AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಈ ರಾಶಿಯವರು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುವ ಸಾಧ್ಯತೆಯಿದೆ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 03ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುವ ಸಾಧ್ಯತೆಯಿದೆ
ರಾಶಿ ಭವಿಷ್ಯ
TV9 Web
| Edited By: |

Updated on: Feb 03, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 31 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:28ರ ವರೆಗೆ.

ಧನು ರಾಶಿ : ಇಂದು ನೀವು ದೈಹಿಕ ಪ್ರಯೋಜನಗಳಿಗಾಗಿ, ಮಾನಸಿಕ ಶಕ್ತಿಗಾಗಿ, ಧ್ಯಾನ ಮತ್ತು ಯೋಗವನ್ನು ಪ್ರಾರಂಭಿಸಬೇಕಾಗಬಹುದು. ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ನೀವು ಪ್ರವಾಸಕ್ಕೆ ಹೋಗುವ ದಿನ ಇದು. ನಿಮ್ಮ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕಾರ್ಯವನ್ನು ಮಾಡಲು ಬಿಡದು. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ವಿಳಂಬವಾಗಿ ನಡೆಯುವ ವಿವಾಹಕ್ಕೂ ಸಂತೋಷವಿರಲಿದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು.

ಮಕರ ರಾಶಿ : ಇಂದು ಮೋಜು ಮಾಡಲು ಹೊರಡುವವರಿಗೆ ಮುನ್ನೆಚ್ಚರಿಕೆ ಇರಲಿ. ಯಾರಿಂದಲಾದರೂ ಹಣವನ್ನು ಎರವಲು ಪಡೆದ ಜನರಿಗೆ ಯಾವುದೇ ಪರಿಸ್ಥಿತಿಯಲ್ಲಿ ಸಾಲವನ್ನು ಮರುಪಾವತಿಸಬೇಕಾಗಬಹುದು. ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಮಾತನ್ನು ಕೇಳಲು ಬಯಸುವುದಿಲ್ಲ. ಉದ್ಯೋಗಸ್ಥ ಸ್ಥಳೀಯರು ಇಂದು ಕೆಲಸದ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಕುಲವೃತ್ತಿಯನ್ನು ಮುನ್ನಡೆಸುವುದು ಸೂಕ್ತ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌ ವೈದ್ಯರಿಗೆ ಉತ್ತಮ ಅವಕಾಶವು ಸಿಗಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ.

ಕುಂಭ ರಾಶಿ : ಇಂದು ನಿಮ್ಮವರಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುವಿರಿ. ನೀವು ಯಾರೊಂದಿಗೆ ಅರ್ಥಪೂರ್ಣ ಸಂಬಂಧವನ್ನು ಹೊಂದಲು ಬಯಸುತ್ತೀರಿ ಎಂಬ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಇಂದು ಹೊಸ ಸಂಪರ್ಕಗಳನ್ನು ಬೆಳೆಸಿಕೊಳ್ಳಲು ಉತ್ತಮ ಸಮಯ. ವೃತ್ತಿಜೀವನದ ಕೌಶಲ್ಯಗಳನ್ನು ಹೆಚ್ಚಿಸಲು ಸಮಯವನ್ನು ಬಳಸಿಕೊಳ್ಳುವಿರಿ. ಹೂಡಿಕೆ ಮಾಡಲು ಹೊಸ ಮಾರ್ಗಗಳನ್ನು ತೆರೆಯಬಹುದು. ತಾಯಿಯ ಕಡೆಯಿಂದ ಧನದ ನಿರೀಕ್ಷೆಯಲ್ಲಿ ಇರುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ‌ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುವರು. ಪ್ರಯಾಣದಲ್ಲಿ ನೀವು ಬರುವ ತೊಂದರೆಯನ್ನು ದೂರಮಾಡಿಕೊಳ್ಳುವಿರಿ.

ಮೀನ ರಾಶಿ : ಇಂದು ವೃತ್ತಿಪರರಾಗಿರಿ ನಿಮ್ಮ ವಹಿವಾಟು ಉತ್ತಮವಾಗಿದೆ ನೋಡಿಕೊಳ್ಳಿ. ನೀವು ಅಪಾಯಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಆರ್ಥಿಕತೆಯ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಬೇಕಾಗಬಹುದು. ಇಂದು ಬದಲಾವಣೆಯ ದಿನವಾಗಿದ್ದರೂ, ಆಶ್ಚರ್ಯವು ಕಾಣಿಸಿಕೊಳ್ಳಬಹುದು. ನಿಮ್ಮನ್ನು ಯಾರಾದರೂ ಆರ್ಥಿಕ ತೊಂದರೆಗೆ ಸಿಲುಕಿಸಬಹುದು. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ನಿಮ್ಮ ಸಹಾಯಕ್ಕೆ ಯಾರೂ ಬರದಿರುವುದು ಬೇಸರವಾಗುವುದು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹ ಬರಬಹುದು.

-ಲೋಹಿತ ಹೆಬ್ಬಾರ್-8762924271 (what’s app only)

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು