Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ
ದಿನ ಭವಿಷ್ಯ
Edited By:

Updated on: Feb 01, 2026 | 12:15 AM

ನಿಮ್ಮ ಅದೃಷ್ಟ ಹಾಗೂ ಅವಕಾಶಗಳನ್ನು ಲಾಭವಾಗಿ ಪರಿವರ್ತಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದಾದಲ್ಲಿ ಅದಕ್ಕೆ ಭಾಗ್ಯಾ ಸೂಕ್ತವನ್ನು ಕೇಳಿಸಿಕೊಳ್ಳಿ. ಬೆಳಗ್ಗೆ ವೇಳೆಗೆ ಇದನ್ನು ಯೂಟ್ಯೂಬ್ ಅಥವಾ ಬೇರೆ ಯಾವುದೇ ಮಾಧ್ಯಮದಲ್ಲಿ ಕೇಳಿಸಿಕೊಳ್ಳುವುದರಿಂದ ಆರ್ಥಿಕ ಒತ್ತಡದಿಂದ ಕೂಡ ಹೊರಗೆ ಬರುವುದು ಸಾಧ್ಯವಾಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಶಿಕ್ಷಣ, ತರಬೇತಿ, ಬರವಣಿಗೆ ಸಂಬಂಧಿತ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಉತ್ತಮವಾದ ಫಲ ಸಿಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಬಡ್ತಿ, ವೇತನ ಹೆಚ್ಚಳದ ಬಗ್ಗೆ ಇತರರ ಮೂಲಕ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಭಾವನಾತ್ಮಕ ದೃಷ್ಟಿಯಿಂದ ಏರುಪೇರಿನಿಂದ ಕೂಡಿರುವ ದಿನ ಇದಾಗಿರುತ್ತದೆ. ಸಣ್ಣ- ಪುಟ್ಟ ವಿಚಾರಗಳಿಗೂ ಮನಸ್ಸು ತೀವ್ರವಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಆದ್ದರಿಂದ ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿನ ಕೆಲವು ಗೊಂದಲಗಳು ಮಾತುಕತೆ ಮೂಲಕ ಬಗೆಹರಿಸಬಹುದು. ನೀವು ಉದ್ಯೋಗಸ್ಥರಾಗಿದ್ದಲ್ಲಿ ಸವಾಲಿನಿಂದ ಕೂಡಿದ ಪ್ರಾಜೆಕ್ಟ್ ಮುನ್ನಡೆಸುತ್ತಾ ಇದ್ದೀರಿ ಅಂತಾದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಈ ದಿನ ನಿಮ್ಮಲ್ಲಿನ ನಾಯಕತ್ವ ಗುಣವು ಹೆಚ್ಚು ಪ್ರಚಾರಕ್ಕೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನ ಆಗಲಿದೆ. ಮೇಲಧಿಕಾರಿಗಳ ಗಮನ ನಿಮ್ಮತ್ತ ಸೆಳೆಯುವ ಸಾಧ್ಯತೆ ಇದೆ. ಹೊಸ ಜವಾಬ್ದಾರಿಗಳು ನಿಮಗೆ ವಹಿಸಬಹುದು. ನೀವು ಯಾವುದೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದರೂ ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಂಡುಬರುತ್ತದೆ.

ಲೇಖನ- ಸ್ವಾತಿ ಎನ್.ಕೆ.