AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರ ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಫೆಬ್ರವರಿ​​​​ 03) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಈ ರಾಶಿಯವರ ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ
ರಾಶಿ ಭವಿಷ್ಯ
TV9 Web
| Edited By: |

Updated on: Feb 03, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 31 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:28ರ ವರೆಗೆ.

ಸಿಂಹ ರಾಶಿ : ನಿಮ್ಮ ಸಂಬಂಧಗಳಲ್ಲಿ ನೀವು ಇಂದು ಸವಾಲಿನ ದಿನವನ್ನು ಎದುರಿಸಬೇಕಾಗಬಹುದು. ತಪ್ಪುಗ್ರಹಿಕೆಗಳು ಮತ್ತು ಭಿನ್ನಾಭಿಪ್ರಾಯಗಳ ಸಂದರ್ಭದಲ್ಲಿ, ತಪ್ಪುಗಳನ್ನು ಒಪ್ಪಿಕೊಳ್ಳಿ. ಮುಕ್ತವಾಗಿ ಸಂವಹನ ಮಾಡಿ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಮಯ ತೆಗೆದುಕೊಳ್ಳಿ. ಇಂದು ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ.

ಕನ್ಯಾ ರಾಶಿ : ನಿಮ್ಮ ವೃತ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಲಾಭದ ಲಕ್ಷಣವಿರುವುದು. ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರಾಗಬಹುದು. ಇಂದು ಹೆಚ್ಚಿದ ಭಾವನಾತ್ಮಕ ಅರಿವಿನ ಮೂಲಕ ನೀವು ನಿಮ್ಮವರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಶಕ್ತಿ ಮತ್ತು ಧೈರ್ಯವು ಎಂತಹ ಸಂದರ್ಭದಲ್ಲಿಯೂ ಹಿಡಿದು ನಿಲ್ಲಿಸುವುದು.ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ಕೆಲವು ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು.

ತುಲಾ ರಾಶಿ : ಇಂದು ವಿದ್ಯಾರ್ಥಿಗಳು ಪ್ರೀತಿಯಲ್ಲಿ ನಿರತರಾಗಿರುತ್ತಾರೆ. ಇದು ಅವರ ಬಹಳಷ್ಟು ಸಮಯವನ್ನು ವ್ಯರ್ಥ ಮಾಡಬಹುದು. ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ದೀರ್ಘಕಾಲದ ನಿಮ್ಮ ಸಂಬಂಧಕ್ಕೆ ವಿರಾಮ‌ವು ಸಿಗಬಹುದು. ಇಂದು ನಿಮ್ಮ ಪ್ರೀತಿಯನ್ನು ಇತರರಿಗೆ ವ್ಯಕ್ತಪಡಿಸಲು ಸುಲಭವಾದ ಮಾರ್ಗ ಸಿಗಲಿದೆ. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ನಿಮಗೆ ಇನ್ನೊಬ್ಬರ ಬಗ್ಗೆಯೇ ಅಧಿಕ ಆಲೋಚನೆ ಇರುವುದು.

ವೃಶ್ಚಿಕ ರಾಶಿ : ಇಂದು ಬಗೆಹರಿಯದ ಸಮಸ್ಯೆಗಳ ಬಗ್ಗೆ ನಿಮ್ಮ ಕುಟುಂಬದ ಜೊತೆಗೆ ಮಾತನಾಡಲು ನೀವು ಬಯಸಬಹುದು. ನೀವು ಚೆನ್ನಾಗಿ ಯೋಚಿಸಿದ ಯಾವುದಾದರೂ ವಿಧಾನವನ್ನು ಬಳಸುತ್ತೀರೆಂದು ಖಚಿತಪಡಿಸಿಕೊಳ್ಳಿ. ಇಂದು ನೀವು ನಿಮ್ಮ ಸಂಬಂಧಿಕರೊಂದಿಗೆ ಸಮಯ ಕಳೆಯಬಹುದು. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಸುದ್ದಿಗಳನ್ನು ಪಡೆಯುತ್ತೀರಿ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬೇಡ.‌ ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ಆಹಾರ ಅಭಾವವಾಗಬಹುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು.

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ