AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ

Daily Horoscope 12 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಗುರುವಾರ ಆಪದ್ಧನ ಸಂಗ್ರಹ, ಸಾಮಾಜಿಕ ಕಾರ್ಯ, ನಕಾರಾತ್ಮಕ ಆಲೋಚನೆ, ಸಾಮರಸ್ಯದ ಕೊರತೆ, ಸರಳತೆಯ ಅಭ್ಯಾಸ ಇವೆಲ್ಲ ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 12, 2026 | 12:50 AM

Share

ಮೇಷ ರಾಶಿ:

ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ.

ವೃಷಭ ರಾಶಿ:

ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ ಇರಾದೆಯನ್ನು ಸಂಗಾತಿಯ ಜೊತೆ ಹೇಳಿಕೊಳ್ಳಬಹುದು. ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುವಿರಿ. ಮನೋವ್ಯಥೆಯಿಂದ ನಿಮಗೆ ಬಹಳಷ್ಟು ತೊಂದರೆಗಳು ಬರಬಹುದು. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು.

ಮಿಥುನ ರಾಶಿ:

ಸೃಜನಾತ್ಮಕವಾಗಿ ಏನನ್ನಾದರೂ ಮಾಡುವುದು ಒಳ್ಳೆಯದು. ಸ್ಥಿರಾಸ್ತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ. ಒಂಟಿತನವು ನಿಮಗೆ ಇಷ್ಟವಾಗದು. ಇನ್ನೊಬ್ಬರ ನೋವನ್ನು ಕಂಡೂ ನೀವು ಸುಮ್ಮನಿರುವುದು ಬೇಡ. ಆಕರ್ಷಕ ವಸ್ತುಗಳಿಗೆ ಮನಸೋಲುವಿರಿ. ನಿಮ್ಮ ಯಂತ್ರಗಳು ದುರಸ್ತಿಗೆ ಬರಬಹುದು. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ವ್ಯವಹಾರವು ಇಂದು ಪೂರ್ಣವಾಗಲಾರದು.

ಕರ್ಕಾಟಕ ರಾಶಿ:

ಉದ್ಯಮದಲ್ಲಿ ಊಹಿಸಿದ ತೊಂದರೆ ಎದುರಾಗುತ್ತದೆ. ತಜ್ಞರಿಂದ ಅದನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಯಾರನ್ನೋ ಅನುಕರಿಸುತ್ತ ನೀವು ಸಂತೋಷವನ್ನು ಪಡುವಿರಿ. ಕೆಲವು ವ್ಯಕ್ತಿಗಳ ಬೆಂಬಲವೂ ಕೂಡ ನಿಮಗೆ ಸಿಗುತ್ತದೆ. ಅವಸರದ ನಿರ್ಧಾರವನ್ನು ಮಾಡಲುಹೋಗುವುದು ಬೇಡ. ಪಾಲುದಾರಿಕೆಯಲ್ಲಿ ಮನಸ್ತಾಪವನ್ನು ಉಳಿಸಿಕೊಳ್ಳದೇ ಮುನ್ನಡೆಯಿರಿ. ಈ ದಿನವನ್ನು ಕಳೆಯಲು ನೀವು ನಾನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ.

ಸಿಂಹ ರಾಶಿ:

ಸರ್ಕಾರಿ ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಣೆ ಮಾಡುವರು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರಿ. ಸಂಗಾತಿಯ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ಸರಿಯಾಗಿ ಗೊತ್ತಾಗಲಿದೆ. ಸ್ಥಗಿತವಾದ ಕಾರ್ಯಗಳಿಗೆ ಕಾಯಕಲ್ಪದ ಅವಶ್ಯಕತೆ ಇದೆ.

ಕನ್ಯಾ ರಾಶಿ:

ಕೆಲವು ಸಂಗತಿಗಳನ್ನು ನಿಮ್ಮನ್ನೇ ಹುಡುಕಿಕೊಂಡು ಬಂದು ನಿಮ್ಮ ಮನಸ್ಸನ್ನು ಮತ್ತಷ್ಟು ದುರ್ಬಲಗೊಳಿಸೀತು. ಮಾರುಕಟ್ಟೆಯ ವ್ಯವಹಾರವನ್ನು ಅರಿತು ಹೂಡಿಕೆ ಮಾಡಿ. ಒಳ್ಳೆಯ ಸಮಯವನ್ನು ಕಳೆದುಕೊಳ್ಳಬೇಕಾಗುವುದು. ಬಹಳ ಕಾಲದ ಹಿಂದೇ ಆಲೋಚಿಸಿದ್ದ ಕಾರ್ಯವು ಇಂದು ಆರಂಭಿಸಬೇಕು ಎಂದೆನಿಸುವುದು. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ನಿಮ್ಮ ವಾಗ್ದಾನವನ್ನು ಉಳಿಸಿಕೊಳ್ಳಿ.

ತುಲಾ ರಾಶಿ:

ನಿಮ್ಮ ವಿದ್ಯಾಭ್ಯಾಸದ ಕನಸನ್ನು ಕುಟುಂಬದಲ್ಲಿ ಹಂಚಿಕೊಳ್ಳುವಿರಿ. ಎಲ್ಲಿ ಕಳೆದುಕೊಂಡಿರೋ ಅಲ್ಲಿಯೇ ಪಡೆಯುವ ಪ್ರಯತ್ನ ನಡೆಯುವುದು. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು. ಜಾಣ್ಮೆಯ ವ್ಯವಹಾರವನ್ನು ಇಂದು ಮಾಡಬೇಕಾದೀತು. ವಿವಾಹದ ಬಗ್ಗೆ ನಾನಾ ಗೊಂದಲ ಕಾಡಬಹುದು. ಪಾಪಪ್ರಜ್ಞೆಯು ನಿಮ್ಮನ್ನು ಖಿನ್ನವಾಗಿಸಬಹುದು. ಸಕಾರಾತ್ಮಕ ಆಲೋಚನೆಯನ್ನು ಪ್ರಯತ್ನಪೂರ್ವಕವಾಗಿ ಮಾಡುವಿರಿ.

ವೃಶ್ಚಿಕ ರಾಶಿ:

ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ವ್ಯಾಪಾರದ ಹೊಸ ಅನುಭವವು ನಿಮಗೆ ಅಚ್ಚರಿಯಾದೀತು. ದೈವದ ಬಗ್ಗೆ ನಿಮಗೆ ಅಪನಂಬಿಕೆ ಬರಬಹುದು. ನಿಮ್ಮ ತಿಳಿವಳಿಕಯೇ ಉನ್ನತ ಸ್ಥಾನಕ್ಕೆ ಏರುವಂತೆ ಮಾಡುವುದು. ಮಕ್ಕಳ ಹಠಸ್ವಭಾವವು ಇಮಗೆ ಇಷ್ಟವಾಗದು. ಇಂದು ಆಡಂಬರಕ್ಕೆ ತೋರ್ಪಡಿಕೆಗೆ ಹೆಚ್ಚು ಒತ್ತು ನೀಡುವಿರಿ. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು.

ಧನು ರಾಶಿ:

ಅಶುಭ ಸೂಚನೆಗಳನ್ನು ಗಮನಿಸಿ ಕೊಂಡು ಕಾರ್ಯಪ್ರವೃತ್ತರಾಗಿ. ಭೂಮಿಯ ಲಾಭಕ್ಕಾಗಿ ಓಡಾಟವನ್ನು ಮಾಡಬೇಕಾದೀತು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿವಸವೂ ಆಗಬಹುದು. ವಿದೇಶದ ವ್ಯವಹಾರವು ನಿಮಗೆ ಸರಿಯಾಗಿ ಆಗಿಬರದು. ಸಾಹಿತ್ಯಾಸಕ್ತರು ತಮ್ಮ ಬಳಗದ ಜೊತೆ ಹೆಚ್ಚು ಸಮಯ ಇರುವರು. ಎಲ್ಲರೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡಲಿದ್ದು ನೀವು ಹತಾಶೆಯ ಭಾವ ಜಾಗೃತವಾಗಿ ಖಿನ್ನತೆಗೂ ಹೋಗಬಹುದು.

ಮಕರ ರಾಶಿ:

ಆರ್ಥಿಕ ವಹಿವಾಟಿನಲ್ಲಿ ಎಚ್ಚರಿಕೆ ಲಕ್ಷ್ಯವು ಹೆಚ್ಚಿರಲಿ. ನಿಮ್ಮ ಯೋಜನೆಗಳನ್ನು ಮಹಿಳೆಯರು ವಿರೋಧಿಸುವರು. ಕುಟುಂಬದ ಸಮಸ್ಯೆಗಳ ಪರಿಹಾರಕ್ಕೆ ನಿಮ್ಮ ಸಲಹೆಯು ಬೇಕಾಗುವುದು. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ. ನಿಮ್ಮ ವೃತ್ತಿಯ ಕುರಿತು ಯಾರಾದರೂ ಕೇಳಿಯಾರು.

ಕುಂಭ ರಾಶಿ:

ಯಾರ ಮೇಲೂ ಸಂದೇಹವನ್ನು ಇಟ್ಟುಕೊಳ್ಳುವುದು ಬೇಡ. ದುರಭ್ಯಾಸವನ್ನು ತಡೆಯಲಾಗದೇ ದುಃಖವಾಗಬಹುದು. ವ್ಯಾಪಾರವನ್ನು ಮಾಡುವಾಗ ಜಾಗರೂಕತೆ ಇರಲಿ. ಮನೆಯ ಜವಾಬ್ದಾರಿಯು ನಿಮಗೆ ಅನಿರೀಕ್ಷಿತವಾಗಿ ಬರಬಹುದು. ಗ್ರಾಹಕರಿಂದ ಮೋಸ ಹೋಗಬೇಕಾದೀತು. ಯಾರನ್ನಾದರೂ ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮಗೇ ನೆರವು ಬೇಕಾಗಿದ್ದರೂ ಇನ್ನೊಬ್ಬರ ಸಹಾಯಕ್ಕೆ ಹೋಗುವಿರಿ. ನಿಮ್ಮ ವಿರೋಧಿಗಳ ಸಂಖ್ಯೆ ಕಡಿಮೆಯಾಗುವುದು.

ಮೀನ ರಾಶಿ:

ಅಪರಿಚಿತರಿಂದ ಬೆಂಬಲವು ಸಿಗಲಿದೆ. ಕುಟುಂಬಕ್ಕೆ ನೀವು ಹಾಕಿದ ಶ್ರಮ ಫಲಿಸುವುದು. ವಿದ್ಯಾಭ್ಯಾಸದಲ್ಲಿ ಶ್ರದ್ಧೆಯು ಹೆಚ್ಚು ಬೇಕಾಗುವುದು. ನಿರ್ಮಾಣ ಕಾರ್ಯದ ಅಗತ್ಯವನ್ನು ನೀವು ಅನುಭವಿಸುವಿರಿ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಮನೆಯ ಬಗ್ಗೆ ಚಿಂತಿಸಬೇಕಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧ್ರುವ, ಕರಣ : ಗರಜ, ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 26 pm, ಇಂದಿನ ಶುಭಾಶುಭ ಕಾಲ : ರಾಹು 14:06 – 15:13, ಯಮಗಂಡ ಕಾಲ 06:50 – 08:17 ಗುಳಿಕ ಕಾಲ 09:45 – 11:12

-ಲೋಹಿತ ಹೆಬ್ಬಾರ್ – 8762924271 (what’s app only)