Horoscope: ವ್ಯಾಪಾರದಲ್ಲಿ ನಿಮ್ಮ ಸ್ಥಾನವು ಹೆಚ್ಚುವುದು, ಶ್ರಮಕ್ಕೆ ಯೋಗ್ಯ ಫಲ ಲಭಿಸಲಿದೆ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 14, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ವ್ಯಾಪಾರದಲ್ಲಿ ನಿಮ್ಮ ಸ್ಥಾನವು ಹೆಚ್ಚುವುದು, ಶ್ರಮಕ್ಕೆ ಯೋಗ್ಯ ಫಲ ಲಭಿಸಲಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 14, 2023 | 12:10 AM

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 14) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಗುರುವಾರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಗಂಡ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:51 ರಿಂದ 03:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:50 ರಿಂದ 08:14ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:39 ರಿಂದ 11: 03ರ ವರೆಗೆ.

ಮೇಷ ರಾಶಿ: ಅಂತರಂಗವು ಇಂದು ಯಾವುದೇ ಉದ್ವೇಗಕ್ಕೆ ಸಿಲುಕದೆ ಶಾಂತವಾಗಿ ಇರುವುದು. ವ್ಯಾಪಾರದ ಕೆಲವು ನಿರ್ಧಾರಗಳಿಗೆ ಅಪರಿಚಿತರಿಂದ ಸಲಹೆಯು ಸಿಗುವುದು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ತೊಂದರೆ ಆದೀತು. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ನಿಮ್ಮದಲ್ಲದ ದ್ರವ್ಯವನ್ನು ನೀವು ಇಟ್ಟುಕೊಳ್ಳಲು ಬಯಸುವುದಿಲ್ಲ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಆಗದು. ನಿಮ್ಮ ತಪ್ಪು ಕೆಲಸವನ್ನು ಆಪ್ತರ ಜೊತೆ ಹೇಳಿ ಅದನ್ನು ಕಳೆದುಕೊಳ್ಳಿ. ಮೃದುವಾದ ಮಾತನ್ನು ಹೆಚ್ಚು ಆಡುವಿರಿ.

ವೃಷಭ ರಾಶಿ: ಭವಿಷ್ಯದ ಬಗ್ಗೆ ಬಹಳ ನಂಬಿಕೆಯನ್ನು ಇಟ್ಟುಕೊಂಡು ಮುಂದುವರಿಯುವಿರಿ. ಯಾರ ಮಾತುಗಳೂ ನಿಮಗೆ ಪಥ್ಯವಾದೀತು. ದ್ವಂದ್ವ ನಿಲುವನ್ನು ನೀವು ಸರಿ ಮಾಡಿಕೊಳ್ಳುವ ಅವಶ್ಯಕತೆ ಇರುವುದು. ಸಮಯವನ್ನು ನೀವು ವ್ಯರ್ಥ ಮಾಡಿಕೊಂಡು ಪಶ್ಚಾತ್ತಾಪಪಡುವಿರಿ. ಸದುಪಯೋಗ ಮಾಡಿಕೊಳ್ಳುವತ್ತ ಗಮನವಿರಲಿ. ತಾಯಿಯ ಕಡೆಯಿಂದ ನಿಮಗೆ ಸಹಾಯವು ಸಿಗಬಹುದು. ಉನ್ನತ ವ್ಯಾಸಂಗದಲ್ಲಿ ಆಸಕ್ತಿಯು ಕಡಿಮೆ ಆಗುವುದು. ಮನೆಯ ಕೆಲಸದಿಂದ ಆಯಾಸವಾಗಬಹುದು. ನಿಮ್ಮದಾದ ಸ್ವಂತಮನೆಯು ಬೇಕೆನ್ನಿಸಬಹುದು. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ನಿಮ್ಮ ಹಳೆಯ ವಸ್ತುಗಳನ್ನು ಯಾರಿಗಾದರೂ ನಿಶ್ಶುಲ್ಕವಾಗಿ ಕೊಡುವಿರಿ. ಸಂಗಾತಿಯ ಜೊತೆ ನಡೆದುಕೊಳ್ಳುವ ರೀತಿಯು ಬದಲಾದೀತು.

ಮಿಥುನ ರಾಶಿ: ಆರೋಗ್ಯವು ದಿನದಿಂದ ದಿನಕ್ಕೆ ಕ್ಷೀಣಿಸಿದರೂ ಮನಸ್ಸು ಸ್ಥೈರ್ಯವನ್ನು ಉಳಿಸಿಕೊಳ್ಳುವುದು. ನೀವು ಹಳೆಯ ಸ್ನೇಹವು ಪುನಃ ನವೀಕರಣವಾಗುವುದು. ವ್ಯಾಪಾರದಲ್ಲಿ ನಿಮ್ಮ ಸ್ಥಾನವು ಹೆಚ್ಚಬಹುದು. ನಿಮ್ಮದಾದ ಪರಿಧಿಯನ್ನು ಬಿಟ್ಟು ಹೊರಬರಲಾರಿರಿ. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ಮಹಿಳೆಯರು ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ಮಾಡಬೇಕಾಗುವುದು. ಮಿತ್ರರ ನಡುವೆ ವೈಮನಸ್ಯ ಬರಬಹುದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಫಲರಾಗುವಿರಿ. ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಹಾವಾಸದಿಂದ ನಿಮಗೆ ಅಪವಾದವು ಬರಬಹುದು. ಕುಟುಂಬದ ಜೊತೆ ಬಹಳ ದಿನಗಳ ಅನಂತರ ಸಂಯೋಷದ ಸಮಯವನ್ನು ಕಳೆಯುವಿರಿ. ಸಂಗಾತಿಯನ್ನು ಹೂಡಿಕೆ ಮಾಡುವಂತೆ ಪ್ರೇರಣೆ ಕೊಡುವಿರಿ.

ಕರ್ಕ ರಾಶಿ: ಸ್ವಂತಕ್ಕೆ ಪ್ರಯೋಜನವಿಲ್ಲದ ಯಾವ ಕಾರ್ಯವನ್ನೂ ನೀವು ಮಾಡಲಾರಿರಿ. ಕೋಪಗೊಂಡು ಇಡೀ ದಿನವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನಿಮಗೇ ಸರಿಯಾದ ಸ್ಥಿರತೆಯನ್ನು ಕಂಡುಕೊಳ್ಳಲಾಗದು. ನಿಮ್ಮ ಭಾವನೆಗಳನ್ನು ಯಾರ ಜೊತೆಯೂ ಪ್ರಕಟಗೊಳಿಸುವುದಿಲ್ಲ. ಅಲ್ಪ ಲಾಭಕ್ಕೆ ನೀವು ತೃಪ್ತಿ ಪಡಬೇಕಾಗುವುದು. ಸ್ತ್ರೀಯರ ವಿಚಾರದಲ್ಲಿ ನೀವು ಜಾಗರೂಕತೆಯಿಂದ ಇರಬೇಕಾಗುವುದು. ನಿಮಗೆ ಬರಬೇಕಾದ ಹಣವು ನಿಮ್ಮ ಕೈಗೆ ಸಿಗದು. ಸಂಗಾತಿಯ ಮೇಲೆ ಬೇಸರದ ಭಾವವೂ ಮೂಡುವ ಸಾಧ್ಯತೆ ಇದೆ. ಬೆಳಗಿನಿಂದಲೇ ಮನಸ್ಸಿಗೆ ಕಿರಿಕಿರಿ ಉಂಟಾದೀತು. ನಿಮ್ಮ ಅಶಿಸ್ತಿನ ವರ್ತನೆಯಿಂದ ಸಹೋದ್ಯೋಗಿಗಳ ನಡುವೆ ಮಾತುಕತೆಗಳು ಆಗಬಹುದು. ನಿಮ್ಮನ್ನು ಯಾರೋ ಗಮನಿಸುತ್ತಿದ್ದಾರೆ ಎಂಬ ಭಯವು ಕಾಡುವುದು. ಇಂದು ನೀವು ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುವಿರಿ. ಅತಿಥಿ ಸತ್ಕಾರವನ್ನು ಮಾಡಲು ಉತ್ಸಾಹವಿರುವುದು.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ