Horoscope: ರಾಶಿ ಭವಿಷ್ಯ; ಈ ರಾಶಿಯವರ ಮೇಲೆ ಕಳ್ಳತನದ ಅಪವಾದವು ಬರಬಹುದು ಎಚ್ಚರ!

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 30 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಈ ರಾಶಿಯವರ ಮೇಲೆ ಕಳ್ಳತನದ ಅಪವಾದವು ಬರಬಹುದು ಎಚ್ಚರ!
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 30, 2024 | 12:10 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ 15:39 ರಿಂದ 17:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 9:21 ರಿಂದ 10:55 ರ ವರೆಗೆ, ಗುಳಿಕ ಕಾಲ 12:30 ರಿಂದ 14:05ರ ವರೆಗೆ.

ಸಿಂಹ ರಾಶಿ: ನಿಮ್ಮ ಮನೆಗೆ ಅತಿಥಿಗಳ ಆಗಮನವಾಗಲಿದೆ. ವಿವಾಹದ ಪ್ರಸ್ತಾಪಗಳು ನಿಮಗೆ ಖುಷಿ ಕೊಡುವುದು. ವಿವಾಹವು ಯೋಜನೆಗೊಳ್ಳದೇ ಬೇಸರವಾಗಿ ಮನೆಯಲ್ಲಿ ಕಲಹಗಳು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ‌. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವು ಆಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಆಹಾರ ಸೇವಿಸುವಾಗ ಆರೋಗ್ಯದ ಬಗ್ಗೆಯೂ ಗಮನವಿರಲಿ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ.

ಕನ್ಯಾ ರಾಶಿ: ನಿಮ್ಮ ಮೇಲೆ ಕಳ್ಳತನದ ಅಪವಾದವು ಬರಬಹುದು. ನಿಮ್ಮ ಮೇಲಧಿಕಾರಿಗಳನ್ನು ನಿಮ್ಮ ಕಡೆಗೆ ಇರುವಂತೆ ನೋಡಿಕೊಳ್ಳುವಿರಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಟ್ಟುಬಿಡಿ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗಿರುತ್ತೀರಿ. ನಿಮ್ಮ ಬೆಳವಣಿಗೆಯನ್ನು ಕಂಡು ಮನೆಯಲ್ಲಿ ಸಂತಸಗೊಳ್ಳಬಹುದು. ಕೆಲವು ತೀರ್ಮಾನದ ವಿಚಾರದಲ್ಲಿ ಮನಸ್ಸು ಗೊಂದಲವಾಗಿ ಇರುವುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಯಾರನ್ನೂ ದೂರದಿಂದಲೇ ನಿರ್ಣಯಿಸುವುದು ಬೇಡ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಗುರುವನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆಯುವಿರಿ.

ತುಲಾ ರಾಶಿ: ನೀವು ಪಾಲುದಾರಿಕೆಯನ್ನು ಬದಲಾಯಿಸುವಿರಿ. ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಹಿರಿಯರ, ಅನುಭವಿಗಳ ಮಾರ್ಗದರ್ನವನ್ನು ಪಡೆಯಿರಿ. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಆಸೆಯಿಂದ ದುಃಖಿಸ ಏಕಾಗುವುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಆಂತರಿಕ ಕಲಹವು ಬಹಿರಂಗವಾಗಬಹುದು.

ವೃಶ್ಚಿಕ ರಾಶಿ: ನಿಮ್ಮ ಪರಿಶ್ರಮದ ಬಗ್ಗೆ ವಿಶ್ವಾಸವಿರಲಿದೆ. ಸ್ವಾವಲಂಬಿಯಾಗಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಅನಾರೋಗ್ಯವು ನಿಮ್ಮ ನಿಷ್ಕಾಳಜಿಯಿಂದ ಹೆಚ್ಚಾಗಲಿದೆ. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ರಾಜಕೀಯ ಲಾಭವನ್ನು ನೀವು ಪಡೆಯುವಿರಿ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ವಹಿಸಿಕೊಂಡ ಕಾರ್ಯವನ್ನು ಪೂರ್ಣ ಮಾಡಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಒತ್ತಡದ ದಿನವಾಗಲಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ