AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿ ಜನರ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 16, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ದಿನಭವಿಷ್ಯ; ಈ ರಾಶಿ ಜನರ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 16, 2024 | 6:43 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 16) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ 03:32 ರಿಂದ 04:57ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:52 ರಿಂದ 11:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:42 ರಿಂದ 02:07ರ ವರೆಗೆ.

ಮೇಷ ರಾಶಿ: ಇಂದು ಬೇರೆಯವರ ಕಷ್ಟಕ್ಕೆ ಸ್ಪಂದಿಸುವುದು ನಿಮ್ಮ ಕರ್ತವ್ಯವೂ ಆಗಿದೆ. ಯಾರನ್ನೂ ನಿಕೃಷ್ಟವಾಗಿ ಕಾಣುವುದು ಬೇಡ. ಅವರವರ ಶಕ್ತಿ, ಸಾಮರ್ಥ್ಯಗಳು ಅವರಿಗಿರುತ್ತವೆ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ನಿರ್ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಬರಹಗಳು ನಿಮ್ಮ ಆದಾಯಕ್ಕೆ ಹೆಚ್ಚಿನ ಒತ್ತನ್ನು ಕೊಡುವುದು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಯಾವುದನ್ನು ಖಂಡಿಸುವಾಗಲೂ ಅದರ ಪೂರ್ಣ ಮಾಹಿತಿ ಇರಲಿ. ಸ್ನೇಹಿತರ ಸಹವಾಸ ಅಧಿಕಾಗುವುದು.

ವೃಷಭ ರಾಶಿ: ನಿಮ್ಮ ಪೂರ್ವ ನಿಶ್ಚಿತ ಯೋಜನೆಯನ್ನು ಬದಲಾಯಿಸುವಿರಿ. ನಿಮ್ಮ ದೌರ್ಬಲ್ಯವನ್ನು ಉಪಯೋಗಿಸಿಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ನಯವಂಚಕತನವು ನಿಮಗೆ ಪ್ರಿಯವಾಗಬಹುದು. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶ ಪ್ರಯಾಣದ ಗುಂಗಿನಿಂದ ಹೊರಬನ್ನಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಬಹುದು. ವಿವಾಹಕ್ಕೆ ದಿನವನ್ನು ನಿರ್ಧರಿಸುವಿರಿ. ಮಕ್ಕಳ ಜೊತೆ ಸಂತೋಷದ ಕ್ಷಣವು ಇರಲಿದೆ. ಶ್ರದ್ಧೆಯಿಂದ ಯಾವುದನ್ನೂ ಇಂದು ಮಾಡಲಾರಿರಿ.

ಮಿಥುನ ರಾಶಿ: ವ್ಯಾಪಾರಕ್ಕೆ ಬೇಕಾದ ಬಂಡವಾಳವನ್ನು ಹಾಕಲು ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ವ್ಯವಹಾರದ ಪ್ರಜ್ಞೆಯನ್ನು ಇಟ್ಟುಕೊಂಡು ಮಾತನಾಡಿ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮ ಹುಸಿತನವು ಪ್ರಕಟವಾಗಬಹುದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನದ ಖರೀದಿಸುವ ಆಸೆಯು ಪ್ರಬಲವಾಗಬಹುದು.

ಕಟಕ ರಾಶಿ: ಭವಿಷ್ಯದ ಜೀವನ ನಿರ್ವಹಣೆಯ ಬಗ್ಗೆ ಚಿಂತಾಕ್ರಾಂತರಾಗುವಿರಿ. ಕನಸನ್ನು ಕಾಣುವುದು ಯೋಗ್ಯವೇ. ಆದರೆ ಸಾಮರ್ಥ್ಯವನ್ನೂ ಅರಿತುಕೊಳ್ಳುವುದು ಮುಖ್ಯವಾಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಕುಟುಂಬದ ಸಮಸ್ಯೆಯನ್ನು ಹಾಗೆಯೇ ಬಿಟ್ಟುಬಿಡುವಿರಿ. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರುವುವು. ನಿಮ್ಮ ಕಾರ್ಯವೇ ಉತ್ತರವಾಗಿರಲಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ಚುರುಕುತನವು ನಿಮಗೆ ಸಾಧ್ಯವಾಗದು.

-ಲೋಹಿತ ಹೆಬ್ಬಾರ್ – 8762924271 (what’s app only)