ಸಂಖ್ಯಾಶಾಸ್ತ್ರ ಭವಿಷ್ಯ; ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 19ರ ದಿನಭವಿಷ್ಯ
Daily Numerology February 19: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ ಹಾಕಿದ್ದೀರಿ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಿಸಬೇಕಾದ ಕೆಲಸಗಳು ಇದ್ದಲ್ಲಿ ಅದರ ಬಗ್ಗೆ ಸಂಬಂಧಪಟ್ಟವರನ್ನು ಕರೆಸಿ ಮಾತುಕತೆ ಆಡಲು ಮುಂದಾಗುತ್ತೀರಿ. ಅದೇ ರೀತಿ ಮನೆಯಲ್ಲಿ ಇರುವಂಥ ಹಾಗೂ ಸದ್ಯಕ್ಕೆ ಬಳಕೆ ಮಾಡದಿರುವಂಥ ಕೆಲವು ವಸ್ತುಗಳ ಮಾರಾಟ ಮಾಡುವ ಯೋಗ ಸಹ ಇದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5) ವಿದೇಶದಲ್ಲಿ ವ್ಯಾಸಂಗ/ ಉದ್ಯೋಗ ಮಾಡಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಹೋಟೆಲ್ ಉದ್ಯಮವನ್ನು ನಡೆಸುತ್ತಿರುವವರಿಗೆ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ಇನ್ನು ಇದಕ್ಕಾಗಿಯೇ ಬ್ಯಾಂಕ್ ಅಥವಾ ಬ್ಯಾಂಕೇತರ ಸಂಸ್ಥೆಗಳಿಂದ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಂತಾದಲ್ಲಿ ಇಲ್ಲಿಯವರೆಗೆ ನಾನಾ ಕಾರಣಗಳಿಂದ ವಿಳಂಬ ಆಗುತ್ತಿರುವ ಪ್ರಕ್ರಿಯೆಗೆ ವೇಗ ದೊರೆಯಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6) ಹೊಸ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರು ಅಲ್ಲಿಂದ ಮುಂದಿನ ಹಂತಕ್ಕೆ ಉದ್ದೇಶವನ್ನು ಒಯ್ಯುವ ಯೋಗ ಇದೆ. ಕ್ರೆಡಿಟ್ ಕಾರ್ಡ್ ಬಳಸುವವರು ಖರ್ಚಿನ ಮೇಲೆ ಹತೋಟಿ ಇರಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ನಿಮಗೆ ಅಗತ್ಯ ಇಲ್ಲದ ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಹೋಗಬೇಡಿ. ನಿಮ್ಮಲ್ಲಿ ಕೆಲವರು ಹಳೇ ಆಸ್ತಿ ವ್ಯಾಜ್ಯಗಳು ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗುವುದಿಲ್ಲ ಎಂಬುದು ಖಚಿತವಾಗಲಿದೆ.
ಲೇಖನ- ಸ್ವಾತಿ ಎನ್.ಕೆ.
