AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಕೇವಲ ಮಾತಿನಿಂದ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುವರು

Daily Horoscope, 09 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಗುರುವಾರದಂದು ಪ್ರಯಾಣದಲ್ಲಿ ವ್ಯತ್ಯಾಸ, ಒತ್ತಡದಿಂದ ಅನಾರೋಗ್ಯ, ಭವಿಷ್ಯದ ಚಿಂತೆ, ಸಜ್ಜನರ ಸೇವೆ, ಆಪಾದನೆ ಇವೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಕೇವಲ ಮಾತಿನಿಂದ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುವರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 09, 2026 | 12:48 AM

Share

ಮೇಷ ರಾಶಿ:

ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಸಂಗಾತಿಯ ಪರೀಕ್ಷೆ ನಡೆಯುವುದು. ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ‌ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ.

ವೃಷಭ ರಾಶಿ:

ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಹಲವು ದಿನಗಳಿಂದ ಸೋಲಿನ ವಾರ್ತೆ ಕೇಳಿದ್ದ ನಿಮಗೆ ಗೆಲವಿನ ಸೂಚನೆ ಸಿಗಲಿದ್ದು ಉತ್ಸಾಹ ಬರಲಿದೆ. ನೀವು ಅಪರಿಚಿತರ ಸಂಪರ್ಕವನ್ನು ಹೆಚ್ಚು ಮಾಡುವಿರಿ. ಹೂಡಿಕೆಯಲ್ಲಿ ದೀರ್ಘಾವಧಿಯ ಯೋಜನೆಗಳು ಮಾಡಿಕೊಳ್ಳಿ. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು. ಯಾರದೋ ಸಂತೋಷಕ್ಕಾಗಿ ನೀವು ದುಡಿಯಬೇಕಾಗಬಹುದು.

ಮಿಥುನ ರಾಶಿ:

ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಎಲ್ಲವುದೂ ಅಂದುಕೊಂಡಂತೆ ಆಗದು. ಸಹೋದರರಿಂದ ಸಲಹೆ ಪಡೆದು ಮುನ್ನಡೆಯಿರಿ. ಗಾಳಿ ಸುದ್ದಿಗಳು ನಿಮ್ಮ ಮನಸ್ಸಿಗೆ ತೊಂದರೆ ಕೊಡುವುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಅನುಕೂಲ ಕಡಿಮೆ ಇರುವುದು. ನಿಮ್ಮ ಜವಾಬ್ದಾರಿಯನ್ನು ಇತರರು ಮಾಡಬೇಕಾಗಬಹುದು. ನಿಮಗೆ ಬೇಕಾದ ಆರ್ಥಿಕಬೆಂಬಲವನ್ನು ಯಾರೂ ಸೂಚಿಸದೇ ಇರಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ.

ಕರ್ಕಾಟಕ ರಾಶಿ:

ನಿಮ್ಮ ಸಾಹಿತ್ಯದ ಅಭಿರುಚಿ ಇಂದು ಪ್ರಸಿದ್ಧಿಗೆ ಬರುವುದು. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನವನ್ನು ಮಾಡಿ. ನಿಮ್ಮ ಇಷ್ಟದ ವಿಷಯಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತೀರಿ. ನಿಮ್ಮವರ ವಿಶ್ವಾಸವನ್ನು ನೀವು ಸುಲಭವಾಗಿ ಗೆಲ್ಲಲು ಸಾಧ್ಯವಾಗುತ್ತದೆ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌

ಸಿಂಹ ರಾಶಿ:

ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಕೈಗೆ ಬಂದ ಹಣ ಆಸ್ಪತ್ರೆಯ ಪಾಲಾಗಬಹುದು. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ಅಕಾರಣವಾಗಿ ಸಂತೋಷಪಡುವಿರಿ. ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು.

ಕನ್ಯಾ ರಾಶಿ:

ನಿಮ್ಮ ನೋವು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಹಳೆಯ ನೆನಪುಗಳು ನಿಮ್ಮನ್ನು ಘಾಸಿಮಾಡಬಹುದು. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡುವರು.

ತುಲಾ ರಾಶಿ:

ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ರಾತ್ರಿ ವೇಳೆ‌ಪ್ರಯಾಣ ಬೇಡ. ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ. ನೀವು ಹೆಚ್ಚು ಭೌತಿಕ ವಿಷಯಗಳ ಮೇಲೆ ಮನಸ್ಸನ್ನು ಕೇಂದ್ರೀಕರಿಸುವಿರಿ. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು.

ವೃಶ್ಚಿಕ ರಾಶಿ:

ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಪ್ರೇಯಸಿ ಜೊತೆ ಸುತ್ತಾಟ ಮಾಡುವಿರಿ. ಸಂಸ್ಥೆಯ ಪ್ರಮುಖರಿಗೆ ಒಳಗನವರಿಂದ ಆತಂಕ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ.

ಧನು ರಾಶಿ:

ನೀವು ವ್ಯಾಪಾರದ ಕಾರಣಕ್ಕೆ ಕೈಗೊಂಡ ಪ್ರಯಾಣವು ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಸಣ್ಣ ನೌಕರರಿಗೆ ಜೀವನದ ಮೇಲೆ ಉತ್ಸಾಹ ಆರಂಭವಾಗಲಿದೆ. ಕೂಡಲೇ ಬೇಕಾದ ಚಿಕಿತ್ಸೆಗೆ ಗಮನಕೊಡಿ. ರಾಜಕೀಯದಲ್ಲಿ ನಿಮಗೆ ಜನಬೆಂಬಲ ಹೆಚ್ಚಾಗಬಹುದು. ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರದ್ಧೆ ಹೆಚ್ಚಿರುವುದು. ಇನ್ನೊಬ್ಬರನ್ನು ಹಿಂದಿಕ್ಕಲು ಪ್ರಯತ್ನ ಪೂರ್ವಕವಾಗಿ ಕಾರ್ಯ ಮಾಡುವಿರಿ.

ಮಕರ ರಾಶಿ:

ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಇಂದು ಪುಣ್ಯಕಾರ್ಯದಿಂದ ಪ್ರಾಣಾಪಾಯ ತಪ್ಪಿರುವುದು. ಸಹೋದ್ಯೋಗಿಗಳ ಬಗ್ಗೆ ಪೂರ್ವಾಗ್ರಹವಿರುವುದು. ನೀವು ಸಂಬಂಧಿಕರ ಜೊತೆ ಸ್ವಲ್ಪ ಸಮಯ ಒಟ್ಟಿಗೆ ಕುಳಿತು ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಿರಿ. ಕ್ರಿಯಾಶೀಲತೆಯು ನಿಮ್ಮ ಅಧಿಕಾರಕ್ಕೆ ಪೂರಕವಾಗಿರುವುದು. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು.

ಕುಂಭ ರಾಶಿ:

ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಮನೆಯವರು ನಿಮ್ಮ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಬಹುದು. ಇಂದು ನಿಮಗಾಗಿ ಯಾರಾದರೂ ಸಹಕಾರವನ್ನು ನೀಡಲು ಬರಬಹುದು. ಹೆಚ್ಚುತ್ತಿರುವ ವೆಚ್ಚಗಳನ್ನು ಕಡಿವಾಣ ಹಾಕಿಕೊಳ್ಳಿ. ಉನ್ನತ ಸ್ಥಾನಕ್ಕೆ ಹೋಗುವ ಆಯ್ಕೆಯ ಪಟ್ಟಿಯಲ್ಲಿ ನೀವಿರುವಿರಿ.

ಮೀನ ರಾಶಿ :

ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ರಾಜಕೀಯ ನಾಯಕರಿಗೆ ಅನಿರೀಕ್ಷಿತ ಬೆಂಬಲ. ಕಾರ್ಯಕ್ಕೆ ಮತ್ತಷ್ಟು ಉತ್ಸಾಹ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಷಾಢಾ, ಯೋಗ : ವರಿಯಾನ್, ಕರಣ : ತೈತಿಲ, ಸೂರ್ಯೋದಯ – 06 – 16 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:59 – 15:31, ಯಮಗಂಡ ಕಾಲ 06:16 – 07:49, ಗುಳಿಕ ಕಾಲ 19:21 – 10:54

-ಲೋಹಿತ ಹೆಬ್ಬಾರ್-8762924271 (what’s app only)

Follow Us