
ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು.
ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯಿಂದ ಮನಸ್ಸಿಗೆ ಕಿರಿಕಿರಿ. ಯಾರ ಬಳಿಯೋ ಹಣವನ್ನು ಹೊಂದಿಸಿ ಮಿತ್ರರಿಗೆ ಕೊಡುವಿರಿ. ನಿಮ್ಮ ಬಣ್ಣದ ಮಾತುಗಳು ಕೆಲವು ಅವಧಿಗೆ ಮಾತ್ರ ಸೀಮಿತ. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.
ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿಕೊಳ್ಳಿ. ನಿಮಗೆ ಬೇಕಾದ ಹಣವು ಸರಿಯಾದ ಸಮಯಕ್ಕೆ ಸಿಗದೆ ಆಂತಕವಾಗುವುದು. ನಿಮ್ಮ ಪಾವಿತ್ರ್ಯಯನ್ನು ಉಳಿಸಿಕೊಳ್ಳಲಾಹದು. ಅಪರಿಚಿತರು ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವರು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ನಿಮಗೆ ಯಾರ ಬೆಂಬಲದಿದ್ದರೂ ಕಾರ್ಯವನ್ನು ಮಾಡುವವರು ನೀವೇ. ಬರಬೇಕಾದ ಪೂರ್ಣವಾಗಿ ಬಾರದು.
ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಿಂದ ಇರುವಿರಿ. ನಿಮ್ಮ ಬಗ್ಗೆ ನಿಮಗೇ ಪೂರ್ಣ ಪ್ರಮಾಣದ ನಂಬಿಕೆ ಸಾಲದು. ನೌಕರರಿಂದ ಕೆಟ್ಟ ಹೆಸರು ಬರಬಹುದು. ಹೂಡಿಕೆಯನ್ನು ಮಾಡಿ ಒತ್ತಡವನ್ನು ಅನುಭವಿಸಬೇಕಾಗುವುದು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಕೃತಜ್ಞೆಯನ್ನು ಅರ್ಪಿಸುವ ಮನೋಭಾವವಿರದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆ ಕಾಣಿಸುವುದು.
ಅಧ್ಯಾತ್ಮದಿಂದ ಏನೋ ಕಲ್ಪನೆಗಳನ್ನು ಮಾಡಿಕೊಳ್ಳುವಿರಿ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು.
ಮನೆಯ ವಾತಾವರಣದಿಂದ ನಿಮ್ಮ ವೃತ್ತಿಯೂ ಸರಿಯಾಗಿರದು. ವ್ಯಾಪರದಿಂದ ಆದ ಲಾಭವು ನಿಮಗೆ ಇನ್ನಷ್ಟು ಉತ್ಸಾಹವನ್ನು ವರ್ಧಿಸುವುದು. ಸಹೋದರಿಯ ವಿವಾಹದ ಜವಾಬ್ದಾರಿಯು ಇರಲಿದೆ. ನಿಮ್ಮ ವ್ರತಕ್ಕೆ ಭಂಗ ಬರುವ ಸಾಧ್ಯತೆ ಇದೆ. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು. ಪರರಿಗೆ ನೋವಾಗದಂತೆ ಸ್ಪಂದಿಸುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ.
ಹಳೆಯ ಸಂಬಂಧವು ಮತ್ತೆ ಚಿಗುರಬಹುದು. ಆಕಸ್ಮಿಕವಾಗಿ ಶುಭ ಸಮಾಚಾರವು ಬರಬಹುದು ಎಂಬ ನಿರೀಕ್ಷೆಯು ಸುಳ್ಳಾಗುವುದು. ಏನು ಬೇಕಾದರೂ ಮಾಡಬಹುದು, ಆದರೆ ಏನೂ ಆಗದು. ನಿಮ್ಮ ಮಾತುಗಳು ಖಾರವಾಗುವುದು. ಕೋಪಕ್ಕೆ ಸರಿಯಾದ ಕಾರಣವಿರಲಿ. ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಕಾಣಿಸುವುದು. ನಿಮ್ಮ ಜವಾಬ್ದಾರಿಯ ಕಾರ್ಯಕ್ಕೆ ಕೆಲವು ಅಡೆತಡೆಗಳು ಬರಬಹುದು.
ಯಾವುದೇ ನಿರೀಕ್ಷೆಯನ್ನು ಇಟ್ಟುಕೊಳ್ಳದೇ ಕರ್ತವ್ಯಪರರಾಗಿ ಕಾರ್ಯವನ್ನು ಮಾಡಿ. ಅನಿರೀಕ್ಷಿತ ಧನಾಗಮನವು ನಿಮ್ಮ ಕಾರ್ಯಗಳಿಗೆ ಸರಿಯಾಗಿ ದೊರೆತಂತೆ ಆಗುವುದು. ಈ ದಿನಗಳಲ್ಲಿ ವ್ಯವಹಾರದಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲದಿದ್ದರೆ, ತಾಳ್ಮೆಯಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಅಪರಿಚಿತ ಕರೆ ಮನಸ್ಸು ಹಾಳಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ.
ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ. ಸಿಹಿ ಎಷ್ಟೇ ಇಷ್ಟವಾದರೂ ಮಿತಿಯಲ್ಲಿ ಸೇವಿಸಿದರೆ ಆಪತ್ತಿಲ್ಲ. ನಿಮ್ಮ ಆಸ್ತಿಗೆ ಸಂಬಂಧಿಸಿದ ಕಾರ್ಯಗಳಿಗೆ ಹೆಚ್ಚು ಓಡಾಟವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬಂದರೂ ಅದನ್ನು ನಗಣ್ಯ ಮಾಡುವಿರಿ. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ನಿಮ್ಮ ಪ್ರತಿಭೆಯನ್ನು ತೋರಿಸಲು ಸಂಕೋಚವಾಗುವುದು. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ.
ನೀವು ಯಾವುದನ್ನೂ ಗುಟ್ಟಾಗಿ ಇಡಲಾರಿರಿ. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ನೀವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಖರ್ಚನ್ನು ನಿಮ್ಮ ಯೋಜನೆಯು ತೆಗೆದುಕೊಂಡಿದ್ದು ನಿಮಗೆ ಚಿಂತೆಯಾಗಬಹುದು. ಯಾವುದೋ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ. ಕರಕುಶಲ ವಸ್ತುಗಳ ಮಾರಾಟವನ್ನು ನೀವು ಮಾಡಲು ಉತ್ಸಾಹದಿಂದ ಇರುವಿರಿ. ಕಛೇರಿಯ ಕೆಲಸದಲ್ಲಿ ಮೇಲಧಿಕಾರಿಗಳಿಂದ ಅಕ್ಷೇಪವು ಬರಬಹುದು.
ಸೌಂದರ್ಯದಿಂದ ಸ್ತ್ರೀಯರು ಆಕರ್ಷಕವಾಗಿ ಕಾಣುವಿರಿ. ಸಣ್ಣ ವ್ಯವಹಾರಗಳಿಂದ ನೀವು ಹೆಚ್ಚಿನ ಲಾಭವನ್ನು ಪಡೆಯುವಿರಿ. ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ಎಂತಹ ಕಷ್ಟದಲ್ಲಿಯೂ ನೀವು ನಿಮ್ಮವರನ್ನು ಬಿಟ್ಟುಕೊಡಲಾರಿರಿ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮಲ್ಲಿ ಯಾರೂ ಸಾಧಿಸದಿರುವ ಹಾಗೂ ತಾನು ಸಾಧಿಸಿದೆನೆಂಬ ತೃಪ್ತಿ.
ಹೊಸ ಆರ್ಥಿಕ ವ್ಯವಹಾರಕ್ಕೆ ಮೊದಲು ಕಾನೂನಿನ ಜ್ಞಾನ ಅಗತ್ಯ. ವ್ಯಾಪಾರವನ್ನು ನೀವು ವಿಸ್ತಾರ ಮಾಡಿಕೊಳ್ಳುವ ಯೋಜನೆಯನ್ನು ಹೊಂದುವಿರಿ. ಪ್ರಭಾವೀ ವ್ಯಕ್ತಿಗಳ ಬಗ್ಗೆ ನಿಮಗೆ ಮುಜುಗರವಾಗಬಹುದು. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು. ದಾಂಪತ್ಯದಲ್ಲಿ ನಂಬಿಕೆ ಹೆಚ್ಚಾಗುವುದು. ಆದಾಯದ ಮೂಲದಲ್ಲಿ ಬದಲಾವಣೆಯಾಗಲಿದೆ. ಕೆಲವನ್ನು ನೀವು ಬೇಕೆಂದೇ ಬಿಟ್ಟುಕೊಳ್ಳುವಿರಿ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ವಜ್ರ, ಕರಣ : ತೈತಿಲ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 27 pm, ಇಂದಿನ ಶುಭಾಶುಭ ಕಾಲ : ರಾಹು 17:11 – 18:28, ಯಮಗಂಡ ಕಾಲ 12:39 – 14:06, ಗುಳಿಕ ಕಾಲ 15:33 – 17:01
-ಲೋಹಿತ ಹೆಬ್ಬಾರ್ – 8762924271 (what’s app only)