Horoscope 20 Dec: ಯಾವ ರಾಶಿಗೆ ಏನು ಫಲ? ಯಾವ ರಾಶಿಯವರಿಗೆ ಅದೃಷ್ಟ?

| Updated By: ರಮೇಶ್ ಬಿ. ಜವಳಗೇರಾ

Updated on: Dec 20, 2023 | 1:22 AM

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎಂಬುದು ಇಲ್ಲಿದೆ.

Horoscope 20 Dec: ಯಾವ ರಾಶಿಗೆ ಏನು ಫಲ? ಯಾವ ರಾಶಿಯವರಿಗೆ ಅದೃಷ್ಟ?
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (2023 ಡಿಸೆಂಬರ್​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಸಿದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:30 ರಿಂದ 01:54 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:17 ರಿಂದ 09:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:06 ರಿಂದ 12:30ರ ವರೆಗೆ.

ಮೇಷ ರಾಶಿ :ಉತ್ತಮ ವ್ಯಕ್ತಿಗಳನ್ನು ಸಂಪಾದಿಸಲು ನೀವು ಸೋಲುವಿರಿ. ಆದಾಯದ ಕಡೆಗೆ ವಿಶೇಷಗಮನವು ಇರಲಿದೆ. ನಿಮ್ಮಲ್ಲಿರುವ ಒಳ್ಳೆಯದನ್ನು ನಿಜವಾಗಿಯೂ ಪ್ರಶಂಸಿಸಲು ನಿಮ್ಮಿಬ್ಬರಿಗೂ ಸ್ವಲ್ಪ ಅಂತರದ ಅಗತ್ಯವಿದೆ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಇತರರ ಧಾರ್ಮಿಕ ನಂಬಿಕೆಯನ್ನು ನೀವು ಘಾಸಿಮಾಡುವಿರಿ. ಅನಂತರದ ಹತಾಶೆಯಿಂದ ಕಷ್ಟವಾದೀತು. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ನೀವು ಸ್ವತಂತ್ರವಾಗಿದ್ದರೂ ಬೆರೆಯಲು ಮನಸ್ಸಾಗದು. ಭೂಮಿಯ ವ್ಯವಹಾರದಿಂದ ಲಾಭವು ಕಡಿಮೆ ಇರಲಿದೆ. ನಿಮ್ಮದಾದ ಸ್ವಂತ ನಿಲುವಿನಲ್ಲಿ ಜೀವಿಸುವುದನ್ನು ಕಲಿಯಬೇಕಿದೆ.

ವೃಷಭ ರಾಶಿ : ಖಾಲಿಯಾಗಿ ಇರುವ ಬದಲು ಏನನ್ನಾದರೂ ಮಾಡಿ. ಭವಿಷ್ಯಕ್ಕೆ ಉಪಯೋಗವಾಗಬಹುದು. ಸಂಬಂಧಗಳಲ್ಲಿ ಒಡಕು ಬರಬಹುದು. ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಇನ್ನೊಬ್ಬರ ವಸ್ತುವನ್ನು ನೀವು ಇಟ್ಟುಕೊಳ್ಳಲಿದ್ದೀರಿ. ವಿದೇಶದಲ್ಲಿ ಇರುವವರಿಗೆ ಆರೋಗ್ಯವು ಕೆಡಬಹುದು. ವ್ಯಾಪಾರಸ್ಥರು ಲಾಭವನ್ನು ಗಳಿಸುವತ್ತ ಯೋಜನೆ ರೂಪಿಸಿಕೊಳ್ಳುವುದು. ಬಂಧುಗಳ ಕಿರಿಕಿರಿಯನ್ನು ಸಹಿಸುವುದು ನಿಮಗೆ ಕಷ್ಟವಾದೀತು. ಮನಸ್ಸಿಗೆ ಭಾರವಾದ ವಿಚಾರವನ್ನು ನೀವು ಹೇಗಾದರೂ ಮಾಡಿ ತಲೆಯಿಂದ ತೆಗೆಯಿರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ನಿಮಗೆ ಬರುವ ಆಸ್ತಿಯಲ್ಲಿ ಕಿರಿಕಿರಿ ಮಾಡುವಿರಿ.

ಮಿಥುನ ರಾಶಿ :ಸಂಗಾತಿಯ ಜೊತೆ ಕಾಲ ಕಳೆಯಲು ಹವಣಿಸುವಿರಿ. ಚಿತ್ತಚಾಂಚಲ್ಯವು ಕಾರ್ಯದ ಗತಿಯನ್ನು ತಗ್ಗಿಸೀತು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ಜನರ ಜೊತೆ ಮಾತನಾಡುವಾಗ ನಿಮ್ಮ ಮಾತುಗಳು ಸ್ಪಷ್ಟವಾಗಿ ಇರಲಿ. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶರಾಗಬೇಕಾಗುವುದು. ನಿಮ್ಮ ಮನಸ್ಸಿಗೆ ಬಾರದೇ ಇರುವ ಯಾವುದನ್ನೂ ನೀವು ಒಪ್ಪಿಕೊಳ್ಳಲಾರಿರಿ. ವಿದ್ಯಾರ್ಥಿಗಳಿಗೆ ಅಧ್ಯಯನದ ವಿಚಾರದಲ್ಲಿ ಏಕಾಗ್ರತೆಯ ಕೊರತೆ ಇರಲಿದ್ದು ಧ್ಯಾನ, ಯೋಗಾಭ್ಯಾಸವನ್ನು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು ವಿಚಾರಗಳನ್ನು ನಿರ್ಲಕ್ಷ್ಯಿಸದಿದ್ದರೆ ದೊಡ್ಡದಾಗಬಹುದು. ಆಪ್ತರಿಂದ ಸಲಹೆಯನ್ನು ಕೇಳಲು ನಿಮಗೆ ಮುಜುಗರವಾಗಬಹುದು.

ಕರ್ಕ ರಾಶಿ :ಮೇಲಧಿಕಾರಿಗಳಿಗೆ ನೀವು ವರದಿಯನ್ನು ನೀಡಬೇಕಾಗುವುದು. ಹಳೆಯದನ್ನು ನೀವು ನೆನೆದು ಸಂಕಟಪಡುವಿರಿ. ವಿನಾಕಾರಣ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ಕೃಷಿಯಲ್ಲಿ ಆಸಕ್ತಿ ಉಂಟಾಗಬಹುದು. ರಮಣೀಯ ಸ್ಥಳಕ್ಕೆ ಸಂಗಾತಿಯ ಜೊತೆ ಹೋಗಲಿದ್ದೀರಿ. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು. ಇಂದಿನ ಕನಸು ನಿಮಗೆ ಭೀತಿಯನ್ನು ತಂದೀತು. ನಿಮ್ಮ ನೋವನ್ನು ಕೇಳಲು ಯಾರೂ ಇಲ್ಲವೆಂದು ಬೇಸರವಾಗಬಹುದು. ಕೋಪದ ವಿಚಾರದಲ್ಲಿ ನೀವು ಬದಲಾಗಬೇಕಾದ ಅವಶ್ಯಕತೆ ಇರಲಿದೆ. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ. ಅಪರೂಪದ ಆಹಾರದಿಂದ ನಿಮಗೆ ಆರೋಗ್ಯವು ಕೆಡಬಹುದು. ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯವನ್ನು ಕಳೆದು ಬನ್ನಿ.

ಸಿಂಹ ರಾಶಿ :ಪರರ ಗುಣದಲ್ಲಿ ಅಸೂಯೆ ಇರುವುದು. ಸಂಗಾತಿಯ ಪ್ರೀತಿಗೆ ನೀವು ಸೋಲಬಹುದು. ಎಷ್ಟೋದಿನಗಳಿಂದ ಬಯಸಿದ್ದ ವಸ್ತುವನ್ನು ನೀವು ಅನಾಯಾಸವಾಗಿ ಯಾರಿಂದಲೋ ಪಡೆಯುವುರಿ. ನಿಮ್ಮ ಬಗ್ಗೆ ಇರುವ ಕಾಳಜಿಗೆ ನೀವು ಮನಸೋಲುವಿರಿ. ಮನೆಯ ಕೆಲಸಲ್ಲಿ ಸಮಯವು ಹೋಗಿದ್ದೇ ಗೊತ್ತಾಗದು. ಇಂದು ನೀವು ಹೆಚ್ಚು ಉತ್ಸಾಹ ಹಾಗೂ ನಗುಮುಖದಲ್ಲಿ ಇರುವುದು ಎಲ್ಲರಿಗೂ ಗೊತ್ತಾಗಲಿದೆ. ನಿಮ್ಮ ಹೊಸ ಸುದ್ದಿಯು ಎಲ್ಲರಿಗೂ ಅಚ್ಚರಿ ಮೂಡಿಸುವುದು. ಕುಟುಂಬದಿಂದ ದೂರವಿದ್ದರೂ ಮಾತುಕತೆಗಳ ಮೂಲಕ ಹತ್ತಿರವಾಗುವಿರಿ. ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಓಡುತ್ತಿದ್ದು ಅದನ್ನು ಕಾರ್ಯರೂಪಕ್ಕೆ ತರಲು ನೋಡುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು. ನಿಮ್ಮ ಹೆಸರನ್ನು ಹೇಳಿ ಯಾರಾದರೂ ವಂಚಿಸಿಯಾರು.

ಕನ್ಯಾ ರಾಶಿ :ವ್ಯಾಪಾರದ ವಿಚಾರದಲ್ಲಿ ಮನೆಯವರ ಜೊತೆ ಜಗಳ ಮಾಡಿಕೊಳ್ಳುವಿರಿ. ನಿಮಗೆ ದ್ವಂದ್ವಗಳು ಒಂದು ಸರಿಯಾದ ನಿರ್ಧಾರಕ್ಕೆ ಬರಲು ಅನುಕೂಲ ಮಾಡಿಕೊಡುವುದಿಲ್ಲ. ನಿಮಗೆ ಸಿಕ್ಕ ಜವಾಬ್ದಾರಿಯನ್ನು ತಪ್ಪಿಸಿಕೊಳ್ಳಲು ಮಾರ್ಗವನ್ನು ಹುಡುಕುವಿರಿ. ಇಂದು ನೀವು ನಂಬಿದ ಅದೃಷ್ಟವು ಕೈ ಕೊಡಬಹುದು. ನಿಮಗೆ ಸಿಗಬೇಕಾದ ಹಣವು ಸಿಗದೇ ಇರುವುದರಿಂದ ಬೇಸರ ಬೇಡ. ಸ್ತ್ರೀಯರ ಬಗ್ಗೆ ನಿಮಗೆ ಅನುಕಂಪವಿದ್ದರೂ ಅದನ್ನು ಹೇಳಿಕೊಳ್ಳಲಾಗದು. ಅಪಹಾಸ್ಯಕ್ಕೆ ಸಿಲುಕುವಿರಿ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸಿ ಸುಮ್ಮನಿರುವುದು ಉತ್ತಮ. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕತ್ತಲೆಯಲ್ಲಿ ಗುದ್ದಾಟ ಮಾಡಿ ಆಯಾಸ ಮಾಡಿಕೊಳ್ಳುವಿರಿ. ಕಳೆದುಕೊಂಡ ವಿಶ್ವಾಸವನ್ನು ಮತ್ತೆ ಕೂಡಿಸಲು ಪ್ರಯತ್ನಿಸುವಿರಿ. ಅದು ಕನ್ನಡಿಯ ಗಾಜಿನಂತೆ. ಎಷ್ಟೇ ಕೂಡಿಸಿದರೂ ಬಿರುಕು ಎದ್ದು ತೋರುವುದು.

ತುಲಾ ರಾಶಿ : ನಿಮ್ಮ ಹೊಂದಿಕೊಳ್ಳುವ ಗುಣವನ್ನು ಎಲ್ಲರೂ ಶ್ಲಾಘಿಸುವರು. ಕೃತಘ್ನರಾಗಿ ಮೆರೆಯುವುದು ಬೇಡ. ಜಾರಿ ಬೀಳಲು ಹೆಚ್ಚು ಸಮಯ ಬೇಡ. ಅಂಗಳವನ್ನೇ ಹಾರಲಾರದವನು ಆಕಾಶವನ್ನು ಹಾರಿಯಾನು ಎಂದು ನಿಮ್ಮನ್ನು ಲೇವಡಿ ಮಾಡಬಹುದು. ಇದು ನಿಮಗೆ ಸಾಧನೆಗೆ ಪ್ರೇರಣೆಯೂ ಆಗಬಹುದು. ಹತ್ತಾರೂ ಆಲೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮ ದಿನಚರಿಯನ್ನು ಹಾಳು ಮಾಡಬಹುದು. ವಿದ್ಯಾರ್ಥಿಗಳ ಆಸೆಯನ್ನು ಮನೆಯವರು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿದ್ದು ಇಂದಿನ ಕಾರ್ಯವನ್ನು ಹಾಳುಮಡುವುದು. ಸ್ತ್ರೀಯರು ಕೆಲವರ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು. ಪ್ರೀತಿಯು ನಿಮಗಾಗದವರ ಮೂಲಕ ಎಲ್ಲರಿಗೂ ತಿಳಿಯುವುದು. ಇದರಿಂದ ನಿಮಗೆ ಬಹಳ ಮುಜುಗರವಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳದೇ ವರ್ತಿಸಿ.

ವೃಶ್ಚಿಕ ರಾಶಿ :ಕಾರ್ಯಕ್ಕೆ ಹೊರಡುವ ಮೊದಲೇ ತನ್ನ್ನಿಂದ ಏನೂ ಆಗದು ಎಂಬ ಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಏಕಕಾಲದಲ್ಲಿ ಅನೇಕ ವಿಚಾರಗಳ ಚಿಂತನೆಯನ್ನು ನಡೆಸುವಿರಿ. ಕಛೇರಿಯಲ್ಲಿ ನಿಮ್ಮದಾದ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳುವಿರಿ. ಕೆಲವು ಸಂದರ್ಭಗಳು ನಿಮ್ಮ ಪರೀಕ್ಷೆಗಾಗಿ ಬರಲಿದ್ದು ಅದನ್ನು ಎದುರಿಸುವುದು ನಿಮ್ಮ ಮೇಲಿದೆ. ಮೂರ್ಖರಂತೆ ವರ್ತಿಸಿ ಎಲ್ಲರ ನಡುವೆ ನಗೆಪಾಟಲಾಗುವಿರಿ. ಸಂಗಾತಿಯ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಎಷ್ಟೇ ಸೌಕರ್ಯವಿದ್ದರೂ ಇನ್ನಷ್ಟು ಬೇಕೆನಿಸಬಹುದು. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ಕಠೋರ ಮಾತುಗಳು ನಿಮ್ಮರಿಗೆ ಇಷ್ಟವಾಗದು. ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು.

ಧನು ರಾಶಿ :ಈ ದಿನವನ್ನು ಬಹಳ ಆನಂದದಿಂದ ಕಳೆಯುವಿರಿ. ಏಕೆಂದರೆ ನೀವು ಇಂದು ಸಕಾರಾತ್ಮಕ ಚಿಂತನೆಯಲ್ಲಿ ಇರುವಿರಿ. ನಿಮ್ಮ ಎಲ್ಲಾ ಶ್ರಮದಾಯಕ ಯೋಜನೆ ಮತ್ತು ಸಂಘಟನೆಯು ಅಂತಿಮವಾಗಿ ಫಲವನ್ನು ನೀಡಲಿದೆ. ವಿಶೇಷವಾಗಿ ಇಂದು ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನಿಗದಿತ ಸಮಯಕ್ಕಿಂತ ಮೊದಲೇ ಸಾಲವನ್ನು ತೀರಿಸಿದ್ದಕ್ಕೆ ನಿಮ್ಮಲ್ಲಿ ಅಹಂಕಾರವು ಜಾಗರೂಕವಾಗಬಹುದು. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎನ್ನುವಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗಲಿದ್ದು ನಿಮಗೆ ಬೇಸರ ತರಿಸೀತು. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ಎಲ್ಲದಕ್ಕೂ ಮುನ್ನುಗಬೇಕೆನ್ನುವ ನಿಮ್ಮ ಯೋಚನೆ ಬದಲಾಗುವುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆಯಾಗಲಿದೆ.

ಮಕರ ರಾಶಿ : ಕಿಟಕಿ ಮುಚ್ಚಿದೆ ಎಂದ ಮಾತ್ರಕ್ಕೆ ದ್ವಾರವೂ ಮುಚ್ಚಿರುತ್ತದೆ ಎಂದು ತಿಳಿದುಕೊಳ್ಳುವುದು ಮೂರ್ಖತನ. ನೀವು ಇಂದು ಸಂಗಾತಿಯ ಜೊತೆ ವಾಸ್ತವ ಬದುಕಿನ ಬಗ್ಗೆ ಚಿಂತನೆಯನ್ನು ನಡೆಸುವಿರಿ. ಉದ್ವೋಗದಿಂದಾಗಿ ಇಂದಿನ ಉತ್ತಮ ಲಾಭದಾಯಕ ವ್ಯಾಪಾರವನ್ನು ಕಳೆದುಕೊಳ್ಳುವಿರಿ. ಗೃಹನಿರ್ಮಾಣವು ನಿಮಗೆ ಅನಿವಾರ್ಯವಾದೀತು. ಬಾಡಿಗೆ ಮನೆಯ ಕಿರಿಕಿರಿಯು ನಿಮಗೆ ಸಾಕಾಗಿ ಹೋಗುವುದು. ಅಧಿಕಾರಿಗಳಿಂದ ನಿಮ್ಮ ಆರ್ಥಿಕತೆಯು ಪರಿಶೀಲನೆಗೊಳ್ಳುವುದು. ದುಡಿಮೆಯ ಸ್ವಲ್ಪ ಭಾಗವನ್ನಾದರೂ ಇತರಿಗೆ ಕೊಡಬೇಕು ಎಂದು ಅನ್ನಿಸಬಹುದು. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ಭೋಜನವನ್ನು ಸಮಯ ಮೀರಿ ಮಾಡುವುದು ಬೇಡ. ನಿಮ್ಮ ಬದಲಾವಣೆಯು ಪೂರ್ಣ ಸತ್ಯವಾಗಿರದು.

ಕುಂಭ ರಾಶಿ : ನೀವು ಯಾರನ್ನಾದರೂ ಅಳೆಯುವ ಮೊದಲು ಅವರೇ ನಿಮ್ಮ ಬಗ್ಗೆ ಎಲ್ಲವನ್ನೂ ಹೇಳಬಹುದು. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು. ಅದಕ್ಕಾಗಿ ಅವರ ಜೊತೆ ಮನಸೋ ಇಚ್ಛೆ ವರ್ತಿಸುವುದು ಬೇಡ. ಅವರಿಗೆ ತಮ್ಮಷ್ಟಕ್ಕೆ ನಿರ್ಧಾರ ಕೈಗೊಳ್ಳುವ ಅವಕಾಶ ನೀಡಿ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು. ನಿಮ್ಮ ಸುತ್ತಲೂ ನಡೆಯುವುದನ್ನು ಹತ್ತಿರದಿಂದ ಗಮನಿಸಿ, ನೀವು ನಿಮ್ಮನ್ನು ಸರಿಯಾಗಿ ಕಂಡುಕೊಳ್ಳಿ. ವೃತ್ತಿ ಜೀವನದಲ್ಲಿ ಗೌರವವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು.

ಮೀನ ರಾಶಿ : ನಿಜವಾದ ಸ್ನೇಹಿತ ನಿಮ್ಮ ಅಗತ್ಯದ ಸಮಯದಲ್ಲಿ ಜೊತೆಯಾಗುವರು. ಅಂತಹವರನ್ನು ಕಳೆದುಕೊಂಡು ಅನಂತರ ಸಂಕಟಪಡುವಿರಿ. ನೀವು ಇನ್ನೊಬ್ಬರ ಅಹಂಕಾರವನ್ನು ಹೆಚ್ಚಿಸಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ಸಂಗಾತಿಗೆ ಬೇಕಾದ ಸಹಕಾರವನ್ನು ಖುಷಿಯಿಂದ ಮಾಡುವಿರಿ. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು ಯೋರಿಸುತ್ತದೆ. ಸ್ವಂತ ಕಾರ್ಯದ ಕಾರಣ ಕಛೇರಿಗೆ ವಿರಾಮ ಹೇಳುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)