AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope 3rd February: ಇಂದು ಈ ರಾಶಿಯವರ ಕಾರ್ಯ ನಿರುಪಯುಕ್ತ ಎನಿಸುವುದು

ದಿನ ಭವಿಷ್ಯ:ಇಂದು ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ಮಂಗಳವಾರದ ರಾಶಿ ಭವಿಷ್ಯ. ಈ ದಿನ ಉದ್ವೇಗ, ಅಪರಿಚಿತರ ಕರೆಗಳು, ಆರ್ಥಿಕ ಬೇಡಿಕೆಗಳು ಮತ್ತು ಅಧಿಕಾರದ ಗೊಂದಲಗಳು ಎದುರಾಗಬಹುದು. ಯಂತ್ರ ಮಾರಾಟದಿಂದ ಲಾಭದ ಸಾಧ್ಯತೆಯೂ ಇದೆ. ಪ್ರತಿ ರಾಶಿಯವರು ತಮ್ಮ ಆರ್ಥಿಕ, ವೃತ್ತಿ, ಸಂಬಂಧ ಮತ್ತು ಆರೋಗ್ಯದ ಬಗ್ಗೆ ತಿಳಿಯಿರಿ. ನಿಮ್ಮ ದಿನವನ್ನು ಉತ್ತಮವಾಗಿ ಯೋಜಿಸಲು ಈ ಜ್ಯೋತಿಷ್ಯ ಮಾರ್ಗದರ್ಶನ ಸಹಕಾರಿಯಾಗಿದೆ.

Daily Horoscope 3rd February: ಇಂದು ಈ ರಾಶಿಯವರ ಕಾರ್ಯ ನಿರುಪಯುಕ್ತ ಎನಿಸುವುದು
ಸಾಂದರ್ಭಿಕ ಚಿತ್ರ Image Credit source: Tv9 kannada
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 03, 2026 | 1:26 AM

Share

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಉದ್ವೇಗ, ಅಪರಿಚಿತರ ಕರೆ, ಆರ್ಥಿಕ ಬೇಡಿಕೆ, ಪ್ರಚಾರದ ಆಸೆ, ಅಧಿಕಾರದ ಗೊಂದಲ, ಯಂತ್ರ ಮಾರಾಟದಿಂದ ಲಾಭ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಆಯುಷ್ಮಾನ್, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 23 pm, ಇಂದಿನ ಶುಭಾಶುಭ ಕಾಲ : ರಾಹು 15:31 – 16:57, ಯಮಗಂಡ ಕಾಲ 09:46 – 11:12, ಗುಳಿಕ ಕಾಲ 12:38 – 14:05

ಮೇಷ ರಾಶಿ :

ನಿಮಹೆ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ಪ್ರತ್ಯುತ್ತರ ನೀಡಲು ಯಾರು ಎದುರಿನವರು ಎಂದು ತಿಳಿಯಿರಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ. ಬೇಡದ ಕಡೆಗಳಲ್ಲಿ ಹಣವನ್ನು ವ್ಯಯಿಸುವಷ್ಟು ಒಳ್ಳೆಯ ಕಡೆ ಮಾಡಲಾರಿರಿ.

ವೃಷಭ ರಾಶಿ :

ನೀವು ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸುವುದು ಮತ್ತು ನೀವು ಹೂಡಿಕೆ ಮಾಡಿದರೆ ಸುರಕ್ಷತೆ ಬಗ್ಗೆ ಲಕ್ಷ್ಯವಿರಲಿ. ನಿಮಗೆ ಸಿಗುವ ಆಸ್ತಿಯ ಬಗ್ಗೆ ಕುತೂಹಲವಿರಲಿದೆ. ನೀವು ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗುವುದು. ಸಂಗಾತಿಯ ಜೊತೆ ವಾಗ್ವಾದ ಮಾಡುವಿರಿ.

ಮಿಥುನ ರಾಶಿ :

ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ನೀವು ಮಾಡಿದ ಕಠಿಣ ಪರಿಶ್ರಮ ಅಂತಿಮವಾಗಿ ಫಲ ನೀಡುತ್ತದೆ. ನಿಮ್ಮ ಹಣದ ಮೇಲೆ ನಿಗಾ ಇರಿಸಿ, ಯಾವುದೇ ಅಪಾಯಗಳನ್ನು ತೆಗೆದುಕೊಳ್ಳದಂತೆ ದೂರವಿರಿ. ಪ್ರೋತ್ಸಾಹವಿಲ್ಲದೇ ಏನನ್ನು ಮಾಡಲು ಮನಸ್ಸಾಗದು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು.

ಕರ್ಕಾಟಕ ರಾಶಿ :

ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹಪಡಬಹುದು. ಅವಕಾಶಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು.

ಸಿಂಹ ರಾಶಿ :

ಮುಕ್ತವಾಗಿ ಸಂವಹನ ಮಾಡಿ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಮಯ ತೆಗೆದುಕೊಳ್ಳಿ. ಇಂದು ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ.

ಕನ್ಯಾ ರಾಶಿ :

ಇಂದು ಹೆಚ್ಚಿದ ಭಾವನೆಗಳಿಂದ ನೀವು ನಿಮ್ಮವರ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಧೈರ್ಯವು ಎಂತಹ ನಕಾರಾತ್ಮಕ ಸಂದರ್ಭವನ್ನೂ ತಡೆದುನಿಲ್ಲಿಸಬಹುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ಕೆಲವರ ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು.

ತುಲಾ ರಾಶಿ :

ನೀವು ಏನೇ ಮಾಡಿದರೂ ಸಂಗಾತಿಯ ಪೂರ್ಣ ಬೆಂಬಲ ನಿಮಗೆ ಸಿಗುತ್ತದೆ. ಉಳಿದೆಲ್ಲವೂ ನಿಮ್ಮ ಪರವಾಗಿ ಇರುತ್ತದೆ. ಇಂದು ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರುವಿರಿ. ಇಂದು ನಿಮ್ಮ ಪ್ರೀತಿಯನ್ನು ಇತರರಿಗೆ ವ್ಯಕ್ತಪಡಿಸಲು ಸುಲಭವಾದ ಮಾರ್ಗ ಸಿಗಲಿದೆ. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ :

ಇಂದು ನೀವು ಬಂಧುಗಳ ಜೊತೆ ಸಮಯ ಕಳೆಯಬಹುದು. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಸುದ್ದಿಗಳನ್ನು ಪಡೆಯುತ್ತೀರಿ. ಇಂದಿನ ಕೆಲಸಗಳನ್ನು ಮುಂದೂಡುವು ಮನಸ್ಸಿನಿಂದ ಮಾಡುವುದು ಬೇಡ. ಯಾರನ್ನೂ ಅಂಧಾಭಿಮಾನದಿಂದ ನಂಬಬೇಡಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ಆಹಾರ ಅಭಾವವಾಗಬಹುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ಮನೆಯಲ್ಲಿ ಮಾತನಾಡಿ ಬಗೆಹರಿಸಿಕೊಳ್ಳುವಿರಿ.

ಧನು ರಾಶಿ :

ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ನೀವು ಪ್ರವಾಸಕ್ಕೆ ಹೋಗುವ ದಿನ ಇಂದು. ನಿಮ್ಮ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ನೀವು ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಬಹುದು. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು.

ಇದನ್ನೂ ಓದಿ: ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸುವ ಸೂರ್ಯನಿಂದ ಯಾವ ರಾಶಿಗಳ ಅನಿಷ್ಟ ದೂರ?

ಮಕರ ರಾಶಿ :

ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಮಾತನ್ನು ಕೇಳಲು ಬಯಸುವುದಿಲ್ಲ. ಉದ್ಯೋಗದಲ್ಲಿ ಇರುವವರು ಸವಾಲಿನ ಕೆಲಸಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌ ವೈದ್ಯರಿಗೆ ಉತ್ತಮ ಅವಕಾಶವು ಸಿಗಬಹುದು.

ಕುಂಭ ರಾಶಿ :

ಆದಾಯ ಮತ್ತು ಖರ್ಚಿನ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಬೇಕು. ನಿಮ್ಮ ಕುಟುಂಬದವರ ಆರೋಗ್ಯವನ್ನು ನೋಡಿಕೊಳ್ಳಬೇಕು. ಕೆಲಸದ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ‌ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುವರು. ನಿಮಗೆ ಆಪ್ತರಿಂದ ಬೆಂಬಲ ಸಿಗಲಿದೆ. ಪ್ರಯಾಣದಲ್ಲಿ ಬರುವ ತೊಂದರೆಯನ್ನು ದೂರಮಾಡಿಕೊಳ್ಳುವಿರಿ.

ಮೀನ ರಾಶಿ :

ಓದು ಮತ್ತು ಬರವಣಿಗೆಯಲ್ಲಿ ಸಮಯ ಕಳೆಯಿರಿ. ಆರೋಗ್ಯವು ಉತ್ತಮವಾಗಿರುತ್ತದೆ. ವ್ಯವಹಾರದ ಪರಿಸ್ಥಿತಿ ಬಲವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಷೇರು ಮಾರುಕಟ್ಟೆಯ ನಾಡಿಯನ್ನು ಅರಿತು ಹೂಡಿಕೆ ಮಾಡುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್