AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 19ರ ದಿನಭವಿಷ್ಯ

Daily Numerology February 19: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 19ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 19, 2026 | 12:30 AM

Share

ಲಕ್ಷ್ಮೀನರಸಿಂಹ ದೇವಾಲಯಕ್ಕೆ ತೆರಳಿ ತುಳಸಿ ಮಾಲೆಯನ್ನು ಸಮರ್ಪಣೆ ಮಾಡಿ. ಇದರಿಂದಾಗಿ ನಿಮ್ಮನ್ನು ಕಾಡುತ್ತಿರುವ ಆತಂಕ, ಹಿಂಜರಿಕೆ ಹಾಗೂ ಮಾನಸಿಕ ಕ್ಲೇಶ ದೂರವಾಗುತ್ತದೆ. ಯಾವುದೇ ಕೆಲಸವನ್ನು ಮಾಡಬೇಕೋ ಬೇಡವೋ ಎಂಬ ದ್ವಂದ್ವ ಇದ್ದಲ್ಲಿ ಸ್ಪಷ್ಟತೆ ಸಿಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸಮಯದೊಳಗೆ ಪೂರ್ಣಗೊಳಿಸಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ ಮುಗಿಸಿ. ಇನ್ನು ನೀವೇನಾದರೂ ಹಣ್ಣು- ಹೂವು, ತರಕಾರಿ ಇಂಥವುಗಳ ವ್ಯಾಪಾರವನ್ನು ಮಾಡುವವರಾದರೆ ಹೊಸದಾಗಿ ಹೂಡಿಕೆ ಮಾಡುವ ಕಡೆಗೆ ಆದ್ಯತೆಯನ್ನು ನೀಡಲಿದ್ದೀರಿ. ಪ್ರೀತಿ- ಪ್ರೇಮದಲ್ಲಿ ಇರುವವರು ಮನೆಯಲ್ಲಿ ವಿಚಾರ ಪ್ರಸ್ತಾವ ಮಾಡುವ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8) ಚಾಲಕ ವೃತ್ತಿಯಲ್ಲಿ ಇರುವಂಥವರಿಗೆ ಒತ್ತಡದ ದಿನ ಇದಾಗಿರುತ್ತದೆ. ನೀವು ಓಡಿಸುವ ವಾಹನದ ಸರ್ವೀಸ್ ಆಗಿದೆಯಾ, ಅದು ಎಲ್ಲ ರೀತಿಯಲ್ಲೂ ಉತ್ತಮವಾದ ಸ್ಥಿತಿಯಲ್ಲಿ ಇದೆಯಾ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಕ್ಷೇಮ. ಈ ದಿನ ಸಾಧ್ಯವಾದಲ್ಲಿ ಹನುಮಂತ ದೇವರ ದೇವಾಲಯಕ್ಕೆ ತೆರಳಿ ದರ್ಶನವನ್ನು ಪಡೆಯಿರಿ. ಬ್ಯಾಂಕ್ ಉದ್ಯೋಗಿಗಳಿಗೆ ಟಾರ್ಗೆಟ್ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9) ಸ್ನೇಹಿತರಿಗೆ ಕೊಟ್ಟ ಮಾತಿನಂತೆಯೇ ನಡೆದುಕೊಳ್ಳುವುದು ಈ ದಿನ ನಿಮಗೆ ಆದ್ಯತೆಯಾಗಲಿದೆ. ಕಟ್ಟಡ ನಿರ್ಮಾಣ, ರಿನೋವೇಷನ್ ಇಂಥದ್ದನ್ನು ಮಾಡಿಸುತ್ತಾ ಇರುವವರಿಗೆ ಏಕ ಕಾಲಕ್ಕೆ ಹಲವು ಕೆಲಸಗಳು ಹುಡುಕಿಕೊಂಡು ಬರಲಿವೆ. ಉದ್ಯೋಗ ಸ್ಥಳದಲ್ಲಿ ನಿಮಗೆ ಆಪ್ತರಾದವರು ಕೆಲಸ ಬಿಡುವ ತೀರ್ಮಾನ ಮಾಡುವ ಸಾಧ್ಯತೆ ಇದೆ. ಉದ್ಯೋಗಸ್ಥರಿಗೆ ನಿಮ್ಮ ಮೇಲೆ ಸಂಸ್ಥೆಗೆ ವಿಪರೀತ ನಿರೀಕ್ಷೆ ಇದೆ ಎಂಬುದು ಗಮನಕ್ಕೆ ಬರಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ