AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರಿಗೆ ಇಂದು ಹಿತಶತ್ರುಗಳಿಂದ ತೊಂದರೆಯಾಗಬಹುದು

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಫೆಬ್ರವರಿ​​​​ 06) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಈ ರಾಶಿಯವರಿಗೆ ಇಂದು ಹಿತಶತ್ರುಗಳಿಂದ ತೊಂದರೆಯಾಗಬಹುದು
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 06, 2024 | 6:42 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ವ್ಯಾಘಾತ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 15:40 ರಿಂದ 17:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54 ರಿಂದ 11:20 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:47 ರಿಂದ 14:13ರ ವರೆಗೆ.

ಸಿಂಹ ರಾಶಿ: ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಜಗಳ ಉಂಟಾಗಬಹುದು. ನೀವು ಎಲ್ಲ ವಿಷಯಗಳನ್ನು ಸರಿಯಾದ ತಿಳಿವಳಿಕೆಯಿಂದ ಎದುರಿಸಬೇಕಾಗುತ್ತದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಅತಿಯಾದ ಕಾರ್ಯದಿಂದ ನಿಮಗೆ ತೊಂದರೆಯಾದೀತು. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವಿರಿ. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ವಾಮಮಾರ್ಗದಿಂದ ಹಣವನ್ನು ಸಂಪಾದಿಸುವ ಮನಸ್ಸು ಇರಲಿದೆ. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು. ಮನೆಯಲ್ಲಿ ಅಶಾಂತಿಯ ವಾತಾವರಣವು ಸರಿಮಾಡಿಕೊಳ್ಳಿ. ಬೇಗ ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಸರಿಯಾಗುವುದು. ತಾಯಿಯು ನಿಮಗೆ ಹಿತವಚನವನ್ನು ಹೇಳುವರು.

ಕನ್ಯಾ ರಾಶಿ: ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸಲಾಗದು. ಮಕ್ಕಳ‌ ದೋಷವನ್ನೇ ಮತ್ತೆ ಮತ್ತೆ ಹೇಳುತ್ತಾ ಇರುವುದು ಬೇಡ. ನೀವು ಮನೆಯ ಸೌಂದರ್ಯದ ಬಗ್ಗೆ ಹೆಚ್ಚು ಗಮನ ಇರಲಿದೆ. ಹಿತಶತ್ರುಗಳಿಂದ ನಿಮಗೆ ತೊಂದರೆ ಇರಬಹುದು. ರಾಜಕೀಯದಲ್ಲಿ ಕೈ ಹಾಕಲು ಪ್ರಯತ್ನಿಸುವವರು ಎಲ್ಲವನ್ನೂ ಎದುರಿಸುವ ಶಕ್ತಿಯನ್ನು ಪಡೆದುಕೊಳ್ಳಬೇಕು. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ. ಹಿರಿಯರು ನಿಮ್ಮ‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪವನ್ನು ಮಾಡಿಕೊಂಡು ನೀವಿರುವಿರಿ. ವ್ಯವಹಾರದಲ್ಲಿ ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳಬೇಕಾದೀತು. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳಿ. ಹಳೆಯ ನೋವುಗಳು ನಿಮ್ಮನ್ನು ಕಾಡಿಸಿಯಾವು.

ತುಲಾ ರಾಶಿ: ನೀವು ಸಂಬಂಧಗಳಿಗೆ ಹೆಚ್ಚು ಬದ್ಧರಾಗಿ ಇರುವಿರಿ. ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಇಷ್ಟಪಡಲಾರಿರಿ. ಎಲ್ಲರ ಜೊತೆ ಬೆರೆಯುವುದು ನಿಮಗೆ ಖುಷಿಯ ವಿಚಾರವಾಗಲಿದೆ. ನಿಮ್ಮ ಹಿರಿಯರ ಜೊತೆ ಗೌರವವನ್ನು ಕಾಪಾಡಿಕೊಳ್ಳಿ. ನಿಮಗೆ ಯಾರಾದರೂ ಉದ್ಯಮಕ್ಕೆ ಸಂಬಂಧಿಸಿದ ಸಲಹೆಯನ್ನು ನೀಡಬಹುದು. ಆದೇ ಅದನ್ನು ಜಾರಿಗೊಳಿಸುವ ಮೊದಲು ಚಿಂತಿಸಿ. ವಿದ್ಯಾರ್ಥಿಗಳು ಬೌದ್ಧಿಕ ಮತ್ತು ಮಾನಸಿಕ ಒತ್ತಡದಿಂದ ಮುಕ್ತರಾಗಬೇಕಾಗುವುದು. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಬಗ್ಗೆ ಯೋಚನೆ ಇರಲಿದೆ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ. ಮಕ್ಕಳಿಗಾಗಿ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದು.‌

ವೃಶ್ಚಿಕ ರಾಶಿ: ನಿಮ್ಮ ಕುಟುಂಬದ ಸಂತೋಷದಲ್ಲಿ ನೀವು ಹೆಚ್ಚು ಆಸಕ್ತಿ ಹೊಂದಿರುತ್ತೀರಿ. ನಿಮ್ಮ ಕಾರ್ಯಗಳಿಂದ ಪ್ರೀತಿಪಾತ್ರರ ಹೃದಯವನ್ನು ಗೆಲ್ಲಲು ಸಫಲರಾಗುವಿರಿ. ಸರ್ಕಾರಿ ಕಾರ್ಯದಿಂದ ಒಳ್ಳೆಯ ಸುದ್ದಿ ಕೇಳುವ ಸಾಧ್ಯತೆ ಇದೆ. ಮನೆಯಿಂದ ಹೊರಗಿರುವವರ ಕುಟುಂಬ ಸದಸ್ಯರನ್ನು ಭೇಟಿ ಮಾಡಬಹುದು. ನಿಮ್ಮ ಮನಸ್ಸು ಯಾವುದೋ ಒಂದು ವಿಷಯದಲ್ಲಿ ಗಹನವಾಗಿ ಇರಬಹುದು. ಬಹಳ‌ ದಿನಗಳ ಅನಂತರ ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕುಳಿತು ಆಪ್ತವಾಗಿ ಮಾತನಾಡುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಮಕ್ಕಳಿಂದ ನಿಮಗೆ ಕೀರ್ತಿಯು ಪ್ರಾಪ್ತವಾಗುವುದು. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಅಧಿಕಾರವು ಸಿಗಬಹುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ. ಆಪ್ತರ ಬಗೆಗಿನ ಊಹೆಯು ವ್ಯತ್ಯಾಸವಾದೀತು. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಲಿದೆ.