ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ವ್ಯಾಘಾತ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 15:40 ರಿಂದ 17:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54 ರಿಂದ 11:20 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:47 ರಿಂದ 14:13ರ ವರೆಗೆ.
ಮೇಷ ರಾಶಿ: ಇಂದು ನಿಮ್ಮ ಪ್ರತಿಭೆಯಿಂದ ಉತ್ತಮ ಸ್ಥಾನವನ್ನು ಗಳಿಸುವಿರಿ. ನಿಮ್ಮ ಕುಟುಂಬದ ವಾತಾವರಣವು ಸ್ವಲ್ಪ ಆತಂಕದಿಂದ ಕೂಡಿರಬಹುದು. ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನೀವು ಸ್ನೇಹಿತರಿಂದ ಹೆಚ್ಚು ಸಂತೋಷವನ್ನು ಪಡೆಯುತ್ತೀರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು. ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ಮಾನಸಿಕವಾಗಿ ಉತ್ಸಾಹವು ಕಡಿಮೆ ಇರುವುದು. ಹಣದ ಉಳಿತಾಯಕ್ಕೆ ಬೇಕಾದ ಮಾರ್ಗವನ್ನು ನೀವು ಆರಿಸಿಕೊಳ್ಳುವುದು ಸೂಕ್ತ. ಕೃಷಿಯಲ್ಲಿ ನೀವು ಹೆಚ್ಚು ಪ್ರಗತಿಯನ್ನು ಸಾಧಿಸುವ ಮನಸ್ಸು ಇರುವುದು.
ವೃಷಭ ರಾಶಿ: ನಿಮ್ಮ ಕೆಲಸದ ಮೇಲೆ ನೀವು ಸಂಪೂರ್ಣ ಗಮನವಿಲ್ಲದೇ ಯಾವುದೋ ಯೋಚನೆಯಲ್ಲಿ ಎಡವಟ್ಟು ಮಾಡಿಕೊಳ್ಳುವಿರಿ. ನಿಮ್ಮ ಸೌಕರ್ಯವು ಹೆಚ್ಚಾಗುತ್ತದೆ ಎಂದು ಖುಷಿ ಪಡುವ ಬದಲು ಆಲಸ್ಯದತ್ತ ನಿಮ್ಮ ನಡೆ ಇರಲಿದೆ. ನೀವು ಚಿಕ್ಕ ಮಕ್ಕಳ ಜೊತೆ ಸ್ವಲ್ಪ ಸಮಯ ಮೋಜು ಮಾಡುತ್ತೀರಿ. ಆಲಸ್ಯದಿಂದ ಎದ್ದಾಗ ಮಾತ್ರ ನೀವು ನಿಮ್ಮ ಅನೇಕ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ಸದಸ್ಯರ ಅಗತ್ಯತೆಗಳ ಬಗ್ಗೆ ನೀವು ಗಮನ ಹರಿಸಬೇಕು. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ಭೂಮಿಯ ವ್ಯವಹಾರವನ್ನು ಒಬ್ಬೊಂಟಿಯಾಗಿ ನಿರ್ವಹಿಸುವಿರಿ. ಸಹೋದ್ಯೋಗಿಗಳಿಂದ ಅನಿವಾರ್ಯವಾಗಿ ಸಹಾಯವನ್ನು ಪಡೆಯುವಿರಿ. ಸ್ವಾರ್ಥವನ್ನು ಬಿಟ್ಟು ಬೇರೆ ಕಡೆ ಯೋಚನೆಯನ್ನು ಮಾಡಲಾರಿರಿ. ಅಭದ್ರತೆಯನ್ನು ನೀವು ದೂರಮಾಡಿಕೊಳ್ಳುವುದು ಉತ್ತಮ.
ಮಿಥುನ ರಾಶಿ: ಇಂದು ನಿಮ್ಮ ಪ್ರಮುಖ ಕೆಲಸಗಳು ವೇಗದಿಂದ ಸಾಗುವುದು. ನಿಮಗೆ ಅಯಾಚಿತವಾಗಿ ಬರುವ ಶುಭಸಂದರ್ಭವನ್ನು ಸಂತೋಷಿಸುವಿರಿ. ಮೇಲಧಿಕಾರಿಗಳ ಕೋಪವನ್ನು ನಿಯಂತ್ರಣದಲ್ಲಿ ಇರಿಸಲು ನಿಮ್ಮ ಪಾತ್ರವೂ ಮುಖ್ಯವಾಗಿರಲಿದೆ. ಇಂದು ನಿಮ್ಮ ಸಣ್ಣ ವ್ಯಾಪಾರಗಳು ಹೆಚ್ಚಾಗುತ್ತದೆ. ಸಕಾರಾತ್ಮಕ ವಿಷಯಗಳು ವೇಗವನ್ನು ಪಡೆಯುತ್ತವೆ. ಮಕ್ಕಳಿಗಾಗಿ ನೀವು ಹೊಸ ವಾಹನವನ್ನು ಖರೀದಿಸಬಹುದು. ನಿಮ್ಮ ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಲು ನೀವು ಯೋಚಿಸುತ್ತಿದ್ದರೆ, ಈಡೇರುತ್ತದೆ. ಹಳೆಯ ಯೋಜನೆಗಳಿಗೆ ಪುನಶ್ಚೇತನವನ್ನು ನೀಡುವಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ. ಅಜಾಗರೂಕತೆಯಿಂದ ನಿಮಗೆ ನಷ್ಟ ಮಾಡಿಕೊಳ್ಳುವಿರಿ. ಕಾಲು ನೋವು ಹೆಚ್ಚಾಗಿದ್ದು ವೈದ್ಯರ ಸಲಹೆಯನ್ನು ಪಡೆಯುವಿರಿ. ನಿಮ್ಮ ದಿನಚರ್ಯೆಯನ್ನು ಬದಲಿಸಿಕೊಳ್ಳಲು ಇಷ್ಟಪಡುವಿರಿ.
ಕರ್ಕಾಟಕ ರಾಶಿ: ನಿಮಗೆ ಸಂಬಂಧಗಳಲ್ಲಿ ಗೌರವವನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು. ನಿಮ್ಮ ಎಲ್ಲ ಮಾತುಗಳಿಗೂ ಅಪಾರ್ಥವನ್ನು ಮಾಡಿಯಾರು. ನ್ಯಾಯಾಂಗದ ವಿಷಯಗಳಲ್ಲಿ ನೀವು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು. ಅಗತ್ಯ ಕೆಲಸಗಳಿಗೆ ಆತುರದಲ್ಲಿ ಮುನ್ನಡೆಯದೇ ಸಮಚಿತ್ತದಿಂದ ಇದ್ದರೆ ನಿಮಗೆ ಒಳ್ಳೆಯದಾಗುತ್ತದೆ. ಧಾರ್ಮಿಕಕಾರ್ಯಗಳಿಗೆ ನಿಮ್ಮ ಸಲಹೆಯನ್ನು ಪಡೆಯಬಹುದು. ಶುದ್ಧ ಮನಸ್ಸಿನಂತೆ ತೋರಿದರೂ ಅಂತರಂಗದಲ್ಲಿ ಕಲ್ಮಶವು ಹೆಚ್ಚಿರುವುದು. ವಿವಾಹದ ಮಾತುಕತೆಗಳನ್ನು ನಡೆಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ. ಜಾಣ್ಮೆಯಿಂದ ನಿಮ್ಮ ಕೆಲಸವನ್ನು ಬೇಗ ಪೂರ್ಣಮಾಡುವಿರಿ. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ಕಳೆದುಕೊಂಡಷ್ಟು ವೇಗವಾಗಿ ಉಳಿಸಿಕೊಳ್ಳುವುದು ಕಷ್ಟವೆನಿಸುವುದು. ನಿಮ್ಮ ಮಾತಿಗೆ ಇಂದು ವಿರೋಧವು ಉಂಟಾಗುವುದು. ಅಪರಿಚರ ಜೊತೆ ವ್ಯವಹಾರವು ಸರಿಯಾಗಿ ಇರಲಿ. ತಂದೆಯ ಮೇಲೆ ನಿಮಗೆ ಬೇಸರ ಬರಬಹುದು.