AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ಧೋರಣೆ

ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ. ಏಪ್ರಿಲ್ 21 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ಧೋರಣೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 21, 2024 | 12:12 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಉತ್ತರಾ ಫಲ್ಗುಣೀ, ಯೋಗ: ವ್ಯಾಘಾತ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 05:13 ರಿಂದ 06:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:31 ರಿಂದ 02:05 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ 05:13ರ ವರೆಗೆ.

ತುಲಾ ರಾಶಿ: ನಿಮ್ಮ ಪ್ರಯತ್ನವು ಹೇಗೇ ಇದ್ದರೂ ದೈವದ ಯೋಜನೆ ಬೇರೆಯೇ ಇರುತ್ತದೆ ಎನ್ನುವ ಸತ್ಯವು ಅರಿವಿಗೆ ಬರಲಿದೆ. ದುಃಖಿಸುವ ಅಗತ್ಯವಿಲ್ಲ. ಅವನ ಸೃಷ್ಟಿಯಲ್ಲಿ ಎಲ್ಲವೂ ಸಹಜವೇ. ತಂದೆಯಿಂದ ಧನಸಹಾಯ ಆಗಲಿದೆ. ಸಂಗಾತಿಯ ಅನ್ವೇಷಣೆಯಲ್ಲಿ ನೀವು ತೊಡಗಿಕೊಳ್ಳುವಿರಿ. ಯಾರ ಮೇಲಾದರೂ ಪ್ರೀತಿಯು ಉಂಟಾಗಬಹುದು. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಜಾಹಿರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ಅಹಂಕಾರದಿಂದ ದೂರವಿರಲು ಆಗದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು.

ವೃಶ್ಚಿಕ ರಾಶಿ: ಇಂದು ಮನಸ್ಸು ಹಾಗು ದೇಹವು ವಿಶ್ರಾಂತಿಯನ್ನು ಬಯಸಲಿವೆ. ಮನೆಯಲ್ಲಿ ನಡೆಯುವ ಕಲಹದಿಂದ ನೀವು ಬೇಸರಗೊಳ್ಳಬಹುದು. ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ನಿಮ್ಮ ಧೋರಣೆಯನ್ನು ಬದಲಿಸಿಕೊಳ್ಳಿ. ಅನಿವಾರ್ಯದ ಪ್ರಯಾಣವು ನಿಮ್ಮನ್ನು ಹೈರಾಣ ಮಾಡುವುದು. ಆರ್ಥಿಕವಾದ ಹೂಡಿಕೆಯತ್ತ ನಿಮ್ಮ ಗಮನ ಹರಿಸುವಿರಿ. ಶೇರ್ ಮಾರುಕಟ್ಟೆಯಲ್ಲಿ ಹಣವನ್ನು ಹೂಡಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಕುಟುಂಬ ಸದಸ್ಯರಿಗೆ ಸಮಯ ನೀಡಿ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ.

ಧನು ರಾಶಿ: ಸುಮ್ಮನೆಯೂ ಯಾರನ್ನೂ ಅಪಮಾನ ಮಾಡುವುದು ಬೇಡ. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಬಂಧುಗಳ‌ ಕಡೆಯಿಂದ ಅನಿರೀಕ್ಷಿತ ಸುದ್ದಿಯನ್ನು ನೀವು ಕೇಳಬೇಕಾಗಬಹುದು. ಕುಟುಂಬದವರ ಜೊತೆ ಪ್ರೀತಿಯಿಂದ ಮಾತನಾಡಿ. ಉದ್ಯೋಗದ ಸ್ಥಳದಲ್ಲಿ ಸ್ವಲ್ಪ ಹಿನ್ನಡೆಯ ಸಾಧ್ಯತೆ ಇದೆ. ಉತ್ತಮ ಮಾತುಗಳು ನಿಮ್ಮ ನೆಮ್ಮದಿಗೆ ಸಹಾಯಕವಾಗಲಿದೆ. ನಿಮ್ಮ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರಬಹುದು. ಉತ್ತಮ ಕೆಲಸವನ್ನು ನಷ್ಟ ಮಾಡಿಕೊಳ್ಳುವಿರಿ. ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ವಿದೇಶದ ಜೊತೆಗೆ ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು.

ಮಕರ ರಾಶಿ: ಸಂಗಾತಿಯ ಮಾತುಗಳು ನಿಮ್ಮ ಉತ್ಸಾಹವನ್ನು ಹೆಚ್ಚಿಸಬಹುದು. ವೇಗವಾಗಿ ಹಣದಲ್ಲಿ ಅಭಿವೃದ್ಧಿಯ ಕಾಣುವ ಬಗ್ಗೆ ಬಯಕೆ ಇರವುದು. ನಿಮ್ಮ ಸಂತೋಷದಾಯಕ ಮತ್ತು ಶಕ್ತಿಯುತ ವರ್ತನೆಯು ನಿಮ್ಮವರಿಗೆ ಸಂತೋಷವನ್ನು ಕೊಡುವುದು. ಪ್ರೀತಿಯ ವಿಷಯಗಳಲ್ಲಿ ತಪ್ಪು ಮಾಡಿಕೊಳ್ಳುವ ಸಾಧ್ಯತೆ ಇದೆ. ನೀವು ತಮ್ಮ ಹಠಮಾರಿತನದಿಂದ ಬೇರೆಯವರ ಹೃದಯವನ್ನು ನೋಯಿಸಬಹುದು. ನೇರ ಮಾತುಗಳು ನಿಮ್ಮ ಬೇರೆ ಮುಖವನ್ನು ತೋರಿಸುವುದು. ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.

ಕುಂಭ ರಾಶಿ: ಇಂದು ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲವು ಬಲವನ್ನು ಕೊಡುವುದು. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತನಾಡಿಕೊಳ್ಳಬಹುದು. ಯಾರಿಗೂ ಸಲಹೆಯನ್ನು ಕೊಡಲು ಇಂದು ಹೋಗಬೇಡಿ. ನಿಮ್ಮನ್ನೇ ಗುರಿಯಾಗಿಸಿಯಾರು. ವಸ್ತುಗಳ ಖರೀದಿಯಿಂದ ಉಂಟಾದ ಧನದ ವ್ಯಯವು ನಿಮ್ಮಲ್ಲಿ ಆತಂಕವನ್ನು ಉಂಟುಮಾಡಲಿದೆ. ದೂರದ ಪ್ರಯಾಣ ಸುಖಕರವಲ್ಲ. ಭೂಮಿಯ ವ್ಯವಹಾರದಲ್ಲಿ ನಷ್ಟವಾಗಬಹುದು. ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಡಬೇಕಾಗುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು.

ಮೀನ ರಾಶಿ; ಇಂದು ಹಣದ ವಿಚಾರವಾಗಿ ಸಣ್ಣ ಕಲಹಗಳು ಸಂಗಾತಿಯ ನಡುವೆ ನಡೆಯಬಹುದು. ವೃತ್ತಿಯಲ್ಲಿ ನಿಮಗೆ ಸಂತೋಷದ ವಾತಾವರಣವು ಇರಲಿದೆ. ಸಮಾರಂಭಗಳಿಗೆ ಹೋಗಿ ಆಪ್ತರೊಂದಿಗೆ ಸಮಾಲೋಚನೆ ನಡೆಸಲಿದ್ದೀರಿ. ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸವಾಗಲಿದೆ. ಸ್ವಂತ ಉದ್ಯೋಗಿಗಳಿಗೆ ಶುಭವಾಗಲಿದೆ. ಕಛೇರಿ ಕೆಲಸದಿಂದ ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಮನೆಯವರ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ