ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ

Daily Numerology February 28: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 28ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ Edited By:

Updated on: Feb 28, 2026 | 12:20 AM

ಉಪ್ಪು- ಮೆಣಸು ಈ ಎರಡರಿಂದ ದೃಷ್ಟಿ ದೋಷ ನಿವಾರಣೆಗಾಗಿ ನಿವಾಳಿಸಿಕೊಳ್ಳಿ. ಮುಖ್ಯವಾಗಿ ಪದೇಪದೇ ಅಪಘಾತ, ಗಾಯಗಳು ಆಗುತ್ತಿದ್ದಲ್ಲಿ ಸಂಜೆ ವೇಳೆಗೆ ಇದನ್ನು ಮಾಡಿಕೊಳ್ಳುವುದರಿಂದ ದೃಷ್ಟಿದೋಷದ ನಿವಾರಣೆ ಆಗಿ, ಸಮಸ್ಯೆಯಿಂದ ಹೊರಗೆ ಬರುತ್ತೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ ಸೂಚನೆ ದೊರೆಯಲಿದ್ದು, ಆ ಕಡೆಗೆ ಪೂರ್ಣ ಪ್ರಮಾಣದಲ್ಲಿ ಗಮನ ನೀಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಈಗಾಗಲೇ ನೀವು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆ ಕೊಡಬೇಕಾದ ಹಣವನ್ನು ಇವತ್ತು- ನಾಳೆ ಎನ್ನುತ್ತಾ ಮುಂದಕ್ಕೆ ಹಾಕುತ್ತಾ ಬರುತ್ತಿರುವವರಿಗೆ ಗಟ್ಟಿಯಾದ ಧ್ವನಿಯಲ್ಲಿ ಕೇಳಲಿದ್ದೀರಿ, ಆ ಹಣ ವಸೂಲಿಯೇ ಆಗಿಬಿಡಲಿದೆ ಅಥವಾ ಇಂಥ ದಿನ ಖಚಿತವಾಗಿ ಹಣ ದೊರೆಯುವ ಭರವಸೆ ಸಿಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಂತೆ ಹೊತ್ತಿಗೆ ಮೂರು ಮೊಳ ಎಂಬ ರೀತಿಯಲ್ಲಿ ಯಾವ ಕೆಲಸವನ್ನು ಸಹ ಮಾಡುವುದಕ್ಕೆ ಹೋಗಬೇಡಿ. ತುರ್ತಾಗಿ ಕೆಲಸ ಮುಗಿಸುವ ಭರದಲ್ಲಿ ಗುಣಮಟ್ಟದ ಜೊತೆ ರಾಜೀ ಮಾಡಿಕೊಂಡು, ದೀರ್ಘಾವಧಿಯಲ್ಲಿ ಅದಕ್ಕಾಗಿ ಪಶ್ಚಾತಾಪ ಪಡುವಂತೆ ಆಗುತ್ತದೆ. ಸೋದರ- ಸೋದರಿಯರ ಜತೆಗಿನ ಭಿನ್ನಾಭಿಪ್ರಾಯ ಈಗಾಗಲೇ ಇದ್ದಲ್ಲಿ ಅದು ವಿಪರೀತಕ್ಕೆ ಹೋಗುವ ಸಾಧ್ಯತೆ ಇರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Published On - 12:20 am, Sat, 28 February 26

ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

Follow Us