ದೇವತಾ ಕಾರ್ಯಗಳಲ್ಲಿ ಭಾಗೀ ಆಗುವಂಥ ಯೋಗ ಇದೆ. ಸೈಟು- ಮನೆ ಖರೀದಿ ಮಾಡುವುದಕ್ಕಾಗಿ ಹಣಕಾಸಿನ ಹೊಂದಾಣಿಕೆಗೆ ಯತ್ನ ಮಾಡುತ್ತಿರುವವರಿಗೆ ಅದು ಸಾಧ್ಯವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು