AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ಹಲವು ರೀತಿಯ ಅನುಕೂಲಗಳು ಆಗಲಿವೆ. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಕೆಲವರಿಗೆ ಬಡ್ತಿ, ವೇತನ ಹೆಚ್ಚಳದ ಬಗ್ಗೆ ಇತರರ ಮೂಲಕ ಸುಳಿವು ದೊರೆಯಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ
NumerologyImage Credit source: MSN
ಸ್ವಾತಿ ಎನ್​ಕೆ
| Edited By: |

Updated on: Feb 03, 2026 | 12:10 AM

Share

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ .

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಶಿಕ್ಷಣ, ತರಬೇತಿ, ಬರವಣಿಗೆ ಸಂಬಂಧಿತ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಉತ್ತಮವಾದ ಫಲ ಸಿಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಬಡ್ತಿ, ವೇತನ ಹೆಚ್ಚಳದ ಬಗ್ಗೆ ಇತರರ ಮೂಲಕ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಭಾವನಾತ್ಮಕ ದೃಷ್ಟಿಯಿಂದ ಏರುಪೇರಿನಿಂದ ಕೂಡಿರುವ ದಿನ ಇದಾಗಿರುತ್ತದೆ. ಸಣ್ಣ- ಪುಟ್ಟ ವಿಚಾರಗಳಿಗೂ ಮನಸ್ಸು ತೀವ್ರವಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಆದ್ದರಿಂದ ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿನ ಕೆಲವು ಗೊಂದಲಗಳು ಮಾತುಕತೆ ಮೂಲಕ ಬಗೆಹರಿಸಬಹುದು. ನೀವು ಉದ್ಯೋಗಸ್ಥರಾಗಿದ್ದಲ್ಲಿ ಸವಾಲಿನಿಂದ ಕೂಡಿದ ಪ್ರಾಜೆಕ್ಟ್ ಮುನ್ನಡೆಸುತ್ತಾ ಇದ್ದೀರಿ ಅಂತಾದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ನಿಮ್ಮಲ್ಲಿನ ನಾಯಕತ್ವ ಗುಣವು ಹೆಚ್ಚು ಪ್ರಚಾರಕ್ಕೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನ ಆಗಲಿದೆ. ಮೇಲಧಿಕಾರಿಗಳ ಗಮನ ನಿಮ್ಮತ್ತ ಸೆಳೆಯುವ ಸಾಧ್ಯತೆ ಇದೆ. ಹೊಸ ಜವಾಬ್ದಾರಿಗಳು ನಿಮಗೆ ವಹಿಸಬಹುದು. ನೀವು ಯಾವುದೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದರೂ ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಂಡುಬರುತ್ತದೆ.

ಲೇಖನ- ಸ್ವಾತಿ ಎನ್.ಕೆ.

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?