
ಆರೋಗ್ಯದ ವಿಚಾರದಲ್ಲಿಯೇ ಒಂದು ಬಗೆಯ ಆತಂಕ ಕಾಡುತ್ತಿದೆ. ಅದು ನಿಮ್ಮದೇ ಆರೋಗ್ಯ ಇರಬಹುದು ಅಥವಾ ನಿಮಗೆ ಸಂಬಂಧಿಸಿದವರ ಆರೋಗ್ಯವೇ ಇರಬಹುದು. ಒಟ್ಟಿನಲ್ಲಿ ದೈಹಿಕ ಆರೋಗ್ಯ ಸರಿಯಾಗಲು ಹಾಗೂ ಮಾನಸಿಕವಾಗಿ ಶಾಂತಿ ದೊರೆಯುವುದಕ್ಕೆ ಆದಿತ್ಯ ಹೃದಯ ಸ್ತೋತ್ರದ ಶ್ರವಣ ಮಾಡಿ. ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ.
ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕವಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ.
ನವ ವಿವಾಹಿತರಿಗೆ ಸಂತೋಷವಾಗಿ ಕಳೆಯುವಂಥ ಯೋಗ ಇದೆ. ಪ್ರೀತಿ- ಪ್ರೇಮದಲ್ಲಿ ಇರುವವರು ಮನೆಯಲ್ಲಿ ಈ ವಿಚಾರವನ್ನು ಪ್ರಸ್ತಾವ ಮಾಡುವ ಬಗ್ಗೆ ನಿರ್ಧಾರ ಮಾಡಲಿದ್ದೀರಿ. ವಿವಾಹಿತರು ಇದ್ದಲ್ಲಿ ಸಂಗಾತಿ ಮೂಲಕ ಹಣಕಾಸಿನ ನೆರವು ದೊರೆಯಲಿದೆ. ಕಲೆ, ಫ್ಯಾಷನ್, ಸೌಂದರ್ಯ, ವಿನ್ಯಾಸ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಶುಭ ಫಲ ಸಿಗುತ್ತದೆ.
ಸರಿ- ತಪ್ಪುಗಳ ಬಗ್ಗೆ ಆತ್ಮವಿಶ್ಲೇಷಣೆ ಮಾಡಿಕೊಳ್ಳುವುದಕ್ಕೆ ಸೂಕ್ತವಾದ ದಿನ ಇದಾಗಿರುತ್ತದೆ. ಗಂಭೀರವಾದ ಸಂಗತಿಗಳ ಬಗ್ಗೆ ಪ್ಲಾನಿಂಗ್- ಬಜೆಟ್ ಸಿದ್ಧ ಮಾಡಿಕೊಳ್ಳುವುದಕ್ಕಾಗಿ ನೀವು ಒಬ್ಬರೇ ದೂರದ ಪ್ರದೇಶಗಳಿಗೆ ಏಕಾಂಗಿಯಾಗಿ ತೆರಳುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯವನ್ನು ಹೀಗಳೆದು ಮಾತನಾಡುವುದರಿಂದ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.