AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 18ರ ದಿನಭವಿಷ್ಯ

Daily Numerology February 18: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 18ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 18, 2026 | 12:15 AM

Share

ಈ ದಿನ ಸಂಜೆ ಹೊತ್ತಿಗೆ ಹತ್ತು ನಿಮಿಷವಾದರೂ ಧ್ಯಾನ ಮಾಡುವುದಕ್ಕೆ ಪ್ರಯತ್ನಿಸಿ. ಸೂರ್ಯ ನಾರಾಯಣನ ಸ್ಮರಣೆ, ಆರಾಧನೆಯಿಂದಾಗಿ ನಿಮಗೆ ಪದೇಪದೇ ಕಾಡುತ್ತಿರುವ ಹಿನ್ನಡೆಯಿಂದ ಹೊರಗೆ ಬರುವುದಕ್ಕೆ ಸಹಾಯ ಆಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಯಾರು ನಿಮ್ಮ ಕೆಲಸ, ಸೌಂದರ್ಯ, ನಿರ್ಧಾರಗಳನ್ನು ಹೊಗಳುತ್ತಿದ್ದರೋ ಅವರೇ ಈ ದಿನ ನಿಮ್ಮನ್ನು ಕಂಡೂ ಕಾಣದಂತೆ ಮುಂದಕ್ಕೆ ಸಾಗಿಬಿಡಬಹುದು. ನೀವು ಸಾಮಾನ್ಯ ದಿನಗಳಲ್ಲಿ ಯಾರ ಮಾತಿಗೆ ಬಹಳ ಖುಷಿಯಿಂದ ಇರುತ್ತಿದ್ದರೋ ಅದು ಈ ದಿನ ಸಾಧ್ಯವಾಗುವುದಿಲ್ಲ. ವಾಹನ ಚಾಲನೆ ವೇಳೆ ಬಹಳ ಎಚ್ಚರಿಕೆ ವಹಿಸುವುದು ಮುಖ್ಯ. ಬಿದ್ದು ಸಣ್ಣ- ಪುಟ್ಟ ಗಾಯವಾದರೂ ಮಾಡಿಕೊಳ್ಳುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಯಾರೋ ನಿಮ್ಮನ್ನು ಮೂದಲಿಸಿದರು ಅಥವಾ ಹಂಗಿಸಿದರು ಎಂಬ ಕಾರಣಕ್ಕೆ ಅವರಿಗೆ ಏನೋ ಸಾಬೀತು ಮಾಡಬೇಕು ಎಂದು ಹೊರಟುಬಿಡಬೇಡಿ. ಇನ್ನು ನಿಮ್ಮ ಪಾಲಿನ ಜವಾಬ್ದಾರಿಗಳನ್ನು ಇತರರಿಗೆ ವರ್ಗಾಯಿಸುವುದು ಕೂಡ ಸರಿಯಲ್ಲ. ನಿಮ್ಮಲ್ಲಿ ಕೆಲವರಿಗೆ ವೇರಿಕೋಸ್ ನಂಥ ಸಮಸ್ಯೆಗಳು ಉಲ್ಬಣಿಸಬಹುದು ಅಥವಾ ಕಾಣಿಸಬಹುದು. ಕೂಡಲೇ ವೈದ್ಯರ ಬಳಿ ಸೂಕ್ತ ಔಷಧೋಪಚಾರ ತೆಗೆದುಕೊಳ್ಳುವ ಕಡೆಗೆ ಗಮನ ನೀಡುವುದು ಕ್ಷೇಮ, ನೆನಪಿನಲ್ಲಿ ಇರಲಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಷೇರು, ಮ್ಯೂಚುವಲ್ ಫಂಡ್, ಡಿಬೆಂಚರ್, ಪರ್ಪೆಚುವಲ್ ಬಾಂಡ್, ಗೋಲ್ಡ್ ಹೀಗೆ ಯಾವುದಾದರೊಂದರಲ್ಲಿ ಹೂಡಿಕೆ ಮಾಡುವುದಕ್ಕೆ ನಿರ್ಧಾರ ಮಾಡುತ್ತೀರಿ. ಅಥವಾ ನಿಮಗೆ ಆಪ್ತರಾದವರು ಹಿಂತಿರುಗಿಸಬೇಕಾದ ಹಣದ ಬದಲಿಗೆ ಇಂಥದ್ದು ಯಾವುದಾದರೂ ಒಂದರ ಮೇಲೆ ನಿಮ್ಮ ಹೆಸರಲ್ಲಿ ಹಣ ಹೂಡಿಕೆ ಮಾಡಬಹುದು. ಇನ್ನು ನಿಮ್ಮಲ್ಲಿ ಕೆಲವರು ವಿಲಾಸಿ ಕಾರು ಖರೀದಿಗೆ ಮನಸ್ಸು ಮಾಡುವ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.