Nitya Bhavishya: ಈ ರಾಶಿಯವರ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 06ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Feb 06, 2024 | 6:50 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ವ್ಯಾಘಾತ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 15:40 ರಿಂದ 17:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54 ರಿಂದ 11:20 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:47 ರಿಂದ 14:13ರ ವರೆಗೆ.

ಧನು ರಾಶಿ: ಇಂದು ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಬೇಕಾಗುವುದು. ನಿಮ್ಮ ಯಾವುದೇ ಸಂಬಂಧದ ಜೊತೆ ರಾಜಿ ಮಾಡಿಕೊಳ್ಳಲು ಹೋಗಬಹುದು. ಅವಿವಾಹಿತರ ಜೀವನದಲ್ಲಿ ಹೊಸ ಅತಿಥಿಯ ಆಗಮನದ ನಿರೀಕ್ಷೆಯು ಇರುವುದು. ನಿಮ್ಮ ಆಪ್ತರ ಜೊತೆ ಸ್ವಲ್ಪ ಸಮಯ ಮೋಜು ಮಾಡುತ್ತೀರಿ. ಆಧ್ಯಾತ್ಮದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಸ್ಪರ್ಧೆಯ ವಿಷಯದಲ್ಲಿ ಮುನ್ನುಗ್ಗುವ ಸ್ವಭಾವವು ಇರಲಿದೆ. ಪ್ರೀತಿಪಾತ್ರರ ಜೊತೆ ನಿಮ್ಮ ಆಪ್ತತೆ ಹೆಚ್ಚಾಗಬಹುದು. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ. ತಂದೆಯಿಂದ ಸಹಕಾರವನ್ನು ಪಡೆಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ಬೀಳಿಸಿಕೊಳ್ಳುವ ಕಲೆ ನಿಮಗೆ ತಿಳಿದುಬರುವುದು. ವ್ಯರ್ಥ ಓಡಾಟದಿಂದ ಬೇಸರವಾಗುವುದು. ಒತ್ತಡದ ಕಾರ್ಯದಿಂದ ನೀವು ದೂರ ಉಳಿಯುವಿರಿ. ಇಂದು ಯಾರ ಮಾತನ್ನೂ ಪೂರ್ಣವಾಗಿ ನಂಬಲು ಆಗದು.

ಮಕರ ರಾಶಿ: ಇಂದು ನೀವು ನಿಯಮಗಳ ಉಲ್ಲಂಘನೆಗೆ ಪ್ರಾಶಸ್ತ್ಯ ಕೊಡುವುದು ಬೇಡ. ನಿಮ್ಮ ಆದಾಯ ಮತ್ತು ಖರ್ಚುಗಳನ್ನು ನೀವು ಸಮವಲ್ಲದಿದ್ದರೂ ತೊಂದರೆಯಾಗದಂತೆ ನಿಭಾಯಿಸುವಿರಿ. ಅದು ನಿಮಗೆ ಒಳ್ಳೆಯದು. ಇಲ್ಲವಾದರೆ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ನೀವು ಚಿಂತೆ ಮಾಡುತ್ತೀರಿ. ಕುಟುಂಬದಲ್ಲಿನ ಸಣ್ಣ ತಪ್ಪುಗಳನ್ನು ನೀವು ಉದಾತ್ತತೆಯಿಂದ ಕ್ಷಮಿಸಬಿಡಿ. ಅದನ್ನು ದೊಡ್ಡ ಮಾಡಿಕೊಂಡು ಮಾನಸಿಕವಾಗಿ ನೋಯುವುದು ಬೇಡ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಯಂತ್ರಗಳ ಮಾರಾಟದಿಂದ ಹೆಚ್ಚಿನ ಲಾಭಾಂಶವನ್ನು ಪಡೆಯುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಇಂದು ಸ್ತ್ರೀಯರಿಗೆ ಅನಿರೀಕ್ಷಿತ ತೊಂದರೆಗಳು ಇರಲಿದೆ. ನೆರೆಹೊರೆಯರ ಜೊತೆ ವಾಗ್ವಾದ‌ ಮಾಡುವಿರಿ. ಬಾಡಿಗೆ ಮನೆಯ ಮಾಲಿಕರಿಂದ ನಿಮಗೆ ಏನಾದರೂ ಆಗಬಹುದು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗುವುದು. ಎಂತಹ ಪರಿಣತಿ ಇದ್ದರೂ ಎಡವುವುದು ಸಹಜವಾಗಲಿದೆ.

ಕುಂಭ ರಾಶಿ: ಬಹಳ ದಿನಗಳ ನಿಮ್ಮ ಪ್ರಯತ್ನಕ್ಕೆ ಫಲವು ಸಿಗಲಿದೆ. ಮಾತಿನಿಂದ ನಿಮಗೆ ಕೆಲವು ಬಂಧಗಳು ಕಳಚಿಕೊಳ್ಳಬಹುದು. ಇಂದು ನೀವು ವಿಶ್ರಾಂತಿ ಪಡೆಯುವುದಿಲ್ಲ. ಕೌಟುಂಬಿಕ ಕಲಹದಿಂದಾಗಿ ನಿಮ್ಮ ತಲೆನೋವು ಇರುತ್ತದೆ. ಇದರಿಂದ ನೀವು ಯಾವುದೇ ಕೆಲಸ ಮಾಡಲು ಬಯಸುವುದಿಲ್ಲ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನೀವು ಆನ್‌ಲೈನ್‌ ಶಾಪಿಂಗ್ ನಿಂದ ಏನಾದರೂ ನಿಮ್ಮಿಂದ ತಪ್ಪಾಗಬಹುದು. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮ್ಮ ವಿನಂತಿಯನ್ನು ಯಾರೂ ಪುರಸ್ಕರಿಸದೇ ಇರಬಹುದು. ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಇಂದು ಅವಕಾಶಗಳು ಸಿಗುವುದು. ಇಷ್ಟಮಿತ್ರರ ಭೇಟಿಯಿಂದ ಖುಷಿಯು ಹೆಚ್ಚಾಗುವುದು. ಹಣದ ಮೂಲವನ್ನು ಹುಡುಕುವ ಪ್ರಯತ್ನವು ಪೂರ್ಣ ಫಲಿಸದು. ಸ್ವಂತ ಕಾರ್ಯವೇ ಹೆಚ್ಚಾಗಬಹುದು.

ಮೀನ ರಾಶಿ: ನಿಮ್ಮ ಒಳ್ಳೆಯ ಅಭ್ಯಾಸಗಳು ನಿಮಗೆ ಉಪಯೋಗಕ್ಕೆ ಬರಲಿವೆ. ನೀವು ಕ್ರಿಯಾ ಯೋಜನೆಯನ್ನು ತಯಾರಿಸಿದರೆ ಯಶಸ್ಸಿಗೆ ಸಮೀಪವಾಗುವಿರಿ. ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರು ತಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿತೆ ಬೇಡ. ನೀವು ಅಪರಿಚಿತರೊಂದಿಗೆ ಜಾಗರೂಕರಾಗಿರಬೇಕು. ಎಸೆದ ಕಲ್ಲನ್ನು ಮೆಟ್ಟಿಲು ಮಾಡಿಕೊಳ್ಳುವುದನ್ನು ಕಲಿಯಬೇಕು. ಆತುರದಲ್ಲಿ ನಿಮ್ಮ ಕಾರ್ಯವು ನಡೆಯಬಹುದು. ದೂರದ ಪ್ರಯಾಣಕ್ಕೆ ಹೋಗುವ ಯೋಗ ಆಕಸ್ಮಿಕವಾಗಿ ಬರಬಹುದು. ಬಂಧುಗಳು ಮನೆಗೆ ಬಂದ ಕಾರಣ ಖರ್ಚು ಹೆಚ್ಚಾದೀತು. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಟದಿಂದ ನೀವು ಸಿಟ್ಟಾಗುವಿರಿ. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಿರುವುದು.‌ ಯಾರನ್ನೂ ಜೊತೆಗೆ ಕರೆದುಕೊಂಡು ಹೋಗುವ ಅಭ್ಯಾಸವಿಲ್ಲ.‌

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ