ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ
Daily Horoscope, 03 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಪ್ರತಿಪತ್ ತಿಥಿಯ ಶುಕ್ರವಾರದಂದು ಅನ್ಯರ ಮಾತಿನಿಂದ ಕಳವಳ, ಜೀವನದಲ್ಲಿ ಜುಗುಪ್ಸೆ, ಸ್ನೇಹದಲ್ಲಿ ವೈಷಮ್ಯ, ವಿವಾದ, ಒಪ್ಪಂದದಲ್ಲಿ ದೃಢತೆ ಈ ದಿನದ ವಿಶೇಷ.

ಮೇಷ ರಾಶಿ : ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ.
ವೃಷಭ ರಾಶಿ : ಇಂದು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಅಪನಂಬಿಕೆಗಳು ದೂರಾಗಬೇಕಿದೆ. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು. ಅನಪೇಕ್ಷಿತ ಸಹಕಾರದಿಂದ ಆರ್ಥಿಕ ಚಿಂತೆ. ಸ್ವತಃ ಉದ್ಯೋಗವನ್ನು ಮಾಡುವ ಆಲೋಚನೆಯು ಬರಬಹುದು. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಅಧಿಕ ಬೆಲೆ ಉತ್ತಮ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ.
ಮಿಥುನ ರಾಶಿ : ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ನಿಮ್ಮ ಪ್ರೀತಿಗೆ ಅಡ್ಡಿ ಆತಂಕಗಳು ಬರಬಹುದು. ಇಂದಿನ ಕಾರ್ಯವನ್ನು ಸರಿಯಾಗಿ ಯೋಜಿಸಿಕೊಂಡು. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ಯಶಸ್ಸಿನ ಗುಟ್ಟನ್ನು ಬಯಲುಮಾಡುಬಿರಿ. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿಯಾರು.
ಕರ್ಕಾಟಕ ರಾಶಿ : ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಸಂಗಾತಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಕೃಷಿಯು ಕಡೆಗೆ ಗಮನ ಹೆಚ್ಚಾಗಿ ನೀಡುವಿರಿ. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು.
ಸಿಂಹ ರಾಶಿ : ನಿಮಗೆ ಸಿಗುವ ಜನರ ಪ್ರೀತಿಗೆ ಪ್ರತಿಯಾಗಿ ಸಮಯವನ್ನಾದರೂ ಕೊಡಿ. ಮುಕ್ತವಾಗಿ ಸಂವಾದ ಮಾಡಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿ. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದು.
ಕನ್ಯಾ ರಾಶಿ : ಇಂದು ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಋಣಶೇಣವನ್ನು ಉಳಿಸಿಕೊಳ್ಳದೇ ತೀರಿಸಿಕೊಂಡು ಮುಂದಿನ ಯೋಜನೆಗೆ ಸಿದ್ಧತೆ ನಡೆಸುವಿರಿ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರಾಗಬಹುದು. ನಿಮಗೆ ಇನ್ನೊಬ್ಬರ ಬಗ್ಗೆಯೇ ಅಧಿಕ ಆಲೋಚನೆ ಇರುವುದು. ಅಪರಾಧಿ ಪ್ರಜ್ಞೆ ನಿಮ್ಮನ್ನು ಕಾಡುವುದು. ಕಾಲಾತ್ಮಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು.
ತುಲಾ ರಾಶಿ : ಇಂದು ದೀರ್ಘಕಾಲದ ನಿಮ್ಮ ಸಂಬಂಧಕ್ಕೆ ವಿರಾಮವು ಸಿಗಬಹುದು. ಪಡೆದುಕೊಳ್ಳಬೇಕಾದ ಸ್ಥಿರಾಸ್ತಿ ನಿಮಗೆ ಬರುವುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು.
ವೃಶ್ಚಿಕ ರಾಶಿ : ಕೆಲಸದಲ್ಲಿ ಹೊಸತನ ಬಹಳ ಮುಖ್ಯವಾಗುತ್ತದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮ್ಮ ಸಂಬಂಧಿಕರೊಂದಿಗೆ ಸಮಯ ಕಳೆಯಬಹುದು. ವಿದ್ಯಾರ್ಥಿಗಳ ಅಭ್ಯಾಸ ಉನ್ನತ ಅಧ್ಯಯನಕ್ಕೆ ಸಹಕಾರಿ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬೇಡ. ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು.
ಧನು ರಾಶಿ : ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ನಿಮ್ಮವರ ಮೇಲಿರುವ ಅನುಮಾನ ನಿವಾರಣೆ ಮಾಡಿಕೊಳ್ಳುವಿರಿ. ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕಾರ್ಯವನ್ನು ಮಾಡಲು ಬಿಡದು. ಸಹನೆ ನಿಮ್ಮ ಜೊತೆ ದಿನಪೂರ್ತಿ ಇರಲಿ. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು.
ಮಕರ ರಾಶಿ : ಯಾರಿಂದಲಾದರೂ ಹಣವನ್ನು ಎರವಲು ಪಡೆದ ಜನರಿಗೆ ಯಾವುದೇ ಪರಿಸ್ಥಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಬೇಕಾಗಬಹುದು. ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ದೂರವಾಣಿ ಕರೆಗಳಿಂದ ನಿಮಗೆ ತೊಂದರೆ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.
ಕುಂಭ ರಾಶಿ : ಇಂದು ಹೊಸ ಸಂಪರ್ಕದಿಂದ ಕಾರ್ಯ ಸಾಧನೆ. ವೃತ್ತಿಜೀವನದ ಕೌಶಲ್ಯಗಳನ್ನು ಹೆಚ್ಚಿಸಲು ಸಮಯವನ್ನು ಬಳಸಿಕೊಳ್ಳುವಿರಿ. ಹೂಡಿಕೆ ಮಾಡಲು ಹೊಸ ಮಾರ್ಗಗಳನ್ನು ತೆರೆಯಬಹುದು. ಹಾಸ್ಯಯುಕ್ತವಾದ ಮಾತಿನಿಂದ ಗೌರವವನ್ನು ಕಳೆದುಕೊಳ್ಳುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಜೊತೆಗಾರರು ಮಾಡುವರು.
ಮೀನ ರಾಶಿ : ಆರ್ಥಿಕತೆಯ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಬೇಕಾಗಬಹುದು. ಇಂದು ಬದಲಾವಣೆಯ ದಿನವಾಗಿದ್ದರೂ, ಆಶ್ಚರ್ಯವು ಕಾಣಿಸಿಕೊಳ್ಳಬಹುದು. ನಿಮ್ಮನ್ನು ಯಾರಾದರೂ ಆರ್ಥಿಕ ತೊಂದರೆಗೆ ಸಿಲುಕಿಸಬಹುದು. ಒಡೆದ ಬಾಂಧವ್ಯ ಮತ್ತೆ ಕೂಡಲಿದೆ. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ ಕಾಲವನ್ನು ಕಳೆಯುವಿರಿ. ಸ್ಥಿರಾಸ್ತಿಯನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇಡಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಚಿತ್ರಾ, ಯೋಗ : ಧ್ರುವ, ಕರಣ : ವಣಿಜ, ಸೂರ್ಯೋದಯ – 06 – 20 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:56 – 12:28, ಯಮಗಂಡ ಕಾಲ 15:32 – 17:04, ಗುಳಿಕ ಕಾಲ 07:52 – 09:24
-ಲೋಹಿತ ಹೆಬ್ಬಾರ್-8762924271 (what’s app only)
