AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ

ರಾಹು ಕಾಲದ ಸಮಯ ಯಾವುದು ಎಂಬುದನ್ನು ಈ ದಿನ ನೋಡಿಕೊಂಡು, ಮನೆಯಲ್ಲಿನ ದೇವಿ ಚಿತ್ರ ಪಟ ಅಥವಾ ಮೂರ್ತಿಯ ಎದುರು ದೀಪವನ್ನು ಹಚ್ಚಿ. ನಿಮಗೇನಾದರೂ ದೃಷ್ಟಿಯಾಗಿದೆ, ಮೈ-ಕೈ ನೋವು, ದಿಢೀರ್ ಜ್ವರದ ಅನುಭವ ಆಗುತ್ತಿದ್ದಲ್ಲಿ ಅದರಿಂದ ಮುಕ್ತಿ ದೊರೆಯಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ
ವಾರ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 07, 2026 | 2:49 AM

Share

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ತಿಳಿವಳಿಕೆ- ಅನುಭವ- ಜ್ಞಾನಕ್ಕೆ ಹಾಗೂ ಅದರ ಸರಿಯಾದ ಬಳಕೆಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ. ವ್ಯಾಪಾರದ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನೀವು ಕೈಗೊಳ್ಳುವ ಪ್ರಯಾಣವು ಲಾಭದಾಯಕ ಆಗಲಿದೆ. ಅತಿಯಾದ ಖರ್ಚು ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸಿಕೊಳ್ಳುವುದು ಮುಖ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚುತ್ತದೆ. ಗುರು ಸಮಾನರಾದ ವ್ಯಕ್ತಿಗಳನ್ನು ಈ ದಿನ ಭೇಟಿಯಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಯಾವುದೇ ವ್ಯಕ್ತಿ ಅಥವಾ ವಿಷಯವನ್ನು ತುಂಬ ಹಚ್ಚಿಕೊಳ್ಳಬೇಡಿ. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ನೆಮ್ಮದಿ ಸಿಗುತ್ತದೆ. ಸಣ್ಣ ವಿಷಯಗಳಿಗೂ ಅತಿಯಾಗಿ ಚಿಂತಿಸುವುದನ್ನು ತಪ್ಪಿಸುವುದಕ್ಕಾಗಿ ನಿಮಗೆ ಬರುವಂಥ ಆಲೋಚನೆಗಳನ್ನು ಬರೆದಿಡುವ ಅಭ್ಯಾಸ ಮಾಡಿ. ಇದನ್ನು ಈ ದಿನದ ಮಟ್ಟಿಗೆ ಮಾಡಿದರೂ ಸಾಕು. ಶಿಕ್ಷಣ, ಬ್ಯಾಂಕಿಂಗ್ ಅಥವಾ ಕನ್ಸಲ್ಟಿಂಗ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಸುತ್ತಿದ್ದಲ್ಲಿ ಯಶಸ್ಸು ಸಿಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕ್ರಿಯೇಟಿವ್ ಮತ್ತು ಕಲೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಭಾವನಾತ್ಮಕ ನಿರ್ಧಾರಗಳಿಂದ ಸಾಧ್ಯವಾದಷ್ಟೂ ದೂರವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು. ದೊಡ್ಡ ಮೊತ್ತದ ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ತೆಗೆದುಕೊಳ್ಳುವುದು ಅಗತ್ಯ ಎಂಬುದು ಗಮನದಲ್ಲಿ ಇರಲಿ. ನಿಮ್ಮ ಭಾವನೆಗಳಿಗೆ ಸಣ್ಣ ಸಣ್ಣ ಸಂಗತಿಗಳು ಸಹ ಘಾಸಿ ಮಾಡಬಹುದು.

ಲೇಖನ- ಸ್ವಾತಿ ಎನ್.ಕೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು