
ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ.
ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ ಆಗಲಿವೆ. ಕೆಲವು ಹಣಕಾಸಿನ ವಿಚಾರದ ನಿರ್ಧಾರಗಳು ಮುಂದಕ್ಕೆ ಹಾಕಿಕೊಳ್ಳಬೇಕಾಗುತ್ತದೆ. ಮೆಡಿಕಲ್ ಶಾಪ್ ನಡೆಸುತ್ತಾ ಇರುವವರು ಇದಕ್ಕೆ ಪೂರಕವಾಗಿ ಕೆಲವು ಹೊಸ ವ್ಯವಹಾರ ನಡೆಸುವ ಚಿಂತನೆ ನಡೆಸುತ್ತೀರಿ.
ಉದ್ಯೋಗ ಸ್ಥಳದಲ್ಲಿ ನೀವು ಯಾವುದನ್ನು ಕೊನೆ ಆಯ್ಕೆ ಎಂದು ಭಾವಿಸಿರುತ್ತೀರೋ ಅದನ್ನೇ ಆರಿಸಿಕೊಳ್ಳುವಂತೆ ಆಗಲಿದೆ. ನಾಲಗೆ ಹುಣ್ಣು, ಗಂಟಲು ನೋವಿನ ಸಮಸ್ಯೆ ಈ ದಿನ ವಿಪರೀತ ಬಾಧಿಸಬಹುದು. ಆಹಾರ ಪಥ್ಯವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಆಕಸ್ಮಿಕವಾಗಿ ನಿಮಗೆ ಸಿಗುವಂಥ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಕಡೆಗೆ ಗಮನ ನೀಡಿ.
ನಿಮ್ಮ ಪಾಲಿನ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡಿದ್ದರ ಉತ್ತಮ ಫಲಿತವನ್ನು ಪಡೆದುಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಹೆಚ್ಚಿನ ಬಡ್ಡಿದರಕ್ಕೆ ತಂದಿದ್ದ ಸಾಲವನ್ನು ಹಿಂತಿರುಗಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಮಿನರಲ್ ವಾಟರ್ ವಿತರಣೆಯ ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಸವಾಲು ಎನಿಸಿದಂ ಕೆಲವು ಕೆಲಸಗಳನ್ನು ನೀವಾಗಿಯೇ ಮುಂದೆ ಹೋಗಿ ವಹಿಸಿಕೊಳ್ಳಲಿದ್ದೀರಿ.
ಲೇಖನ- ಸ್ವಾತಿ ಎನ್.ಕೆ.